AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್‌ ಶಾಸಕನ ಆಪ್ತ ಹತ್ಯೆ: ಸುಪಾರಿ ಕೊಲೆ ಶಂಕೆ.. ಮಾಸ್ಟರ್ ಮೈಂಡ್ ಯಾರು..?

ಬೆಂಗಳೂರಿನಲ್ಲಿ ಮೂರು ದಿನದ ಹಿಂದೆ ನಡೆದ ರೌಡಿಶೀಟರ್ ಹೈದರ್ ಅಲಿ ಹತ್ಯೆ ಕೇಸ್ ಆರೋಪಿಗಳ ಇನ್ನೂ ಪತ್ತೆಯಾಗಿಲ್ಲ.ಅಶೋಕ್​ ನಗರ ಪೊಲೀಸರು ಕೆಲವು ಅನುಮಾನಿತ ವ್ಯಕ್ತಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಕೊಲೆಗಾರರ ಬೆನ್ನಿಬಿದ್ದಿದ್ದಾರೆ‌. ಆದರೆ ಹೈದರ್ ಕೊಲೆ ಹಳೇ ದ್ವೇಷಕ್ಕೆ ನಡೆದಿರೋ ದಟ್ಟ ಅನುಮಾನ ಮೂಡಿದ್ದು, ಕೊಲೆ ಮಾಸ್ಟರ್ ಮೈಂಡ್ ಯಾರು..?

ಕಾಂಗ್ರೆಸ್‌ ಶಾಸಕನ ಆಪ್ತ ಹತ್ಯೆ: ಸುಪಾರಿ ಕೊಲೆ ಶಂಕೆ.. ಮಾಸ್ಟರ್ ಮೈಂಡ್ ಯಾರು..?
Hyder Ali
TV9 Web
| Edited By: |

Updated on: Feb 25, 2025 | 3:51 PM

Share

ಬೆಂಗಳೂರು, ಫೆಬ್ರವರಿ 25): ಬೆಂಗಳೂರನ್ನೇ ಬೆಚ್ಚಿಬೀಳಿಸಿರುವ ರೌಡಿ ಶೀಟರ್ ಹೈದರ್ ಅಲಿ ಹತ್ಯೆ ನಡೆದು ಮೂರು ದಿನವೇ ಕಳೆದೊಯ್ತು. ಆದರೆ ನಡುರಸ್ತೆಯಲ್ಲಿ ಹೈದರ್ ಅಲಿಯನ್ನ ಭೀಕರವಾಗಿ‌ ಕೊಲೆಗೈದ ಆರೋಪಿಗಳು ಮಾತ್ರ ಪತ್ತೆಯಾಗಿಲ್ಲ.. ಅಶೋಕ್ ನಗರ ಪೊಲೀಸರು ಸದ್ಯ ಪ್ರಕರಣ ಸಂಬಂಧ ನಾಲ್ವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಕೊಲೆಗಾರರ ಬೆನ್ನು ಹತ್ತಿದ್ದಾರೆ.

ಶಾಂತಿನಗರ ಕಾಂಗ್ರೆಸ್ ಮುಖಂಡನ ಸಹೋದರ. ಮತ್ತು ಶಾಸಕ ಹ್ಯಾರಿಸ್ ಬಳಗದಲ್ಲಿ ಗುರುತಿಸಿಕೊಂಡಿದ್ದ ಹೈದರ್ ಅಲಿಯನ್ನ ಶನಿವಾರ ರಾತ್ರಿ ಭೀಕರವಾಗಿ ಹತ್ಯೆ ಮಾಡಲಾಯ್ತು. ಈ ಪ್ರಕರಣದ ತನಿಖೆ ನಡೆಸುತ್ತಿರೋ ಅಶೋಕ್‌ನಗರ ಪೊಲೀಸರು ನಾಲ್ವರು ಶಂಕಿತರನ್ನ ವಶಕ್ಕೆ ತೆಗೆದುಕೊಂಡಿದ್ರು. ವಶಕ್ಕೆ ಪಡೆದವರನ್ ತೀವ್ರ ವಿಚಾರಣೆ ನಡೆಸಿ ಕೆಲವು ಮಹತ್ವದ ಮಾಹಿತಿ ಸಂಗ್ರಹಿಸಲಾಗಿದೆ. ಈ ಮಾಹಿತಿ ಆಧಾರದ‌ ಮೇಲೆಯೇ ಪೊಲೀಸರು ಕೊಲೆಗಾರರ ಹುಡುಕಾಟ ಮುಂದುವರಿಸಿದ್ದಾರೆ‌.‌ ಇನ್ನೂ ಹೈದರ್ ಅಲಿ ಕೊಲೆಗೆ ಹಳೇ ದ್ವೇಷವೇ ಕಾರಣ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಸದ್ಯ ಪೊಲೀಸರು ಕೊಲೆ ಹಿಂದಿನ ಕಾರಣ ಏನು ಅನ್ನೋದನ್ನೂ ಪತ್ತೆ ಹಚ್ಚುತ್ತಿದ್ದಾರೆ. ಹಾಗೆ ಆರೋಪಿಗಳ ಜಾಡಿ ಹಿಡಿದು ಹೊರ ಜಿಲ್ಲೆಗಳಲ್ಲೂ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಹೈದರ್ ಅಲಿ ಕೊಲೆಗೆ ಸುಪಾರಿ ಕೊಡಲಾಗಿದೆ ಎನ್ನಲಾಗ್ತಿದ್ದು, ಕೊಲೆ ಹಿಂದಿನ ಮಾಸ್ಟರ್ ಮೈಂಡ್ ಯಾರು ಎನ್ನುವುದೇ ನಿಗೂಢವಾಗಿದೆ.

ಕೊನೆ ನಡೆದಿದ್ದು ಎಲ್ಲಿ?

ಬೆಂಗಳೂರಿನ ರೆಸಿಡೆನ್ಸಿ ರಸ್ತೆಯ ಬಾರ್‌ನಲ್ಲಿ ತಡರಾತ್ರಿವರೆಗೆ ಪಾರ್ಟಿ ಮಾಡಿದ್ದ ಹೈದರ್‌ ಅಲಿ, ಸ್ನೇಹಿತನ ಜತೆ ಕಾರಿನಲ್ಲಿಆನೆಪಾಳ್ಯದ ತನ್ನ ಮನೆಗೆ ಹೋಗುತ್ತಿದ್ದಾಗ ನಾಲ್ಕೈದು ದುಷ್ಕರ್ಮಿಗಳು ದಾಳಿ ಮಾಡಿದ್ದರು. ಮತ್ತೊಂದು ಕಾರಿನಲ್ಲಿ ಹಿಂಬಾಲಿಸಿ ಬಂದು ಫುಟ್ಬಾಲ್‌ ಸ್ಟೇಡಿಯಂ ಬಳಿ ಅಡ್ಡಗಟ್ಟಿದ್ದರು. ಆಗ ಕಾರಿನಿಂದ ಕೆಳಗಿಳಿದು ತಪ್ಪಿಸಿಕೊಳ್ಳಲು ಮುಂದಾದ ಹೈದರ್‌ ಅಲಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಂದಿದ್ದರು. ಈ ವೇಳೆ ಹೈದರ್‌ ಅಲಿಯನ್ನು ರಕ್ಷಿಸಲು ಮುಂದಾದ ಆತನ ಸ್ನೇಹಿತನ ಮೇಲೂ ದುಷ್ಕರ್ಮಿಗಳು ಹಲ್ಲೆನಡೆಸಿದ್ದರು.

ವರದಿ: ಪ್ರದೀಪ್ ಚಿಕ್ಕಾಟಿ, Tv9, ಬೆಂಗಳೂರು

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?