Assam Crime: ಕೈ-ಕಾಲುಗಳನ್ನು ಕಟ್ಟಿಹಾಕಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರ ಬಂಧನ

ಕೈ-ಕಾಲುಗಳನ್ನು ಕಟ್ಟಿಹಾಕಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಅಸ್ಸಾಂನಲ್ಲಿ ನಡೆದಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Assam Crime: ಕೈ-ಕಾಲುಗಳನ್ನು ಕಟ್ಟಿಹಾಕಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರ ಬಂಧನ
ಬಂಧನ

Updated on: Feb 06, 2023 | 9:41 AM

ಕೈ-ಕಾಲುಗಳನ್ನು ಕಟ್ಟಿಹಾಕಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಅಸ್ಸಾಂನಲ್ಲಿ ನಡೆದಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದಿಬ್ರುಗಢದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇಬ್ಬರು ಆರೋಪಿಗಳನ್ನು ಭಾಯಿಜಾನ್ ಅಲಿ ಮತ್ತು ಸಫರ್ ಅಲಿ ಎಂದು ಗುರುತಿಸಲಾಗಿದೆ ಎಂದು ದಿಬ್ರುಗಢ ಎಸ್ಪಿ ಶ್ವೇತಾಂಕ್ ಮಿಶ್ರಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

ದಿಬ್ರುಗಢದಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಅಪ್ರಾಪ್ತ ಬಾಲಕಿ ಅಥಾಬರಿ ಚಹಾ ತೋಟದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್

ಆರೋಪಿಗಳ ವಿರುದ್ಧ 2012 ರ ಪೋಕ್ಸೋ ಕಾಯ್ದೆಯ ಸೆಕ್ಷನ್ 376 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
ಆಕೆಯ ಕೈ ಮತ್ತು ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು ಮತ್ತು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ ಎಂದು ಶಂಕಿಸಲಾಗಿದೆ.

ಬಾಲಕಿ ಫೆಬ್ರವರಿ 3 ರಿಂದ ನಾಪತ್ತೆಯಾಗಿದ್ದಳು. ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆ, 2012 ರ ಸೆಕ್ಷನ್ 376 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us