ಆನೇಕಲ್: ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

Anekal News: ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ ತಾಲೂಕಿನ ಬನ್ನೇರುಘಟ್ಟದ ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ ಆಗಿದೆ. ಮತ್ತೊಂದು ಪ್ರಕರಣದಲ್ಲಿ ನೇಣು ಬಿಗಿದುಕೊಂಡು ಉದ್ಯಮಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಲೇಔಟ್​ವೊಂದರಲ್ಲಿ ನಡೆದಿದೆ.

ಆನೇಕಲ್: ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ
ಸ್ಥಳಕ್ಕೆ ಪೊಲೀಸರು ಭೇಟಿ
Edited By:

Updated on: Aug 13, 2023 | 5:32 PM

ಆನೇಕಲ್, ಆಗಸ್ಟ್​ 13: ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ ತಾಲೂಕಿನ ಬನ್ನೇರುಘಟ್ಟದ ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ (woman) ಶವ ಪತ್ತೆ ಆಗಿದೆ. ಬ್ಯಾಟರಾಯನದೊಡ್ಡಿ ನಿವಾಸಿ ಮುನಿರತ್ನಮ್ಮ(38) ಶವವಾಗಿ ಪತ್ತೆಯಾಗಿರುವ ಮಹಿಳೆ. ನಿನ್ನೆ ತಂಗಿ ಮಗನನ್ನು ವಾಕಿಂಗ್​ಗೆ ಕರೆದುಕೊಂಡು ಹೋಗಿದ್ದರು. ರಾತ್ರಿಯಾದರೂ ಮನೆಗೆ ಬಾರದೆ ಇದ್ದಾಗ ಕುಟುಂಬಸ್ಥರು ಹುಡುಕಾಡಿದ್ದಾರೆ. ರಾತ್ರಿ 8 ಗಂಟೆಗೆ ಭೂತಾನಹಳ್ಳಿಯ ನಿರ್ಜನ ಪ್ರದೇಶದಲ್ಲಿ ತಲೆ, ಕೈ, ಕಾಲಿಗೆ ಗಂಭೀರ ಗಾಯಗಳೊಂದಿಗೆ ಬಾಲಕ ಪತ್ತೆ ಆಗಿದ್ದಾನೆ.

ಬಾಲಕ ಸಿಕ್ಕ ಜಾಗದ ಸಮೀಪದ ನಿರ್ಜನ ಪ್ರದೇಶದಲ್ಲಿ ಮಹಿಳೆ ಶವ ಕೂಡ ಪತ್ತೆ ಆಗಿದ್ದು, ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಸ್ಥಳಕ್ಕೆ FSL ತಂಡ, ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಗುಂಡಿಗೆ ಲಾರಿ ಚಕ್ರ ಸಿಲುಕಿ ಚಲಿಸುತ್ತಿದ್ದ ಕಬ್ಬಿನ ಲಾರಿ ಪಲ್ಟಿ

ಮೈಸೂರು: ಟಿ.ನರಸೀಪುರ ತಾಲೂಕಿನ ಬನ್ನೂರು ಪಟ್ಟಣದಲ್ಲಿ ರಸ್ತೆ ಗುಂಡಿಯಲ್ಲಿ ಲಾರಿ ಚಕ್ರ ಸಿಲುಕಿ ಪಕ್ಕದ ಗೂಡ್ಸ್​​ ಆಟೋ ಮೇಲೆ ಪಲ್ಟಿ ಆಗಿರುವಂತಹ ಘಟನೆ ನಡೆದಿದೆ. ಗೂಡ್ಸ್ ಆಟೋದಲ್ಲಿ ಯಾರೂ ಇಲ್ಲದಿದ್ದರಿಂದ ಭಾರೀ ಅನಾಹುತ ತಪ್ಪಿದೆ.

ಇದನ್ನೂ ಓದಿ: ಗದಗ: ಅಂತ್ಯ ಸಂಸ್ಕಾರದ ಸಿದ್ಧತೆ ವೇಳೆ ಬಯಲಾದ ಮಹಿಳೆಯ ಸಾವಿನ ರಹಸ್ಯ

ಕಬ್ಬು ತುಂಬಿದ್ದ ಲಾರಿ ಮೈಸೂರಿನಿಂದ ಬನ್ನೂರು ಕಡೆಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿದ್ಯುತ್ ಪ್ರವಹಿಸಿ ಬೆಸ್ಕಾಂ ಗುತ್ತಿಗೆ ನೌಕರ ಅನಿಲ್(35) ಸಾವು

ಬೆಂಗಳೂರು ಗ್ರಾಮಾಂತರ: ವಿದ್ಯುತ್ ಪ್ರವಹಿಸಿ ಬೆಸ್ಕಾಂ ಗುತ್ತಿಗೆ ನೌಕರ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾ. ಜಿಲ್ಲೆಯ ಹೊಸಕೋಟೆ ಪಟ್ಟಣದ ಬಳಿ ನಡೆದಿದೆ. ಬೆಸ್ಕಾಂ ನಿರ್ಲಕ್ಷ್ಯಕ್ಕೆ ಕೋಲಾರ ಮೂಲದ ಅನಿಲ್(35) ಮೃತ ನೌಕರ. ದುರಸ್ಥಿ ವೇಳೆಯೇ ವಿದ್ಯುತ್ ಸಂಪರ್ಕ ನೀಡಿದ್ದರಿಂದ ಅವಘಡ ಸಂಭವಿಸಿದೆ. ಚೆನ್ನೈ ಎಕ್ಸ್​ಪ್ರೆಸ್ ಕಾರಿಡಾರ್ ಹೆದ್ದಾರಿ ಕಾಮಗಾರಿ ಹಿನ್ನೆಲೆ ವಿದ್ಯುತ್ ಕಂಬ ಬದಲಾಯಿಸಲಾಗುತ್ತಿತ್ತು. ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಉದ್ಯಮಿ ಆತ್ಮಹತ್ಯೆ

ಬೆಂಗಳೂರು: ನೇಣು ಬಿಗಿದುಕೊಂಡು ಉದ್ಯಮಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಲೇಔಟ್​ವೊಂದರಲ್ಲಿ ನಡೆದಿದೆ. ಬ್ರಿಜೇಶ್ ರೆಡ್ಡಿ ಮೃತ ಉದ್ಯಮಿ. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ನಷ್ಟ ಹೊಂದಿದ್ದರು. ಹಾಗಾಗಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು: ಒಂದೊಂದೇ ಕಥೆ ಕಟ್ಟಿ ಅಮಾಯಕರಿಗೆ ಮೋಸ ಮಾಡ್ತಿದ್ದ ಕಿಲಾಡಿ ಜೋಡಿ ಅರೆಸ್ಟ್

ಹೆಚ್​​ಎಸ್​​ಆರ್​​ ಲೇಔಟ್​ನಲ್ಲಿ ಮನೆ, ಆಫೀಸ್ ಮಾಡಿಕೊಂಡಿದ್ದರು. ಸಾಕಷ್ಟು ನಷ್ಟ ಹೊಂದಿದ್ದ ಹಿನ್ನೆಲೆ ಇತ್ತೀಚೆಗೆ ಮನೆ ಮಾರಾಟ ಮಾಡಲಾಗಿತ್ತು. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:31 pm, Sun, 13 August 23