Andhra Pradesh: ಸರಣಿ ರಸ್ತೆ ಅಪಘಾತದಲ್ಲಿ 5 ಜನ ಸಾವು
ರಾಷ್ಟ್ರೀಯ ಹೆದ್ದಾರಿ-16ರಲ್ಲಿ ವೇಗವಾಗಿ ಬಂದ ಲಾರಿಯೊಂದು ರಸ್ತೆ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ.
ಅಮರಾವತಿ: ರಾಷ್ಟ್ರೀಯ ಹೆದ್ದಾರಿ-16ರಲ್ಲಿ ವೇಗವಾಗಿ ಬಂದ ಲಾರಿಯೊಂದು ರಸ್ತೆ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ. ಗುರುವಾರ ಮಧ್ಯರಾತ್ರಿ ಪ್ರತಿಪಾಡು ಎಂಬಲ್ಲಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಎರಡು ಲಾರಿಗಳ ಚಾಲಕರು ಮತ್ತು ಕ್ಲೀನರ್ ಸ್ಥಳದಲ್ಲೇ ಸಜೀವ ದಹನಗೊಂಡರು, ಕ್ಯಾಬಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ: Crime News: 1.90 ಕೋಟಿ ರೂ. ಇನ್ಷುರೆನ್ಸ್ ಹಣಕ್ಕಾಗಿ ಅಪಘಾತದಲ್ಲಿ ಹೆಂಡತಿಯನ್ನು ಕೊಂದ ಗಂಡ!
ಘಟನೆಯಲ್ಲಿ ಎರಡು ಲಾರಿಗಳು ಸುಟ್ಟು ಕರಕಲಾಗಿವೆ. ಅತಿವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
ಬೆಂಗಳೂರಿನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ, ಒಬ್ಬ ಸಾವು
ಈ ಘಟನೆಯ ನಂತರ ಶುಕ್ರವಾರ ಮುಂಜಾನೆ ಹೊತ್ತಿಗೆ ಚಿತ್ತೂರು ಜಿಲ್ಲೆಯ ಪಲಮನೇರು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ರಸ್ತೆಯಿಂದ ಸ್ಕಿಡ್ ಆಗಿ ಪಲ್ಟಿಯಾಗಿದೆ.
ಮೃತ ಪ್ರಯಾಣಿಕನನ್ನು ಗುಂಟೂರು ಮೂಲದವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ಪಿಟಿಐಗೆ ತಿಳಿಸಿದೆ.
ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:48 pm, Fri, 2 December 22