ಆನೇಕಲ್: ಬಾರ್​ನಲ್ಲಿ ಶುರುವಾದ ಹಣದ ಗಲಾಟೆ ಕೊಲೆಯಲ್ಲಿ ಅಂತ್ಯ;1,500 ರೂಪಾಯಿ ವಿಚಾರಕ್ಕೆ ಹಾರಿಹೋಯ್ತು ಪ್ರಾಣ

ಕೇವಲ 1,500 ರೂಪಾಯಿ ವಿಚಾರಕ್ಕೆ ಕೊಲೆ ನಡೆದಿರುವ ಘಟನೆ ಪರಪ್ಪನ ಅಗ್ರಹಾರ (Parappana Agrahara)ಠಾಣಾ ವ್ಯಾಪ್ತಿಯ ಸಿಂಗಸಂದ್ರದಲ್ಲಿ ನಡೆದಿದೆ. ಬಾರ್​(Bar)ನಲ್ಲಿ ಶುರುವಾದ ಹಣದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸ್ನೇಹಿತನಿಗೆ ಹಣ ಕೊಡಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಆನೇಕಲ್: ಬಾರ್​ನಲ್ಲಿ ಶುರುವಾದ ಹಣದ ಗಲಾಟೆ ಕೊಲೆಯಲ್ಲಿ ಅಂತ್ಯ;1,500 ರೂಪಾಯಿ ವಿಚಾರಕ್ಕೆ ಹಾರಿಹೋಯ್ತು ಪ್ರಾಣ
ಮೃತ ವ್ಯಕ್ತಿ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 06, 2023 | 2:42 PM

ಬೆಂಗಳೂರು ಗ್ರಾಮಾಂತರ, ಡಿ.06: ಕೇವಲ 1,500 ರೂಪಾಯಿ ವಿಚಾರಕ್ಕೆ ಕೊಲೆ ನಡೆದಿರುವ ಘಟನೆ ಪರಪ್ಪನ ಅಗ್ರಹಾರ (Parappana Agrahara)ಠಾಣಾ ವ್ಯಾಪ್ತಿಯ ಸಿಂಗಸಂದ್ರದಲ್ಲಿ ನಡೆದಿದೆ. ಬಾರ್​(Bar)ನಲ್ಲಿ ಶುರುವಾದ ಹಣದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸ್ನೇಹಿತನಿಗೆ ಹಣ ಕೊಡಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಬಾರ್​ವೊಂದರಲ್ಲಿ ಗೋಪಾಲ್​, ಶಶಿ ಹಾಗೂ ಕರಿಗೌಡ ಎಂಬುವವರು ಮದ್ಯ ಸೇವಿಸುತ್ತಿದ್ದರು. ಇದೇ ವೇಳೆ ಅದೇ ಬಾರ್​ಗೆ ಪ್ರದೀಪ್ ಎಂಬುವವರ​ ಜೊತೆ ಆರೋಪಿ ಗಿರೀಶ್ ಬಂದಿದ್ದಾರೆ. ಕರಿಗೌಡಗೆ 1,500 ರೂಪಾಯಿಯನ್ನು ಆರೋಪಿ ಗಿರೀಶ್​ಗೆ ಕೊಡಬೇಕಿತ್ತು. ಅದರಂತೆ ಆತ ತನ್ನ ಹಣ ಕೇಳಿದಾಗ, ಗಿರೀಶ್ ಅವಾಜ್​ ಹಾಕಿದ್ದ. ಬಳಿಕ ಮಧ್ಯಪ್ರವೇಶಿಸಿದ ಗೋಪಾಲ್ ಎಂಬಾತ, ಗಿರೀಶ್​ಗೆ ಹೊಡೆದು ಹಣ ಕೊಡಿಸಿದ್ದ​.

ಸ್ನೇಹಿತನ ಹಣ ಕೊಡಿಸಿ ಕಿರಿಕ್ ಮಾಡಿಕೊಂಡು ಹೆಣವಾದ ಗೋಪಾಲ್

ಇದಾದ ಬಳಿಕ ಗಿರೀಶ್, ಶಶಿಗೆ ಪೋನ್ ಮಾಡಿ ಅವಾಚ್ಯ ಶಬ್ಧಗಳಲ್ಲಿ ನಿಂದಿಸಿದ್ದ. ಆಮೇಲೆ ಗೋಪಾಲ್, ಕರೆಗೌಡ ಹಾಗೂ ಶಶಿಧರ್, ಗಿರೀಶ್ ಮನೆಗೆ ಹೋಗಿದ್ದರು. ಗಿರೀಶ್​ಗೆ ಸರಿಯಾಗಿ ಮಾತನಾಡುವಂತೆ ಆತನ ಪತ್ನಿ ಬಳಿಯಲ್ಲಿ ಮೂವರು ಹೇಳಿದ್ದರು. ಈ ವೇಳೆ ಅಡುಗೆ ಮನೆಯಿಂದ ಚಾಕು ತಂದು ಬೆನ್ನ ಹಿಂದೆ ಇಟ್ಟುಕೊಂಡಿದ್ದ ಗಿರೀಶ್, ಗೋಪಾಲ್ ಎದೆಗೆ ಚಾಕುವಿನಿಂದ ಚುಚ್ಚಿ ಮನೆಯಿಂದ ಎಸ್ಕೇಪ್ ಆಗಿದ್ದ.

ಇದನ್ನೂ ಓದಿ:ಚಿಕ್ಕಬಳ್ಳಾಫುರ: ತಂಗಿ ಮೇಲಿನ ಕೋಪಕ್ಕೆ ಆಕೆಯ ಆರು ವರ್ಷದ ಮಗನನ್ನು ಕೊಲೆ ಮಾಡಿ ಹೂತು ಹಾಕಿದ ಅಕ್ಕ

ಕೊಲೆ ಮಾಡಿ ಎಸ್ಕೇಪ್​ ಆದ ಆರೋಪಿಗಾಗಿ ಹುಡುಕಾಟ

ಇನ್ನು ಆತ ಚಾಕು ಇರಿಯುತ್ತಿದ್ದಂತೆ ಆತನ ಸ್ನೇಹಿತರು, ಗೋಪಾಲ್​​ನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಎರಡು ದಿನಗಳ ಬಳಿಕ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾನೆ. ಆರೋಪಿ ಗಿರೀಶ್​ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದ್ದು, ಬಾರ್​ನಲ್ಲಿ ನೂಕಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?