ಜೆಡಿಎಸ್ ಸದಸ್ಯ ಪ್ರಶಾಂತ್ ಹತ್ಯೆ ಪ್ರಕರಣ; ಕೊಲೆಗೂ ಮುನ್ನಾ ಲಾಡ್ಜ್​ನಲ್ಲಿ ಪ್ಲ್ಯಾನ್ ಮಾಡಿದ್ದ ಹಂತಕರು

ನಿನ್ನೆ ರಾತ್ರಿ ಪೊಲೀಸರು ಲಾಡ್ಜ್​ಗೆ ತೆರಳಿ ಸಿಸಿ ಟಿವಿ ಪರಿಶೀಲಿಸಿದ್ದಾರೆ. ಈ ವೇಳೆ ಲಾಡ್ಜ್ನಲ್ಲಿ ತಂಗಿರುವುದು ಖಾತ್ರಿಯಾಗಿದೆ. ಲಾಡ್ಜ್ನಲ್ಲಿದ್ದ ಎಲ್ಲರನ್ನು ಖಾಲಿ ಮಾಡಿಸಿ ಪೊಲೀಸರು ಬೀಗ ಜಡಿದಿದ್ದಾರೆ.

ಜೆಡಿಎಸ್ ಸದಸ್ಯ ಪ್ರಶಾಂತ್ ಹತ್ಯೆ ಪ್ರಕರಣ; ಕೊಲೆಗೂ ಮುನ್ನಾ ಲಾಡ್ಜ್​ನಲ್ಲಿ ಪ್ಲ್ಯಾನ್ ಮಾಡಿದ್ದ ಹಂತಕರು
ನಗರ ಸಭೆ ಸದಸ್ಯ ಪ್ರಶಾಂತ್
Follow us
TV9 Web
| Updated By: sandhya thejappa

Updated on:Jun 07, 2022 | 9:00 AM

ಹಾಸನ: ನಗರಸಭೆ ಜೆಡಿಎಸ್ (JDS) ಸದಸ್ಯ ಪ್ರಶಾಂತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ (CID) ಅಧಿಕಾರಿಗಳು ಮತ್ತು ಹಾಸನ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಕೊಲೆಗೂ ಮುನ್ನಾ ಹಂತಕರು ಲಾಡ್ಜ್​​ವೊಂದರಲ್ಲಿ ಪ್ಲ್ಯಾನ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಕೊಲೆ ಆರೋಪಿಗಳು ತಂಗಿದ್ದ ಲಾಡ್ಜ್​ನನ್ನು ಪೊಲೀಸರು ಸದ್ಯ ಸೀಜ್ ಮಾಡಿದ್ದಾರೆ. ಕೊಲೆಗಾರರು ಮಾರ್ಕೆಟ್ ಬಳಿಯ ಲಕ್ಷ್ಮೀ ರೆಸಿಡೆನ್ಸಿಯಲ್ಲಿ ತಂಗಿದ್ದರು. ಜೂ.1ರಂದು ಬೆಳಗ್ಗೆ ಲಾಡ್ಜ್ ಪಡೆದು ಪಾರ್ಟಿ ಮಾಡಿದ್ದಾರೆ. ಈ ಎಲ್ಲಾ ಮಾಹಿತಿಗಳು ವಿಚಾರಣೆ ವೇಳೆ ಆರೋಪಿಗಳು ಬಾಯಿಬಿಟ್ಟಿದ್ದಾರೆ.

ನಿನ್ನೆ ರಾತ್ರಿ ಪೊಲೀಸರು ಲಾಡ್ಜ್​ಗೆ ತೆರಳಿ ಸಿಸಿ ಟಿವಿ ಪರಿಶೀಲಿಸಿದ್ದಾರೆ. ಈ ವೇಳೆ ಲಾಡ್ಜ್​ನಲ್ಲಿ ತಂಗಿರುವುದು ಖಾತ್ರಿಯಾಗಿದೆ. ಲಾಡ್ಜ್​ನಲ್ಲಿದ್ದ ಎಲ್ಲರನ್ನು ಖಾಲಿ ಮಾಡಿಸಿ ಪೊಲೀಸರು ಬೀಗ ಜಡಿದಿದ್ದಾರೆ. ಇನ್ನು ದಾಳಿ ವೇಳೆ ಲೈಸನ್ಸ್ ಪಡೆಯದೆ ಲಾಡ್ಜ್ ನಡೆಸುತ್ತಿರುವ ಬಗ್ಗೆ ಆಕ್ಷೇಪವೂ ವ್ಯಕ್ತವಾಗಿದೆ. ಕೊಲೆ ಸಂಬಂಧ ವಿಶ್ವ, ಸಂತೋಷ್​ನನ್ನು ಪೊಲೀಸರು ಬಂಧಿಸಿದ್ದು, ಪ್ರಮುಖ ಆರೋಪಿ ಸೇರಿ ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಇದನ್ನೂ ಓದಿ; Elon Musk Twitter Deal: ಟ್ವಿಟ್ಟರ್​ ಜತೆ ಒಪ್ಪಂದ ಕೊನೆಗೊಳಿಸುವ ಬಗ್ಗೆ ಎಲಾನ್ ಮಸ್ಕ್ ಪತ್ರ ಹೇಳುವುದೇನು?

ಇದನ್ನೂ ಓದಿ
Image
Sadhu Singh Dharamsot: ಭ್ರಷ್ಟಾಚಾರ ಪ್ರಕರಣ; ಪಂಜಾಬ್‌ನ ಮಾಜಿ ಸಚಿವ ಸಾಧು ಸಿಂಗ್ ಧರಂಸೋತ್ ಬಂಧನ
Image
ಕಲಬುರಗಿಯಲ್ಲಿ ಊಟ ಕೇಳಿದ್ದಕ್ಕೆ 4 ವರ್ಷದ ಮಗುವಿಗೆ ಬೆಂಕಿಯಿಂದ ಸುಟ್ಟು ಮಲತಾಯಿ ಕ್ರೌರ್ಯ!
Image
Ekta Kapoor Birthday: ಏಕ್ತಾ ಕಪೂರ್ ನಿರ್ಮಾಣ ಮಾಡಿರೋ ಈ ಚಿತ್ರಗಳನ್ನು ವೀಕ್ಷಿಸಿದ್ದೀರಾ? ಮಿಸ್ ಮಾಡಲೇಬೇಡಿ
Image
Facebook ಬಳಕೆದಾರರೇ ಎಚ್ಚರ… ನಂಬಿದರೆ ಪಂಗನಾಮ ಗ್ಯಾರಂಟಿ

ಹಾಸನದಲ್ಲಿ ಕಾನೂನು ಸುವ್ಯವಸ್ಥೆ ವಿಫಲಗೊಂಡಿದೆ ಎಂಬ ಆರೋಪ ಸಂಬಂಧ ಪೆನ್ಷನ್ ಮೊಹಲ್ಲಾ ಇನ್ಸ್​ಪೆಕ್ಟರ್​ ವಿರುದ್ಧ ತನಿಖೆ ನಡೆಸುವಂತೆ ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಅವರು ಆದೇಶ ಹೊರಡಿಸಿದ್ದಾರೆ. ನಗರಸಭೆ ಸದಸ್ಯ ಪ್ರಶಾಂತ್​ ನಾಗರಾಜ್ ಅವರನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿತ್ತು. ಈ ಸಂಬಂಧ ಇಬ್ಬರು ಪೊಲೀಸ್ ಅಧಿಕಾರಿಗಳು ಲೋಪ ಎಸಗಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿತ್ತು. ಅದರಂತೆ ಎಸ್​ಪಿ ಶ್ರೀನಿವಾಸ್ ಗೌಡರ ವರದಿ ಆಧರಿಸಿ ದಕ್ಷಿಣ ವಲಯದ ಐಜಿಪಿ ತನಿಖೆಗೆ ಆದೇಶಿಸಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:54 am, Tue, 7 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ