ಪಿಸ್ತೂಲು ತೋರಿಸಿ ಚಿನ್ನದ ಅಂಗಡಿಯಲ್ಲಿ ದರೋಡೆ ಮಾಡಿದ್ದ ಅಂತರರಾಜ್ಯ ಕಳ್ಳರ ಬಂಧನ

ಬಿಹಾರದಿಂದ ಕಂಟ್ರಿ ಮೇಡ್ ಪಿಸ್ತೂಲ್ ತರಿಸಿ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿಯ ದೊಂಬರಹಳ್ಳಿಯಲ್ಲಿನ ಪದಮ್ ಚಿನ್ನದ ಅಂಗಡಿಯನ್ನು ದರೋಡೆ ಮಾಡಿದ್ದ ಏಳು ಜನ ಆರೋಪಿಗಳನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪಿಸ್ತೂಲು ತೋರಿಸಿ ಚಿನ್ನದ ಅಂಗಡಿಯಲ್ಲಿ ದರೋಡೆ ಮಾಡಿದ್ದ ಅಂತರರಾಜ್ಯ ಕಳ್ಳರ ಬಂಧನ
ಮಾದಯಾಕನಹಳ್ಳಿ ಪೊಲೀಸ್​ ಠಾಣೆ, ಬಂಧಿತ ಆರೋಪಿಗಳು
Edited By: ವಿವೇಕ ಬಿರಾದಾರ

Updated on: Aug 02, 2024 | 3:07 PM

ನೆಲಮಂಗಲ, ಆಗಸ್ಟ್​ 02: ಸಿನಿಮಾ ಶೈಲಿಯಲ್ಲಿ ಪಿಸ್ತೂಲು ತೋರಿಸಿ ಚಿನ್ನದ ಅಂಗಡಿ (Gold Shop) ದರೋಡೆ (Robbery) ಮಾಡಿದ್ದ ಅಂತರರಾಜ್ಯ ಖದೀಮರನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ನಾರಾಯಣ ಲಾಲ್ (43) ರಾಮ್ ಲಾಲ್ (54) ಕಿಶೋರ್ ಪವರ್ (25)ಮಹೇಂದ್ರ ಗೆಲೋಟ್ (25) ಕೀರ್ತಾರಾಮ್ (42) ಅಶೋಕ್ ಕುಮಾರ್ (39) ಸೋಹನ್ ರಾಮ್ (32) ಬಂಧಿತ ಆರೋಪಿಗಳು. ಆರೋಪಿಗಳಿಂದ 35 ಲಕ್ಷ ರೂ. ಮೌಲ್ಯದ 417 ಗ್ರಾಂ ತೂಕದ ಚಿನ್ನಾಭರಣಗಳು ಮತ್ತು ಕೃತ್ಯಕ್ಕೆ ಬಳಸಿದ ಒಂದು ಪಿಸ್ತೂಲ್, ಒಂದು ಡ್ಯ್ರಾಗರ್, ಆಟೋ ರಿಕ್ಷಾ ಮತ್ತು ಒಂದು ಕೆಟಿಎಂ ಡ್ಯೂಕ್ ಬೈಕ್ ಜಪ್ತಿ ಮಾಡಲಾಗಿದೆ.

ಆರೋಪಿಗಳು ಇದೇ ವರ್ಷ ಜೂನ್ 26 ರಂದು ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿಯ ದೊಂಬರಹಳ್ಳಿಯಲ್ಲಿನ ರಾಜು ಪದಮ್ ಎಂಬುವರಿಗೆ ಸೇರಿದ ಪದಮ್ ಚಿನ್ನದ ಅಂಗಡಿಗೆ ನುಗ್ಗಿದ್ದರು. ಅಲ್ಲಿನ ಸಿಬ್ಬಂದಿಗೆ ಪಿಸ್ತೂಲು ತೋರಿಸಿ ಪರಾರಿಯಾಗಿದ್ದರು. ಮಾದನಾಯಕನಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನೆಲಮಂಗಲ ಡಿವೈಎಸ್ಪಿ ಜಗದೀಶ್ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಮುರಳೀಧರ್ ಅವರ ನೇತೃತ್ವದಲ್ಲಿ ತಂಡ ತನಿಖೆಗೆ ಇಳಿಯುತ್ತದೆ. ಪೊಲೀಸ್​ ತಂಡವು ಸಿಸಿಟಿವಿ ದೃಷ್ಯಾವಳಿಗಳು ಮತ್ತು ತಾಂತ್ರಿಕ ಆಯಾಮದಲ್ಲಿ ಆರೋಪಿಗಳ ಬಗ್ಗೆ ಮಾಹಿತಿ ಪಡೆದಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆ

ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಬೆಂಗಳೂರಿನಲ್ಲಿ ಚಿನ್ನದ ಅಂಗಡಿ ಮತ್ತು ಬಟ್ಟೆ ಹಾಗೂ ಕೆಮಿಕಲ್ ಅಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಗಳ ವಿರುದ್ಧ ಬೆಂಗಳೂರು ಹಲಸೂರು ಗೇಟ್ ಮತ್ತು ಬೊರುಂಡಾ, ಜೋದ್‌ಪುರ್ ಪೊಲೀಸ್ ಠಾಣೆಗಳಲ್ಲಿ ಸುಲಿಗೆ, ಕಳ್ಳತನ ಪ್ರಕರಣಗಳು ದಾಖಲಾಗಿದ್ದವು. ಆರೋಪಿಗಳು ದರೋಡೆ ಮಾಡಿದ್ದ ಚಿನ್ನಾಭರಣಗಳನ್ನು ಬೆಂಗಳೂರು ಮತ್ತು ರಾಜಸ್ಥಾನದಲ್ಲಿ ಮಾರಾಟ ಮಾಡುತ್ತಿದ್ದರು.

ಬೆಂಗಳೂರು ನಗರದ ಹೊರವಲಯಗಳಲ್ಲಿ ದರೋಡೆ ಮಾಡಿದರೆ ಸಿಕ್ಕಿ ಹಾಕಿಕೊಳ್ಳುವುದಿಲ್ಲವೆಂದು ಯೋಜಿಸಿ ಅರೋಪಿಗಳು ಕೃತ್ಯವೆಸಗಿದ್ದಾರೆ. ದರೋಡೆಗೆಂದು ಕಂಟ್ರಿ ಮೇಡ್ ಪಿಸ್ತೂಲ್ ಅನ್ನು ಬಿಹಾರ ಮೂಲದ ಅಶೋಕನಿಂದ ರಾಜಸ್ಥಾನಕ್ಕೆ ತರಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:44 pm, Fri, 2 August 24

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us