AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಸೇನಾಧಿಕಾರಿಯಿಂದ ಮಹಿಳೆಯ ಹತ್ಯೆ

ಮದುವೆಯಾಗುವಂತೆ ಒತ್ತಾಯ ಮಾಡಿದಳೆಂದು ಸೇನಾಧಿಕಾರಿಯೊಬ್ಬರು ನೇಪಾಳಿ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಡೆಹ್ರಾಡೂನ್​ನಲ್ಲಿ ನಡೆದಿದೆ. ಸೋಮವಾರ ಸಿರ್ವಾಲ್​ಗಢ ಪ್ರದೇಶದಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು, ಇದಾದ ಬಳಿಕ ಪೊಲೀಸರು ತನಿಖೆ ನಡೆಸಿ, ಉತ್ತರಾಖಂಡದ ಡೆಹ್ರಾಡೂನ್​ನಲ್ಲಿ ನಿಯೋಜನೆಗೊಂಡಿರುವ ಸೇನೆಯ ಲೆಫ್ಟಿನೆಂಟ್ ಕರ್ನಲ್​ನನ್ನು ಬಂಧಿಸಲಾಗಿದೆ. ಮಹಿಳೆ ನೇಪಾಳದವರಾಗಿದ್ದು, ಸಿಲಿಗುರಿಯಲ್ಲಿ ವಾಸವಿದ್ದರು ಎಂಬುದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಸೇನಾಧಿಕಾರಿಯಿಂದ ಮಹಿಳೆಯ ಹತ್ಯೆ
ಸೇನಾಧಿಕಾರಿImage Credit source: NDTV
ನಯನಾ ರಾಜೀವ್
|

Updated on: Sep 12, 2023 | 10:45 AM

Share

ಮದುವೆಯಾಗುವಂತೆ ಒತ್ತಾಯ ಮಾಡಿದಳೆಂದು ಸೇನಾಧಿಕಾರಿಯೊಬ್ಬರು ನೇಪಾಳಿ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಡೆಹ್ರಾಡೂನ್​ನಲ್ಲಿ ನಡೆದಿದೆ. ಸೋಮವಾರ ಸಿರ್ವಾಲ್​ಗಢ ಪ್ರದೇಶದಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು, ಇದಾದ ಬಳಿಕ ಪೊಲೀಸರು ತನಿಖೆ ನಡೆಸಿ, ಉತ್ತರಾಖಂಡದ ಡೆಹ್ರಾಡೂನ್​ನಲ್ಲಿ ನಿಯೋಜನೆಗೊಂಡಿರುವ ಸೇನೆಯ ಲೆಫ್ಟಿನೆಂಟ್ ಕರ್ನಲ್​ನನ್ನು ಬಂಧಿಸಲಾಗಿದೆ. ಮಹಿಳೆ ನೇಪಾಳದವರಾಗಿದ್ದು, ಸಿಲಿಗುರಿಯಲ್ಲಿ ವಾಸವಿದ್ದರು ಎಂಬುದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

ಕ್ಲೆಮೆಂಟ್ ಟೌನ್ ಕಂಟೋನ್ಮೆಂಟ್ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದ ರಾಮೇಂದು ಉಪಾಧ್ಯಾಯ ಮಹಿಳೆ ಜತೆಗೆ ವಿವಾಹೇತರ ಸಂಬಂಧ ಹೊಂದಿದ್ದರು, ಆಕೆ ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಳು. ಹೀಗಾಗಿ ಕೋಪಗೊಂಡು ಆಕೆಯನ್ನು ಹತ್ಯೆ ಮಾಡಿದ್ದಾರೆ.ಪಂಡಿತ್ವಾರಿ ಪ್ರೇಮ್ ನಗರದಲ್ಲಿರುವ ಅವರ ಮನೆಯಿಂದ ಅವರನ್ನು ಬಂಧಿಸಲಾಗಿದೆ.

ಮೃತ ಶ್ರೇಯಾ ಶರ್ಮಾ ಸಿಲಿಗುರಿಯ ಡ್ಯಾನ್ಸ್​ ಬಾರ್​ನಲ್ಲಿ ಆರೋಪಿಯನ್ನು ಭೇಟಿಯಾಗಿದ್ದಳು, ಅವರ ಸಂಬಂಧ ಮೂರು ವರ್ಷಗಳ ಕಾಲ ಮುಂದುವರೆದಿತ್ತು. ಡೆಹ್ರಾಡೂನ್​ಗೆ ವರ್ಗಾವಣೆಯಾದಾಗ ಶ್ರೇಯಾಳನ್ನು ತನ್ನೊಂದಿಗೆ ಡೆಹ್ರಾಡೂನ್​ಗೆ ಕರೆದೊಯ್ದಿದ್ದ, ಬಾಡಿಗೆ ಮನೆಯಲ್ಲಿರಿಸಿದ್ದ ಎಂಬುದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.

ಮತ್ತಷ್ಟು ಓದಿ: ಧಾರವಾಡ: ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದ ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ

ಉಪಾಧ್ಯಾಯ ಶನಿವಾರ ರಾತ್ರಿ ರಾಜ್​ಪುರ ರಸ್ತೆಯ ಕ್ಲಬ್​ನಲ್ಲಿ ಮಹಿಳೆಯೊಂದಿಗೆ ಮದ್ಯ ಸೇವಿಸಿದ್ದರು. ಆಕೆಯನ್ನು ಲಾಂಗ್​ ಡ್ರೈವ್​ಗೆ ಕರೆದೊಯ್ಯಲು ಮುಂದಾಗಿದ್ದ, ಆಗ ನಗರದ ಹೊರವಲಯದಲ್ಲಿರುವ ನಿರ್ಜನ ಪ್ರದೇಶವಾದ ಥಾನೋ ರಸ್ತೆಗೆ ತಲುಪಿದಾಗ ಮಧ್ಯರಾತ್ರಿ 1.30 ಆಗಿತ್ತು. ಕಾರು ನಿಲ್ಲಿಸಿ ಮಹಿಳೆಯ ತಲೆಗೆ ಸುತ್ತಿಗೆಯಿಂದ ಪದೇ ಪದೇ ಹೊಡೆದು ಹತ್ಯೆ ಮಾಡಿದ್ದಾನೆ.

ಆಕೆಯನ್ನು ಕೊಂದು ಶವವನ್ನು ರಸ್ತೆಬದಿಯಲ್ಲಿ ಎಸೆದು ಓಡಿ ಹೋಗಿದ್ದಾನೆ. ಸೇನಾಧಿಕಾರಿಗೆ ಈಗಾಗಲೇ ಮದುವೆಯಾಗಿದ್ದು, ಆಕೆಯನ್ನು ಮದುವೆಯಾಗುವಂತೆ ಮಹಿಳೆ ಒತ್ತಡ ಹೇರುತ್ತಿದ್ದಳು ಎಂದು ಅವರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ