ಹಾಸನದಲ್ಲಿ ಮಹಿಳೆ ಮೇಲೆ ಹಲ್ಲೆ: ಮಚ್ಚು ನೀಡಿದವ ಅರೆಸ್ಟ್, ಆರೋಪಿ ಪತಿ ಬಂಧನಕ್ಕೆ ಶೋಧ

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಅಟ್ಟಾಡಿಸಿ ಮಚ್ಚು, ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಹಾಸನ ಎಸ್​ಪಿ ಹರಿರಾಮ್ ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಮಹಿಳೆಯ ಆರೋಗ್ಯ ವಿಚಾರಿಸಿದರು.

ಹಾಸನದಲ್ಲಿ ಮಹಿಳೆ ಮೇಲೆ ಹಲ್ಲೆ: ಮಚ್ಚು ನೀಡಿದವ ಅರೆಸ್ಟ್, ಆರೋಪಿ ಪತಿ ಬಂಧನಕ್ಕೆ ಶೋಧ
ಮಚ್ಚಿನಿಂದ ಪತ್ನಿ ಮೇಲೆ ಹಲ್ಲೆ ನಡೆಸಿದ ಆರೋಪಿ ಪತಿ ಬಂಧನಕ್ಕೆ ಪೊಲೀಸರ ಶೋಧಕಾರ್ಯ
Follow us
|

Updated on: Jun 25, 2023 | 4:55 PM

ಹಾಸನ: ತನ್ನ ಪತ್ನಿಯನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ (Assault) ನಡೆಸಿದ ಪ್ರಕರಣ ಸಂಬಂಧ ಆರೋಪಿ ಪತಿ ಬಂಧನಕ್ಕೆ ಶೋಧಕಾರ್ಯ ಮುಂದುವರಿದಿದೆ ಎಂದು ಹಾಸನ ಜಿಲ್ಲಾ ಎಸ್​ಪಿ (Hassan SP) ಹರಿರಾಮ್ ಶಂಕರ್ ಹೇಳಿದ್ದಾರೆ. ಪತಿಯಿಂದ ಹಲ್ಲೆಗೊಳಗಾದ ಮಹಿಳೆಯ ಆರೋಗ್ಯ ವಿಚಾರಿಸಿದ ನಂತರ ಆಸ್ಪತ್ರೆ ಬಳಿ ಮಾತನಾಡಿದ ಅವರು, ಪ್ರಕರಣ ಸಂಬಂಧ ಆರೋಪಿಗೆ ಮಚ್ಚು ನೀಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದರು.

ಶ್ರೀನಿವಾಸ ಮತ್ತು ಸವಿತಾ ಎಂಬವರು 18 ವರ್ಷಗಳ ಹಿಂದೆ ಮದುವೆಯಾಗಿದ್ದರು. ಸದ್ಯ ಪತಿಯಿಂದ ವಿಚ್ಛೇದನ ಪಡೆಯಲು ಸವಿತಾ ಕಾನೂನು ಹೋರಾಟ ನಡೆಸುತ್ತಿದ್ದು, 2 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಅಲ್ಲದೆ, ಪತಿಯ ಆಸ್ತಿ ವಿಭಾಗಕ್ಕಾಗಿ ಸವಿತಾ ಕೇಸ್ ಮಾಡಿದ್ದಾಳೆ. ಆದರೆ ನಿನ್ನೆ (ಜೂನ್ 24) ನಿವೇಶನ ಮಾರಾಟದ ವಿಚಾರವಾಗಿ ಸವಿತಾಳ ಜೊತೆ ಶ್ರೀನಿವಾಸ್ ಜಗಳ ಮಾಡಿದ್ದು, ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಮಚ್ಚು ಮತ್ತು ರಾಡ್​ನಿಂದ ಹಲ್ಲೆ ನಡೆಸಿದ್ದಾನೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಸಾಫ್ಟ್​ವೇರ್​ ಇಂಜಿನಿಯರ್ ಕಿಡ್ನಾಪ್​: ಸುಪಾರಿ ನೀಡಿದ್ದ ಪ್ರಿಯತಮೆ ಅಂದರ್​, ಪ್ರಕರಣದ ರೋಚಕ ಕಹಾನಿ ಇಲ್ಲಿದೆ

ಕೈ ಹಾಗೂ ದೇಹದ ಹಲವೆಡೆ ಗಂಭೀರವಾಗಿ ಗಾಯಗೊಂಡ ಸವಿತಾಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀವಕ್ಕೇನು ಅಪಾಯ ಇಲ್ಲ ಎಂದು ಎಸ್​ಪಿ ತಿಳಿಸಿದ್ದಾರೆ. ಪ್ರಕರಣ ಸಂಬಧ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಶ್ರೀನಿವಾಸನನ್ನು ಬಂಧಿಸಲು ಮೂರು ತಂಡ ರಚಿಸಲಾಗಿದೆ. ಆದಷ್ಟು ಬೇಗ ಬಂಧಿಸುತ್ತೇವೆ. ಮಚ್ಚು ನೀಡಿದ್ದ ಆರೋಪಿಯ ಸಹೋದರನನ್ನು ಬಂಧಿಸಲಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್