ಆನೇಕಲ್: ಜಾಗದ ವಿಚಾರವಾಗಿ ಗಲಾಟೆ: ಎದುರು ಮನೆಯವರಿಂದ ವ್ಯಕ್ತಿಯ ಕೊಲೆ

ನಿವೇಶನ ಜಾಗದ ವಿಚಾರಕ್ಕೆ ಪೊಲೀಸ್ ಠಾಣೆ ಹಿಂಭಾಗದ ಏರಿಯಾದಲ್ಲಿ ವ್ಯಕ್ತಿಯ ಬರ್ಬರ ಕೊಲೆ ಮಾಡಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿಯಲ್ಲಿ ನಡೆದಿದೆ. ದುಷ್ಕರ್ಮಿಗಳು ವ್ಯಕ್ತಿಯನ್ನ ಕೊಚ್ಚಿ ಕೊಲೆ ಮಾಡುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಆನೇಕಲ್: ಜಾಗದ ವಿಚಾರವಾಗಿ ಗಲಾಟೆ: ಎದುರು ಮನೆಯವರಿಂದ ವ್ಯಕ್ತಿಯ ಕೊಲೆ
ಮೃತ ರಮೇಶ್​, ಆರೋಪಿಗಳು
Follow us
ರಾಮು, ಆನೇಕಲ್​
| Updated By: ಗಂಗಾಧರ​ ಬ. ಸಾಬೋಜಿ

Updated on: Oct 30, 2023 | 12:40 PM

ಆನೇಕಲ್, ಅಕ್ಟೋಬರ್​​​​​ 30: ನಿವೇಶನ ಜಾಗದ ವಿಚಾರಕ್ಕೆ ಪೊಲೀಸ್ ಠಾಣೆ ಹಿಂಭಾಗದ ಏರಿಯಾದಲ್ಲಿ ವ್ಯಕ್ತಿಯ ಬರ್ಬರ ಕೊಲೆ (Murder) ಮಾಡಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿಯಲ್ಲಿ ನಡೆದಿದೆ. ಹೆಬ್ಬಗೋಡಿಯ ರಮೇಶ್ ಎಂಬಾತನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ದುಷ್ಕರ್ಮಿಗಳು ವ್ಯಕ್ತಿಯನ್ನ ಕೊಚ್ಚಿ ಕೊಲೆ ಮಾಡುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಮೇಶ್ ಮನೆಯ ಎದುರು ಮನೆಯವರು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಹೆಬ್ಬಗೋಡಿಯಲ್ಲಿ ಮನೆ ಕಟ್ಟುವ ವಿಚಾರಕ್ಕೆ ಮೃತ ರಮೇಶ್​ ಹಾಗೂ ಕೊಲೆ ಆರೋಪಿಗಳ ನಡುವೆ ಗಲಾಟೆ ನಡೆಯುತ್ತಿತ್ತು. ಸರ್ಕಾರದಿಂದ ನೀಡಲಾಗಿದ್ದ ಜಾಗದಲ್ಲಿ ರಮೇಶ್ ನಿನ್ನೆ ಮನೆಗೆ ಅಡಿಪಾಯ ಹಾಕಿದ್ದರು. ಇದೇ ಜಾಗವನ್ನು ಜಗದೀಶ್​​ ನನಗೆ ಸೇರಬೇಕು ಎಂದು ಆಗಾಗ ಗಲಾಟೆ ಮಾಡಿದ್ದ.

ಇದನ್ನೂ ಓದಿ: ತುಮಕೂರು: ಮಾಂಸಕ್ಕಾಗಿ ಬಾವಲಿಗಳ ಬೇಟೆ: ನಾಲ್ವರನ್ನು ಬಂಧಿಸಿದ ಅರಣ್ಯಾಧಿಕಾರಿಗಳು

ಹೆಬ್ಬಗೋಡಿ ನಗರಸಭೆಯಿಂದ ಈ ಜಾಗ ರಮೇಶ್​ಗೆ ಸೇರಿದ್ದು ಎಂದು ದಾಖಲೆ ನೀಡಲಾಗಿತ್ತು. ಇದೇ ವಿಚಾರಕ್ಕೆ ರಾತ್ರಿ 10.30 ರ ಸಮಯದಲ್ಲಿ ಮಾರಕಾಸ್ತ್ರಗಳ ಜೊತೆ ಬಂದು ನಿನ್ನೆ ರಾತ್ರಿ ರಮೇಶ್​ನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ದುಷ್ಕರ್ಮಿಗಳ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ದುಷ್ಕರ್ಮಿಗಳು ವ್ಯಕ್ತಿಯನ್ನಕೊಚ್ಚಿ ಕೊಲೆ ಮಾಡುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತ ರಮೇಶ್ ರಾತ್ರಿ ಅಡಿಪಾಯದ ಕೆಲಸ ಮಾಡಿಸುತ್ತಿದ್ದರು. ಏಕಾಏಕಿ ಮಾರಕಾಸ್ತ್ರಗಳನ್ನ ಹಿಡಿದು ಬಂದ ದುಷ್ಕರ್ಮಿಗಳು, ನಿರ್ಮಾಣ ಹಂತದ ನಿವೇಶನದ ಜಾಗದಲ್ಲಿಯೇ ರಮೇಶ್ ಮೇಲೆ ಅಟ್ಯಾಕ್ ಮಾಡಿದ್ದಾರೆ. ದುಷ್ಕರ್ಮಿಗಳ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಆಗಿದೆ.

ರಾತ್ರಿ ತೋಟಕ್ಕೆ ನೀರು ಹಾಯಿಸಲು ಹೋಗಿದ್ದ ರೈತ ಹಾವು ಕಡಿತ ಸಾವು    

ಹಾಸನ: ಹಾವು ಕಡಿದು ಯುವಕ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ‌ ದೇವರಗುಡ್ಡೇನಹಳ್ಳಿ ಗ್ರಾಮದಲ್ಲಿ ನಿನ್ನೆ ನಡೆದಿದೆ. ಅಭಿಲಾಷ್ (27) ಮೃತ ಯುವಕ. ಶನಿವಾರ ರಾತ್ರಿ ತೋಟಕ್ಕೆ ನೀರು ಹಾಯಿಸಲು ಹೋಗಿದ್ದಾಗ ಹಾವು ಕಡಿದಿದೆ. ಬಳಿಕ ತಕ್ಷಣ ಹೊಳೆನರಸೀಪುರ ಆಸ್ಪತ್ರೆಗೆ ಕರೆತರಲಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಇದನ್ನೂ ಓದಿ: ಗಲಾಟೆ ವೇಳೆ ಸೀರೆ ಹಿಡಿದು ವ್ಯಕ್ತಿ ಎಳೆದಾಡಿದ ಆರೋಪ: ಮನನೊಂದು ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

ಹೈನುಗಾರಿಕೆ ಹಾಗೂ ಕೃಷಿ ಮೂಲಕ ಜೀವನ ನಡೆಸುತ್ತಿದ್ದರು. ರಾತ್ರಿ ವೇಳೆ ಮಾತ್ರವೇ ಥ್ರೀ ಫೇಸ್ ಕರೆಂಟ್ ಹಿನ್ನೆಲೆಯಲ್ಲಿ ಬೆಳೆಗೆ ನೀರು ಹರಿಸಲು ಹೋಗಿದ್ದರು. ಸರ್ಕಾರದಿಂದ ಕೃಷಿಗೆ ರಾತ್ರಿ ಕರೆಂಟ್ ನೀತಿಯಿಂದ ಯುವ ರೈತ ಬಲಿಯಾಗಿದ್ದಾನೆ. ಹಳ್ಳಿ ಮೈಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ