ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಮತ್ತೊಂದು ಮಹಿಳೆ ಸಾವು
ರಸ್ತೆಯಲ್ಲಿ ನಡೆದು ಬರುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಎಗರಿಸಿ ದುಷ್ಕರ್ಮಿಗಳು ಪರಾರಿಯಾದಂತಹ ಘಟನೆ ನಗರದ ಟಿ.ದಾಸರಹಳ್ಳಿಯಲ್ಲಿ ನಡೆದಿದೆ.
ಬೆಂಗಳೂರು: ನಗರದ ನಾಯಂಡಹಳ್ಳಿ ಬಳಿ ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಮಹಿಳೆ ಬಲಿಯಾಗಿರುವಂತಹ ಘಟನೆ ನಡೆದಿದೆ. ಬಿಬಿಎಂಪಿ (BBMP) ಕಸದ ಲಾರಿ ಡಿಕ್ಕಿಯಾಗಿ ಪದ್ಮಿನಿ(39) ಮೃತ ಮಹಿಳೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕಸದ ಲಾರಿ ಡಿಕ್ಕಿಯಾಗಿದೆ. ಬ್ಯಾಟರಾಯನಪುರ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಟ್ರಾನ್ಸ್ ಫಾರ್ಮರ್ ಚಾಲನೆಗೊಳಿಸಲು ಇಪ್ಪತ್ತೈದು ಸಾವಿರ ಲಂಚ ಪಡೆದು ಎಸಿಬಿ ಬಲೆಗೆ ಬಿದ್ದ ಅಧಿಕಾರಿ:
ಬೆಂಗಳೂರು: ಟ್ರಾನ್ಸ್ ಫಾರ್ಮರ್ ಚಾಲನೆಗೊಳಿಸಲು ಇಪ್ಪತ್ತೈದು ಸಾವಿರ ಲಂಚ ಪಡೆಯುವಾಗ ಬೆಂಗಳೂರು ಎಸಿಬಿ ಅಧಿಕಾರಿಗಳಿದ ಟ್ರಾಪ್ ಮಾಡಿ ಅಧಿಕರಿಯನ್ನು ಅರೆಸ್ಟ್ ಮಾಡಲಾಗಿದೆ. ಗುತ್ತಿಗೆದಾರರ ಬಳಿ ಲಂಚ ಕೇಳಿದ್ದ ಬೆಸ್ಕಾಂ ಸಹಾಯಕ ಅಭಿಯಂತರ ನವೀನ್ ಡಿ. ಪೂರ್ವ ಉಪವಿಭಾಗ ಬೆಸ್ಕಾಂ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ. ಇಂದು ಇಪತ್ತುಸಾವಿರ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ಟ್ರಾಪ್ ಮಾಡಿ ಅರೆಸ್ಟ್ ಮಾಡಿದ್ದಾರೆ.
ಮಹಿಳೆಯ ಮಾಂಗಲ್ಯ ಸರ ಎಗರಿಸಿ ಪರಾರಿಯಾದ ದುಷ್ಕರ್ಮಿಗಳ;
ಬೆಂಗಳೂರು: ರಸ್ತೆಯಲ್ಲಿ ನಡೆದು ಬರುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಎಗರಿಸಿ ದುಷ್ಕರ್ಮಿಗಳು ಪರಾರಿಯಾದಂತಹ ಘಟನೆ ನಗರದ ಟಿ.ದಾಸರಹಳ್ಳಿಯಲ್ಲಿ ನಡೆದಿದೆ. ಚಂದ್ರಕಾಂತ(58)ಸರ ಕಳಕೊಂಡ ಮಹಿಳೆ. ಗಾರ್ಮೆಂಟ್ಸ್ನಲ್ಲಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ಬೈಕ್ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳಿಂದ ಕೃತ್ಯ ಎಸಗಲಾಗಿದ್ದು, ಸರ ಎಳೆಯುವಾಗ ಕೈಯಲ್ಲಿ ಹಿಡಿದುಕೊಂಡಿದ್ದರಿಂದ ಅರ್ಧಕ್ಕೆ ಕಟ್ಟಾಗಿದೆ. ಒಂದು ಲಕ್ಷ ಬೆಲೆಬಾಳುವಷ್ಟು ಸರ ಕಿತ್ತು ಕಿರಾತಕರು ಪರಾರಿಯಾಗಿದ್ದಾರೆ. ಪ್ರಕರಣ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ:
ಸಿಡಿಲು ಬಡಿದು ಇಬ್ಬರು ಕುರಿಗಾಹಿಗಳು ದುರ್ಮರಣ; 9ಕ್ಕೂ ಹೆಚ್ಚು ಕುರಿಗಳು ಬಲಿ