ಸರ್ಜಾಪುರ: ಪೋಷಕರಿಗೆ ಹೇಳದೆ ಬಾಲಕಿಗೆ ಬಾಲ್ಯ ವಿವಾಹ ಮಾಡಿದ ದೊಡ್ಡಪ್ಪ; ಠಾಣೆ ಮೆಟ್ಟಿಲೇರಿದ ತಾಯಿ

Child marriage: ರಾಜ್ಯದಲ್ಲಿ ಬಾಲ್ಯ ವಿವಾಹ ದ ಸಂಖ್ಯೆ ಕಡಿಮೆಯಾಗುತ್ತಿದ್ದರೂ ಕೆಲ ಹಳ್ಳಿಗಳಲ್ಲಿ ಅಲ್ಲೊಂದು, ಇಲ್ಲೊಂದು ಪ್ರಕರಣಗಳು ಕೇಳಿ ಬರುತ್ತಿತ್ತು. ಇತ್ತೀಚೆಗೆ ರಾಜಧಾನಿ ಬೆಂಗಳೂರಿನಲ್ಲೇ ಮಹಿಳೆಯೊಬ್ಬಳು ತನ್ನ ಮಗಳಿಗೆ ಬಲವಂತವಾಗಿ ಬಾಲ್ಯ ವಿವಾಹ ಮಾಡಿದ ಘಟನೆ ನಡೆದಿತ್ತು. ಇದೀಗ, ಆನೇಕಲ್​ ತಾಲೂಕಿನ ಸರ್ಜಾಪುರದಲ್ಲಿ ಆಕೆಯ ಪೋಷಕರಿಗೇ ತಿಳಿಸದೆ ದೊಡ್ಡಪ್ಪ 14 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ಮದುವೆ ಮಾಡಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಸರ್ಜಾಪುರ: ಪೋಷಕರಿಗೆ ಹೇಳದೆ ಬಾಲಕಿಗೆ ಬಾಲ್ಯ ವಿವಾಹ ಮಾಡಿದ ದೊಡ್ಡಪ್ಪ; ಠಾಣೆ ಮೆಟ್ಟಿಲೇರಿದ ತಾಯಿ
ಸರ್ಜಾಪುರ: ಪೋಷಕರಿಗೆ ಹೇಳದೆ ಮಗಳಿಗೆ ಬಾಲ್ಯ ವಿವಾಹ ಮಾಡಿದ ದೊಡ್ಡಪ್ಪ; ಠಾಣೆ ಮೆಟ್ಟಿಲೇರಿದ ತಾಯಿ
Follow us
ರಾಮು, ಆನೇಕಲ್​
| Updated By: Rakesh Nayak Manchi

Updated on: Feb 17, 2024 | 12:43 PM

ಆನೇಕಲ್, ಫೆ.17: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಕೂಗಳತೆ ದೂರದಲ್ಲಿ ಬಾಲ್ಯ ವಿವಾಹ (Child Marriage) ಪ್ರಕರಣ ಬೆಳಕಿಗೆ ಬಂದಿದೆ. 24 ವರ್ಷದ ಯುವಕನೊಂದಿಗೆ 14 ವರ್ಷದ ಬಾಲಕಿಯನ್ನು ಆಕೆಯ ಪೋಷಕರಿಗೆ ಹೇಳದೆ ದೊಡ್ಡಪ್ಪ ಮದುವೆ ಮಾಡಿಸಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರದಲ್ಲಿ (Sarjapur) ನಡೆದಿದೆ.

ಎಂಟನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯನ್ನು ದೊಡ್ಡಪ್ಪ ದೊಡ್ಡಮ್ಮ ಪುಸಲಾಯಿಸಿಕೊಂಡು 24 ವರ್ಷದ ಯುವಕನೊಂದಿಗೆ ಮದುವೆ ಮಾಡಿಸಿದ್ದಾರೆ. ಪ್ರಕರಣ ಸಂಬಂಧ ಬಾಲಕಿಯ ತಾಯಿ ಬಾಲಕಿಯ ದೊಡ್ಡಪ್ಪ, ದೊಡ್ಡಮ್ಮ ಹಾಗೂ ಇತರರ ವಿರುದ್ಧ ಸರ್ಜಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನನ್ನ ಮಗಳನ್ನು ಪುಸಲಾಯಿಸಿ ಫೆಬ್ರವರಿ 15 ರಂದು ಮದುವೆ ಮಾಡಿಸಲಾಗಿದೆ. ಮಗಳು ಇನ್ನೂ ಅಪ್ರಾಪ್ತಳಾಗಿದ್ದಾಳೆ. ಕೈವಾರದಲಿನ ಯಲಮ್ಮ ದೇವಾಲಯದಲ್ಲಿ ತಂದೆ ತಾಯಿಗೆ ಗೊತ್ತಿಲ್ಲದೆ ಹಲಸಿನಕಾಯಿಪುರ ಗ್ರಾಮದ ವಿನೋದ್ ಕುಮಾರ್ ಜೊತೆ ಮದುವೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಕೋಲಾರ: ಮಾಧವ ಗುರ್ಜೇನಹಳ್ಳಿಯಲ್ಲಿ ಬಾಲ್ಯ ವಿವಾಹಕ್ಕೆ ಸಿದ್ಧತೆ: ಅರಶಿನ ಶಾಸ್ತ್ರದ ವೇಳೆ ಅಧಿಕಾರಿಗಳಿಂದ ದಾಳಿ

ಮದುವೆಗೆ ವಿನೋದ್ ಕುಮಾರ್ ತಂದೆ ಮುನಿಯಪ್ಪ, ತಾಯಿ ರತ್ನಮ್ಮ, ವಿನೋದ್ ಕುಮಾರ್, ಅಣ್ಣ ವಿಜಯ್ ಕುಮಾರ್ ಮತ್ತು ವೆಂಕಟಮ್ಮರವರು ಸೇರಿಕೊಂಡು ಈ ಮದುವೆ ಮಾಡಿದ್ದಾರೆ. ನನ್ನ ಮಗಳು ಅಪ್ರಾಪ್ತ ವಯಸ್ಕಳೆಂದು ಗೊತ್ತಿದ್ದರೂ ಸಹ ಬಲತ್ಕಾರದ ಮದುವೆ ಮಾಡಿದ್ದಾರೆ. ಕಾನೂನು ಬಾಹಿರವಾಗಿ ಮದುವೆ ಮಾಡಿಸಿದ ಹಿನ್ನೆಲೆ ತಪ್ಪತಸ್ಥರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ಜನವರಿ ತಿಂಗಳಲ್ಲಿ, ಬೆಂಗಳೂರು ನಗರದ ಆರ್.ಆರ್.ನಗರದ ದೇಗುಲದಲ್ಲಿ 16 ವರ್ಷದ ಬಾಲಕಿಗೆ 27 ವರ್ಷದ ಯುವಕನ ಜೊತೆ ಆಕೆಯ ತಾಯಿಯೇ ಒತ್ತಾಯ ಪೂರ್ವಕವಾಗಿ ಮದುವೆ ಮಾಡಿಸಿದ್ದ ಪ್ರಕರಣ ನಡೆದಿತ್ತು. ಮಗಳಿಗೆ ಮದುವೆ ಇಷ್ಟವಿಲ್ಲದಿದ್ದರೂ ತಾಯಿಯೇ ಬಲವಂತವಾಗಿ ವಿವಾಹ ಮಾಡಿಸಿದ್ದು, ಬಳಿಕ ಬಲವಂತವಾಗಿ ದೈಹಿಕ‌ ಸಂಪರ್ಕವಾಗಿದೆ ಎಂದು ಅಪ್ರಾಪ್ತ ಬಾಲಕಿ ಮಕ್ಕಳ ಕಲ್ಯಾಣ ಸಮಿತಿಗೆ ಮಾಹಿತಿ ನೀಡಿದ್ದಳು. ಪ್ರಕರಣವೂ ದಾಖಲಾಗಿತ್ತು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ