ಆನೇಕಲ್: ಕೌಟುಂಬಿಕ ಕಲಹ; ಪತ್ನಿ ಕೊಲೆಗೈದು ಪತಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು ಹೊರವಲಯದ ಆನೇಕಲ್(Anekal)​​ ತಾಲೂಕಿನ ಜಿಗಣಿ ಟೌನ್​ನಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿ ಕೊಲೆಗೈದು ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಜಿಗಣಿ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆನೇಕಲ್: ಕೌಟುಂಬಿಕ ಕಲಹ; ಪತ್ನಿ ಕೊಲೆಗೈದು ಪತಿ ಆತ್ಮಹತ್ಯೆಗೆ ಯತ್ನ
ಆರೋಪಿ ಪತಿ, ಮೃತ ಪತ್ನಿ
Follow us
ರಾಮು, ಆನೇಕಲ್​
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 28, 2024 | 2:45 PM

ಬೆಂಗಳೂರು ಗ್ರಾಮಾಂತರ, ಮಾ.28: ಕ್ಷುಲ್ಲಕ ಕಾರಣಗಳಿಗೆ ಕೊಲೆ, ಆತ್ಮಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಅದರಂತೆ ಇದೀಗ ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿ ಕೊಲೆಗೈದು ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್(Anekal)​​ ತಾಲೂಕಿನ ಜಿಗಣಿ ಟೌನ್​ನಲ್ಲಿ ನಡೆದಿದೆ. ಪತಿ ಮುಬಾರಕ್​​(28) ಎಂಬಾತ ಪತ್ನಿ ಅರ್ಬಿಯಾ ತಾಜ್​(24) ಅವರನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ.

ಪತ್ನಿ ಕೊಲೆಗೈದ ಪತಿ ಮುಬಾರಕ್ ಆತ್ಮಹತ್ಯೆಗೆ ಯತ್ನ

ಕೊಲೆಯಾದ ಮಹಿಳೆ, ಗಂಡನ ಕಿರುಕುಳಕ್ಕೆ ಬೇಸೆತ್ತು ತಿಂಗಳ ಹಿಂದೆ ತವರಿಗೆ ಹೋಗಿದ್ದರು. ಈ ಹಿನ್ನಲೆ ವಾರದ ಹಿಂದೆಯಷ್ಟೇ ಪತ್ನಿ ಮನೆಗೆ ಬಂದಿದ್ದ ಆರೋಪಿ ಪತಿ ಮುಬಾರಕ್​, ಅರ್ಬಿಯಾ ತಾಜ್​ಳನ್ನು ಮನೆಗೆ ಬರಲು ಕರೆದಿದ್ದಾನೆ. ಆದರೆ, ಗಂಡನ ಮನೆಗೆ ಹೋಗಲು ಪತ್ನಿ ಹಿಂದೇಟು ಹಾಕಿದ್ದಾಳೆ. ಬಳಿಕ ಮುಬಾರಕ್​ ಹಾಗೆಯೇ ಹೋಗಿದ್ದ. ಇಂದು ವಾಪಸ್ ತನ್ನ ಮನೆಗೆ ಬರುವಂತೆ ಪತಿ ಬಂದು ಒತ್ತಾಯಿಸಿದ್ದಾನೆ. ಮತ್ತೆ ಬರಲು ನಕಾರ ಮಾಡಿದ ಹಿನ್ನೆಲೆ ಪತ್ನಿಯನ್ನ ಮಾರಕಾಸ್ತ್ರದಿಂದ ಕೊಲೆಗೈದಿದ್ದಾನೆ.

ಇದನ್ನೂ ಓದಿ:ಐವರು ಹೆಣ್ಣುಮಕ್ಕಳಿಗೆ ವಿಷವುಣಿಸಿ ತಾಯಿಯೂ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

ಆರೋಪಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಇನ್ನು ಪತ್ನಿ ಅರ್ಬಿಯಾ ತಾಜ್​ಳನ್ನ ಮಚ್ಚಿನಿಂದ ಹಲ್ಲೆ ಮಾಡಿದೊಡನೆ ಕೂಗಾಡಿದ್ದಾಳೆ. ಇದನ್ನು ಕೇಳಿದ ತಕ್ಷಣ ಮೃತ ಮಹಿಳೆ ತಾಯಿ ನೆರವಿಗೆ ಧಾವಿಸಿದ್ದಾಳೆ. ಈ ವೇಳೆ ಪತಿ ಮುಬಾರಕ್​ ಬಾಗಿಲು ಲಾಕ್ ಮಾಡಿ ಆತ್ಮಹತ್ಯೆ ಯತ್ನಿಸಿದ್ದಾನೆ. ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಜಿಗಣಿ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಂಟೇನರ್, ಈರುಳ್ಳಿ ತುಂಬಿದ ಕ್ಯಾಂಟರ್ ನಡುವೆ ಡಿಕ್ಕಿ

ಬೆಂಗಳೂರು ಗ್ರಾಮಾಂತರ: ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಂಟೇನರ್ ಮತ್ತು ಈರುಳ್ಳಿ ತುಂಬಿದ ಕ್ಯಾಂಟರ್ ನಡುವೆ ಡಿಕ್ಕಿಯಾಗಿದ್ದು, ಕಂಟೇನರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು,  ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:39 pm, Thu, 28 March 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ