ಮಂಗಳೂರು: ಯುವಕನ ಮೇಲೆ ಹಲ್ಲೆ ಮಾಡಿ ಬೆನ್ನಿಗೆ ಚಾಕುನಿಂದ ಇರಿದ ದುಷ್ಕರ್ಮಿಗಳು
ರವಿವಾರ ಸಂಜೆ ಮನೆಗೆ ಮರುಳುತ್ತಿರುವ ವೇಳೆ ಯುವಕನ ಮೇಲೆ ಏಕಾಏಕಿ ದಾಳಿ ಮಾಡಿ ಹಲ್ಲೆಗೈದು, ಕೈ ಮತ್ತು ಬೆನ್ನಿಗೆ ಚಾಕುವಿನಿಂದ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಕಳವಾರು ಬಳಿ ನಡೆದಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಂಗಳೂರು: ಯುವಕನಿಗೆ (Youth) ದುಷ್ಕರ್ಮಿಗಳು ಚಾಕುವಿನಿಂದ ಇರಿದು, ಹಲ್ಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಮಂಗಳೂರು (Mangalore) ಹೊರವಲಯದ ಕಳವಾರು ಬಳಿ ನಡೆದಿದೆ. ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ವಾನ್ (23) ಅವರಿಗೆ ಚಾಕು ಇರಿಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಠಾಣೆಯ ಪೊಲೀಸರು ಸುರತ್ಕಲ್ ಕಳವಾರು ನಿವಾಸಿಗಳಾದ ಪ್ರಶಾಂತ್ (28), ಧನರಾಜ್ (23), ಯಜ್ಞೆಶ್ (22) ಎಂಬುವರನ್ನು ಬಂಧಿಸಿದ್ದಾರೆ.
ಸೆಪ್ಟೆಂಬರ್ .03 ರ ಸಂಜೆ ಅಬ್ದುಲ್ ಸಫ್ವಾನ್ ತನ್ನ ಸ್ನೇಹಿತ ಮೊಹಮ್ಮದ್ ಸಫ್ವಾನ್ನೊಂದಿಗೆ ಬೈಕ್ ನಲ್ಲಿ ತೆರಳುತಿದ್ದಾಗ, ಎರಡು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಅಬ್ದುಲ್ ಸಫ್ವಾನ್ ಅವರ ಬೈಕ್ ಅಡ್ಡಗಟ್ಟಿದ್ದಾರೆ. ನಂತರ ಮಾರಕಾಸ್ತ್ರಗಳಿಂದ ಹಲ್ಲೆಗೈದು ಅಬ್ದುಲ್ ಸಫ್ವಾನ್ ಅವರ ಕೈ , ತೋಳು ಹಾಗೂ ಬೆನ್ನಿಗೆ ಚೂರಿಯಿಂದ ಇರಿದಿದ್ದಾರೆ. ಸದ್ಯ ಗಾಯಾಳು ಸಫ್ವಾನ್ ಅವರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಣಕಾಸಿನ ವಿಚಾರಕ್ಕೆ ದುಷ್ಕರ್ಮಿಗಳು ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು
ದಾವಣಗೆರೆ: ತನ್ನ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತೇವೆ ಎಂದು ಬೆದರಿಕೆಗೆ, ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದ 17 ವರ್ಷ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ದಾವಣಗೆರೆ ಜಿಲ್ಲೆಯ ಜಗಳೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಆರೋಪಿಗಳಿಗೆ ಶಿಕ್ಷೆ ಆಗಲಿ ಎಂದು ಗಾಯಾಳು ವಿದ್ಯಾರ್ಥಿನಿ ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ: ಅಕ್ಕನ ಜೊತೆ ಅನೈತಿಕ ಸಂಬಂಧ, ಯುವಕನಿಗೆ ವಾರ್ನಿಂಗ್ ಮಾಡಿದ ತಮ್ಮ; ಮುಂದೆನಾಯ್ತು?
ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ
ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿ ಶಾಲೆಗೆ ಹೋಗುವ ವೇಳೆ ಇಬ್ಬರು ಯುವಕರು ಪರಿಚಯವಾಗಿದ್ದರು. ಈ ಯುವಕರ ಜೊತೆ ಸ್ನೇಹ ಬೆಳದಿತ್ತು. ನಂತರ ದಿನಗಳಲ್ಲಿ, ಒಂದು ದಿನ ಯುವಕರು ಬೇಕರಿ ತಿನಿಸಿನಲ್ಲಿ ಮದ್ದು ಬರುವ ಔಷಧಿ ಹಾಕಿ ವಿದ್ಯಾರ್ಥಿನಿಗೆ ನೀಡಿದ್ದರು. ಇದನ್ನು ತಿಂದ ವಿದ್ಯಾರ್ಥಿನಿಗೆ ಪ್ರಜ್ಞೆ ತಪ್ಪಿತ್ತು. ನಂತರ ಆಕೆಯ ಆಶ್ಲಿಲ ವಿಡಿಯೋ ಮಾಡಿಕೊಂಡಿದ್ದರು. ಈ ವಿಡಿಯೋವನ್ನು ಇಟ್ಟುಕೊಂಡು ತಾವು ಕರೆದಾಗ ಬರದಿದ್ದರೇ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು.
ಇದರಿಂದ ನೊಂದ ಯುವತಿ ಕೆಲ ದಿನಗಳ ಹಿಂದ ಪೆಟ್ರೊಲ್ ಸುರಿದುಕೊಂಡ ಆತ್ಮಹತ್ಯೆಗೆ ಯತ್ನಿಸಿದ್ದಳು. ಘಟನೆಯಲ್ಲಿ ತೀರ್ವವಾಗಿ ಗಾಯಗೊಂಡ ವಿದ್ಯಾರ್ಥಿನಿಯನ್ನು ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.
ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:52 am, Mon, 4 September 23