ನೀರಿನ ಸಂಪ್ ಸ್ವಚ್ಛತೆಗಿಳಿದಿದ್ದ ಇಬ್ಬರು ಕಾರ್ಮಿಕರ ಸಾವು: ರಕ್ಷಣೆಗೆ ಮುಂದಾಗಿದ್ದ ಇಬ್ಬರು ಅಸ್ವಸ್ಥ

ನೀರಿನ ಸಂಪ್ ಸ್ವಚ್ಛತೆಗಿಳಿದ ಇಬ್ಬರು ಕಾರ್ಮಿಕರ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದ ಶ್ರೀನಿವಾಸ ರೆಡ್ಡಿಗೆ ಸೇರಿದ ಸನ್​ಶೈನ್ ಹೋಲ್ಡಿಂಗ್ ಕಂಪನಿಯಲ್ಲಿ ನಡೆದಿದೆ. ಕಾರ್ಮಿಕರ ರಕ್ಷಣೆಗೆ ಮುಂದಾಗಿದ್ದವರು ಅಸ್ವಸ್ಥರಾಗಿದ್ದಾರೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. 

ನೀರಿನ ಸಂಪ್ ಸ್ವಚ್ಛತೆಗಿಳಿದಿದ್ದ ಇಬ್ಬರು ಕಾರ್ಮಿಕರ ಸಾವು: ರಕ್ಷಣೆಗೆ ಮುಂದಾಗಿದ್ದ ಇಬ್ಬರು ಅಸ್ವಸ್ಥ
ನೀರಿನ ಸಂಪ್
Follow us
ರಾಮು, ಆನೇಕಲ್​
| Updated By: ಗಂಗಾಧರ​ ಬ. ಸಾಬೋಜಿ

Updated on:Nov 22, 2023 | 11:07 PM

ಆನೇಕಲ್, ನವೆಂಬರ್​​ 22: ನೀರಿನ ಸಂಪ್ (water sump) ಸ್ವಚ್ಛತೆಗಿಳಿದ ಇಬ್ಬರು ಕಾರ್ಮಿಕರ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದ ಶ್ರೀನಿವಾಸ ರೆಡ್ಡಿಗೆ ಸೇರಿದ ಸನ್​ಶೈನ್ ಹೋಲ್ಡಿಂಗ್ ಕಂಪನಿಯಲ್ಲಿ ನಡೆದಿದೆ. ಬಿಹಾರ ಮೂಲದ ಸಹೋದರರಾದ ಚಂದನ್ ರಾಜ್​ಬನ್ ಸಿಂಗ್(31), ಪಿಂಟು ರಾಜ್​ಬನ್(22) ಮೃತ ಕೂಲಿ ಕಾರ್ಮಿಕರು. ಆ್ಯಸಿಡ್ ಹಾಕಿ ವಾಟರ್ ಟ್ಯಾಂಕ್ ಸ್ವಚ್ಛಗೊಳಿಸಲು ಮುಂದಾಗಿದ್ದರು. ಈ ವೇಳೆ ಉಸಿರುಗಟ್ಟಿ ನೀರಿನ ಸಂಪ್​ನಲ್ಲೇ ಮೃತಪಟ್ಟಿದ್ದಾರೆ. ಕಾರ್ಮಿಕರ ರಕ್ಷಣೆಗೆ ಮುಂದಾಗಿದ್ದ ಜಗದೀಶ್, ಶ್ರೀನಿವಾಸರೆಡ್ಡಿ ಅಸ್ವಸ್ಥರಾಗಿದ್ದಾರೆ.

ಮೃತ ದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಗಲಾಟೆ, ವ್ಯಕ್ತಿ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ

ನೆಲಮಂಗಲ: ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ವ್ಯಕ್ತಿ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದವಾರದ ವೈನ್ ಶಾಪ್​ನಲ್ಲಿ ನಡೆದಿದೆ. ಭರತ್ ಗೌಡ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ ಹೇಮಂತ್. ಭರತ್ ಗೌಡನ ಮುಖ ಕೊಯ್ದು ವಿಕೃತಿ  ದುಷ್ಕರ್ಮಿ ಮೆರೆದಿದ್ದಾರೆ. ಹಲ್ಲೆ ನಡೆಸಿ ನಾಪತ್ತೆಯಾಗಿರುವ ಹೇಮಂತ್​ಗಾಗಿ ಪೊಲೀಸರು ಶೋಧ ನಡೆಸಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿ ಸಾವು

ಹಾಸನ: ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವಂತಹ ಘಟನೆ ಹಾಸನ-ಬೇಲೂರು ರಸ್ತೆಯ ಸೂಲದೇವರಹಳ್ಳಿ ಬಳಿ ನಡೆದಿದೆ. ಬಾಕಿ ಬಿಲ್ ಪಾವತಿ ನೆಪ ಹೇಳಿ ಮೃತದೇಹ ಕೊಡುತ್ತಿಲ್ಲ ಎಂದು ಸಂಬಂಧಿಕರು ಆರೋಪ ಮಾಡಿದ್ದು, ಖಾಸಗಿ ಆಸ್ಪತ್ರೆ ಎದುರು ಮೃತ ಯುವತಿಯ ಕುಟುಂಬಸ್ಥರಿಂದ ಪ್ರತಿಭಟನೆ ಮಾಡಲಾಗಿದೆ.

ಇದನ್ನೂ ಓದಿ: ಆಸ್ತಿ ಹಸ್ತಾಂತರಿಸದ ತಂದೆಯ ಕಣ್ಣುಗಳನ್ನು ಕಿತ್ತಿದ್ದ ಮಗನಿಗೆ 9 ವರ್ಷ ಜೈಲುಶಿಕ್ಷೆ ವಿಧಿಸಿದ ನ್ಯಾಯಾಲಯ

ಇಂದು ಸಂಜೆ ಬೈಕ್‌ಗೆ ಕಾರು ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ದಿವ್ಯ (18) ಹಾಗೂ ಪ್ರಜ್ವಲ್ (24) ಗಾಯಾಳುಗಳು. ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ದಿವ್ಯ ಸಾವನ್ನಪ್ಪಿದ್ದಾಳೆ. ತೀವ್ರವಾಗಿ ಗಾಯಗೊಂಡಿರುವ ಪ್ರಜ್ವಲ್ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೋಷಕರಿಗೆ ದಿವ್ಯ ಶವ ನೀಡದೆ ಬಾಕಿ ಬಿಲ್ ನೀಡುವಂತೆ ಹೇಳಿದ ಆಸ್ಪತ್ರೆ ಸಿಬ್ಬಂದಿ ಕ್ರಮಕ್ಕೆ ಸಂಬಂಧಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:56 pm, Wed, 22 November 23

ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!
ಖ್ವಾಜಾ ಕ್ಲೀನ್ ಬೌಲ್ಡ್... ಸ್ಟೇಡಿಯಂನಲ್ಲಿ ಮೊಳಗಿದ DSP, DSP ಘೋಷಣೆ..!