Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ನಗ್ನ ಸ್ಥಿತಿಯಲ್ಲಿ ಅಪರಿಚಿತ ಯುವತಿ ಶವ ಪತ್ತೆ, ಕೊಲೆಗೈದಿರುವ ಶಂಕೆ

ಆನೇಕಲ್(Anekal)​ ತಾಲೂಕಿನ ಚಂದಾಪುರ ಹೆಡ್​ಮಾಸ್ಟರ್ ಬಡಾವಣೆಯ ಮನೆಯೊಂದರ ಕೊಠಡಿಯಲ್ಲಿ ನಿನ್ನೆ(ಮಾ.11) ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರ ಜೊತೆಗೆ ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆನೇಕಲ್: ನಗ್ನ ಸ್ಥಿತಿಯಲ್ಲಿ ಅಪರಿಚಿತ ಯುವತಿ ಶವ ಪತ್ತೆ, ಕೊಲೆಗೈದಿರುವ ಶಂಕೆ
ಚಂದಾಪುರ ಹೆಡ್​ಮಾಸ್ಟರ್ ಬಡಾವಣೆಯಲ್ಲಿ ನಗ್ನ ಸ್ಥಿತಿಯಲ್ಲಿ ಅಪರಿಚಿತ ಯುವತಿ ಶವ ಪತ್ತೆ
Follow us
ರಾಮು, ಆನೇಕಲ್​
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 12, 2024 | 5:52 PM

ಬೆಂಗಳೂರು, ಮಾ.12: ಜಿಲ್ಲೆಯ ಆನೇಕಲ್(Anekal)​ ತಾಲೂಕಿನ ಚಂದಾಪುರ ಹೆಡ್​ಮಾಸ್ಟರ್ ಬಡಾವಣೆಯ ಮನೆಯೊಂದರ 4ನೇ ಮಹಡಿಯ ಕೊಠಡಿಯಲ್ಲಿ ನಿನ್ನೆ(ಮಾ.11)  ನಗ್ನ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಮೃತ ಯುವತಿ ಒರಿಸ್ಸಾ ಮೂಲದ ಸಪನ್ ಕುಮಾರ್ ಜೊತೆಗಿದ್ದರು. ಯುವತಿ ಕೊಲೆಗೈದ ಬಳಿಕ ಸಪನ್ ನಾಪತ್ತೆಯಾಗಿರುವ ಸಾಧ್ಯತೆ ಇದ್ದು, ಸದ್ಯ ಮೊಬೈಲ್ ಸ್ವಿಚ್ಡ್ ಆಫ್ ಮಾಡಿ ಸಪನ್ ಕುಮಾರ್ ನಾಪತ್ತೆಯಾಗಿದ್ದಾನೆ.

ಕಳೆದ ಐದಾರು ದಿನಗಳ ಹಿಂದೆಯೇ ಕೊಲೆಗೈದಿರುವುದಾಗಿ ಅಂದಾಜಿಸಲಾಗಿದ್ದು, ಶವ ಪತ್ತೆಯಾದ ಸ್ಥಳದಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿದೆ. ಈ ಹಿನ್ನಲೆ ಕೊಲೆಗೂ ಮೊದಲು ಡ್ರಿಂಕ್ಸ್ ಮಾಡಿರುವ ಸಾಧ್ಯತೆ ಇದೆ. ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಜೊತೆಗೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಶಿವರಾತ್ರಿಯಂದು ಡ್ಯಾನ್ಸ್ ಮಾಡುವಾಗ ಮೈ ಟಚ್ ಆಗಿದ್ದಕ್ಕೆ ಕೊಲೆ; ಮೂವರು ಆರೋಪಿಗಳು ಅರೆಸ್ಟ್

ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕ್ಯಾಂಟರ್; ಪವಾಡ ಸದೃಶ ರೀತಿಯಲ್ಲಿ ಚಾಲಕ, ಕ್ಲಿನರ್ ಪಾರು

ಬೆಂಗಳೂರು ಗ್ರಾಮಾಂತರ: ರಾಷ್ಟ್ರೀಯ ಹೆದ್ದಾರಿ 4ರ ಜಾಸ್ ಟೋಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಉರುಳಿ ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್​ ಚಾಲಕ ಮೂಬೀನ್ ಹಾಗೂ ಕ್ಲೀನರ್ ಆರೀಫ್ ಪಾರಾಗಿದ್ದು, ತ್ರಿಪುರದಿಂದ ದೆಹಲಿಗೆ ಬಟ್ಟೆ ಸಾಗಿಸುತ್ತಿದ್ದಾಗ ನಿದ್ರೆ ಮಂಪರಿನಲ್ಲಿ ಈ ದುರ್ಘಟನೆ ನಡೆದಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬಟ್ಟೆ ಅಂಗಡಿ ಶೌಚಾಲಯದ ಕಿಟಕಿ ಮುರಿದು ಕಳ್ಳತನ; 6 ಲಕ್ಷ ರೂ. ದರೋಡೆ

ಕೋಲಾರ: ಶೌಚಾಲಯದ ಕಿಟಕಿ ಮುರಿದು ಲಕ್ಷಾಂತರ ರೂಪಾಯಿ ಕಳ್ಳತನ ಮಾಡಿದ ಘಟನೆ ಕೋಲಾರ ನಗರದ ಎಂ.ಜಿ. ರಸ್ತೆಯಲ್ಲಿರುವ ಪ್ರತಿಷ್ಠಿತ ಬಿ.ಅರ್.ಎಂ ಬಟ್ಟೆ ಮಳಿಗೆಯಲ್ಲಿ ನಡೆದಿದೆ. ಸುಮಾರು 6 ಲಕ್ಷ ರೂಪಾಯಿ ಹಣ ಹಾಗೂ ಬೆಲೆ ಬಾಳುವ ಸೀರೆಗಳ ಕಳ್ಳತನವಾಗಿದ್ದು, ಜೊತೆಗೆ ಕ್ಯಾಶ್ ಬೋರ್ಡ್​ನಲ್ಲಿದ್ದ 6 ಲಕ್ಷ ಹಣ ಕದ್ದು‌ಪರಾರಿಯಾಗಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ವು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ಕುರಿತು ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:52 pm, Tue, 12 March 24

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್