ಯುಟರ್ನ್ ತೆಗೆದುಕೊಳ್ಳುವಾಗ ಬೈಕ್​ಗೆ ಬಿಎಂಟಿಸಿ ಬಸ್ ಡಿಕ್ಕಿ; ಯುವಕ ಯುವತಿ ಸಾವು

ಯುಟರ್ನ್ ತೆಗೆದುಕೊಳ್ಳುವಾಗ ಬಸ್ ಡಿಕ್ಕಿಯಾಗಿ ದುರ್ಘಟನೆ ನಡೆದಿದ್ದು, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಘಟಿಸಿದೆ.

ಯುಟರ್ನ್ ತೆಗೆದುಕೊಳ್ಳುವಾಗ ಬೈಕ್​ಗೆ ಬಿಎಂಟಿಸಿ ಬಸ್ ಡಿಕ್ಕಿ; ಯುವಕ ಯುವತಿ ಸಾವು
ಅಪಘಾತಕ್ಕೀಡಾದ ವಾಹನಗಳು
Follow us
TV9 Web
| Updated By: guruganesh bhat

Updated on:Sep 26, 2021 | 10:58 PM

ಆನೇಕಲ್: ಬೈಕ್​ಗೆ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಮೇಲಿದ್ದ ಯುವಕ, ಯುವತಿ ಸಾವನ್ನಪ್ಪಿದ ದುರ್ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ನಡೆದಿದೆ. ದಾವಣಗೆರೆ ಮೂಲದ ಪ್ರಭಾಕರ್(25), ಸಹನಾ‌(24) ಸಾವನ್ನಪ್ಪಿದ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಯುಟರ್ನ್ ತೆಗೆದುಕೊಳ್ಳುವಾಗ ಬಸ್ ಡಿಕ್ಕಿಯಾಗಿ ದುರ್ಘಟನೆ ನಡೆದಿದ್ದು, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಘಟಿಸಿದೆ.

ಧಾರವಾಡದಲ್ಲೂ ಅಪಘಾತ ಕಾರು ಮತ್ತು ಓಮಿನಿ ಮಧ್ಯೆ ರಸ್ತೆ ಅಪಘಾತವಾಗಿ ಗಾಯಾಳು ರಸ್ತೆ ಮಧ್ಯೆ ನೋವಿನಿಂದ ನರಳಾಡಿದ ದುರ್ಘಟನೆ ಧಾರವಾಡ-ಸವದತ್ತಿ ರಸ್ತೆಯಲ್ಲಿ ಘಟಿಸಿದೆ. ಧಾರವಾಡ ತಾಲೂಕಿನ ಅಮ್ಮಿನಬಾವಿ ಬಳಿ ಈ ದುರ್ಘಟನೆ ಸಂಭವಿಸಿದ್ದು ಕಾರು ಧಾರವಾಡದಿಂದ ಸವದತ್ತಿಗೆ ಪ್ರಯಾಣ ಬೆಳೆಸಿತ್ತು ಎಂದು ತಿಳಿದುಬಂದಿದೆ. ಕಾರು ಮತ್ತು ಓಮಿನಿ ನಡುವೆ ಓವರ್ ಟೇಕ್ ಮಾಡುವ ವೇಳೆ ಘಟನೆ ಸಂಭವಿಸಿದೆ. ಗಾಯಾಳುವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕನಕಪುರದ ಕಬ್ಬಾಳು ಬೆಟ್ಟದಲ್ಲಿ ಪ್ರೇಮಿಗಳಿಂದ ಆತ್ಮಹತ್ಯೆ ರಾಮನಗರ: ಕನಕಪುರ ತಾಲೂಕಿನ ಕಬ್ಬಾಳು ಬೆಟ್ಟದಲ್ಲಿ ಸೊಂಟಕ್ಕೆ ವೇಲ್ ಕಟ್ಟಿಕೊಂಡು ಬೆಟ್ಟದಿಂದ ಜಿಗಿದು ಸತೀಶ್ (21) ಮತ್ತು ಚಂದನಾ (21) ಎಂಬ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರೂ ಪ್ರೇಮಿಗಳಾಗಿದ್ದರು ಎಂದು ತಿಳಿದುಬಂದಿದೆ. ಇಬ್ಬರೂ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉರುಗಮ್ ನಿವಾಸಿಗಳು. ಸತೀಶ್ ತಮಿಳುನಾಡಿನ ಹೊಸೂರಿನಲ್ಲಿ ಟ್ಯಾಕ್ಸಿ ಚಾಲಕನಾಗಿದ್ದ. ಸತೀಶ್ ಮತ್ತು ಚಂದನಾ 3 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

1 ವರ್ಷದ ಹಿಂದೆ ಚಂದನಾ ಅವರನ್ನು ಕನಕಪುರದ ಸಮೀಪ ಮದುವೆ ಮಾಡಿಕೊಡಲಾಗಿತ್ತು. ಆದರೆ ಸೆಪ್ಟೆಂಬರ್ 22ರಂದು ಪತಿಯ ಮನೆಯಿಂದ ಚಂದನಾ ನಾಪತ್ತೆಯಾಗಿದ್ದರು. ಈಕುರಿತು ಕನಕಪುರ ಟೌನ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ:  

ದೇಸಾಯಿವಾಡೆ: ಶಂಕರ್ ನಾಗ್ ಅವರ ಜೋಕುಮಾರ ಸ್ವಾಮಿ ಚಿತ್ರ ಶೂಟಿಂಗ್ ನಡೆದದ್ದು ಇಲ್ಲೇ

ಹಾವೇರಿ: ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರಿಂದ ಜೋಕುಮಾರಸ್ವಾಮಿ ಹಬ್ಬ ಆಚರಣೆ; ಸಡಗರ ಸಂಭ್ರಮ

(Anekal bike and BMTC Bus accident in Electronic city U turn)

Published On - 9:53 pm, Sun, 26 September 21

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು