ಗಣೇಶ ಪೂಜೆಗೆ ಇಟ್ಟ ಹಣದ ವಿಚಾರದಲ್ಲಿ ಸಹೋದರರ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ

ಇತ್ತೀಚೆಗೆ ಅಪರಾಧ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಕುಳಿತು ಬಗೆಹರಿಸಿಕೊಳ್ಳುವ ವಿಚಾರಕ್ಕೂ ಕೊಲೆಗಳು ನಡೆಯುತ್ತಿವೆ. ಇದೀಗ ಉತ್ತರ ಕನ್ನಡ ಜಿಲ್ಲೆಯ ಕಾರವಾರ(Karwar)ದ ಸಾಯಿಕಟ್ಟಾದಲ್ಲಿ ಹಣಕಾಸಿನ ವಿಚಾರಕ್ಕೆ ಚಾಕುವಿನಿಂದ ಇರಿದು ಸಹೋದರನನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಗಣೇಶ ಪೂಜೆಗೆ ಇಟ್ಟ ಹಣದ ವಿಚಾರದಲ್ಲಿ ಸಹೋದರರ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ
ಕೊಲೆಯಾದ ವ್ಯಕ್ತಿ, ಮುಗಿಲು ಮುಟ್ಟಿದ ಮನೆಯವರ ಆಕ್ರಂದನ
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 07, 2024 | 6:40 PM

ಉತ್ತರ ಕನ್ನಡ, ಸೆ.07: ಮನೆಯಲ್ಲಿ ಗಣೇಶ ಪೂಜೆ ಹಾಗೂ ದೇವರಿಗೆ ಇಟ್ಟ ಹಣದ ವಿಚಾರದಲ್ಲಿ ಅಣ್ಣ-ತಮ್ಮನ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಕಾರವಾರ(Karwar)ದ ಸಾಯಿಕಟ್ಟಾದಲ್ಲಿ ನಡೆದಿದೆ. ಹಣಕಾಸಿನ ವಿಚಾರಕ್ಕೆ ಚಾಕುವಿನಿಂದ ಇರಿದು ಸಹೋದರನನ್ನೇ ಆರೋಪಿ ಮನೀಶ್ ಕಿರಣ್ ಹತ್ಯೆಗೈದಿದ್ದಾನೆ. ಸಂದೇಶ್ ಪ್ರಭಾಕರ್ ಬೋರ್ಕರ್, ಮೃತ ರ್ದುದೈವಿ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಕಾರವಾರ ಪೊಲೀಸರು ಆರೋಪಿ ಮನೀಶ್ ಕಿರಣ್​ನನ್ನು ಈಗಾಗಲೇ ಬಂಧಿಸಿದ್ದಾರೆ.

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು

ಬೆಂಗಳೂರು: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದ್ದು, ಚಿಕಿತ್ಸೆ ಫಲಿಸದೆ ಅನುಷಾ ಎಂಬುವವರು ಕೊನೆಯುಸಿರೆಳೆದಿದ್ದಾರೆ. 2 ದಿನದ ಹಿಂದೆ ಅನುಷಾ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಬೆಂಗಳೂರಿನ ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. 5 ವರ್ಷದ ಹಿಂದೆ ಶ್ರೀಹರಿ ಜೊತೆ ಅನುಷಾ ಮದುವೆ ಆಗಿತ್ತು. ಶ್ರೀಹರಿ, ಅನುಷಾ ದಂಪತಿಗೆ ಎರಡು ವರ್ಷದ ಮಗು ಕೂಡ ಇದೆ. ಆದರೆ, ಪತಿ ಅನೈತಿಕ ಸಂಬಂಧ ವಿಚಾರವಾಗಿ ದಂಪತಿ ನಡುವೆ ಗಲಾಟೆಯಾಗಿದ್ದು, ಇದರಿಂದ ಮನನೊಂದು ಪೆಟ್ರೋಲ್​ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಗಾಯಗೊಂಡಿದ್ದ ಅನುಷಾಳನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಕುರಿತು ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕುರಿಗಾಯಿ ರಕ್ಷಣೆ ಮಾಡಿದ ಮೀನುಗಾರರು

ಕಾರು, ಆಟೋ ನಡುವೆ ಮುಖಾಮುಖಿ ಡಿಕ್ಕಿ, ಆಟೋ ಸವಾರ ದುರ್ಮರಣ

ಬೆಂಗಳೂರು: ನಗರದ ಮುದ್ದಿನಪಾಳ್ಯದಲ್ಲಿ ಕಾರು ಡಿಕ್ಕಿಯಾಗಿ ಆಟೋ ಚಾಲಕ ಕಿರಣ್(32) ಸಾವನ್ನಪ್ಪಿದ್ದ ಘಟನೆ
ನಿನ್ನೆ(ಸೆ.06) ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. ಇದೀಗ ಕಾರು ಚಾಲಕ ಗುರುರಾಘವೇಂದ್ರ ವಿರುದ್ಧ ಕೇಸ್ ದಾಖಲಾಗಿದ್ದು, ಜ್ಞಾನಭಾರತಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:30 pm, Sat, 7 September 24

Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
Follow Us