ಹಾಸನ: ತನ್ನ ಪತ್ನಿಯನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ (Assault) ನಡೆಸಿದ ಪ್ರಕರಣ ಸಂಬಂಧ ಆರೋಪಿ ಪತಿ ಬಂಧನಕ್ಕೆ ಶೋಧಕಾರ್ಯ ಮುಂದುವರಿದಿದೆ ಎಂದು ಹಾಸನ ಜಿಲ್ಲಾ ಎಸ್ಪಿ (Hassan SP) ಹರಿರಾಮ್ ಶಂಕರ್ ಹೇಳಿದ್ದಾರೆ. ಪತಿಯಿಂದ ಹಲ್ಲೆಗೊಳಗಾದ ಮಹಿಳೆಯ ಆರೋಗ್ಯ ವಿಚಾರಿಸಿದ ನಂತರ ಆಸ್ಪತ್ರೆ ಬಳಿ ಮಾತನಾಡಿದ ಅವರು, ಪ್ರಕರಣ ಸಂಬಂಧ ಆರೋಪಿಗೆ ಮಚ್ಚು ನೀಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದರು.
ಶ್ರೀನಿವಾಸ ಮತ್ತು ಸವಿತಾ ಎಂಬವರು 18 ವರ್ಷಗಳ ಹಿಂದೆ ಮದುವೆಯಾಗಿದ್ದರು. ಸದ್ಯ ಪತಿಯಿಂದ ವಿಚ್ಛೇದನ ಪಡೆಯಲು ಸವಿತಾ ಕಾನೂನು ಹೋರಾಟ ನಡೆಸುತ್ತಿದ್ದು, 2 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಅಲ್ಲದೆ, ಪತಿಯ ಆಸ್ತಿ ವಿಭಾಗಕ್ಕಾಗಿ ಸವಿತಾ ಕೇಸ್ ಮಾಡಿದ್ದಾಳೆ. ಆದರೆ ನಿನ್ನೆ (ಜೂನ್ 24) ನಿವೇಶನ ಮಾರಾಟದ ವಿಚಾರವಾಗಿ ಸವಿತಾಳ ಜೊತೆ ಶ್ರೀನಿವಾಸ್ ಜಗಳ ಮಾಡಿದ್ದು, ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಮಚ್ಚು ಮತ್ತು ರಾಡ್ನಿಂದ ಹಲ್ಲೆ ನಡೆಸಿದ್ದಾನೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರ ಸಾಫ್ಟ್ವೇರ್ ಇಂಜಿನಿಯರ್ ಕಿಡ್ನಾಪ್: ಸುಪಾರಿ ನೀಡಿದ್ದ ಪ್ರಿಯತಮೆ ಅಂದರ್, ಪ್ರಕರಣದ ರೋಚಕ ಕಹಾನಿ ಇಲ್ಲಿದೆ
ಕೈ ಹಾಗೂ ದೇಹದ ಹಲವೆಡೆ ಗಂಭೀರವಾಗಿ ಗಾಯಗೊಂಡ ಸವಿತಾಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀವಕ್ಕೇನು ಅಪಾಯ ಇಲ್ಲ ಎಂದು ಎಸ್ಪಿ ತಿಳಿಸಿದ್ದಾರೆ. ಪ್ರಕರಣ ಸಂಬಧ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಶ್ರೀನಿವಾಸನನ್ನು ಬಂಧಿಸಲು ಮೂರು ತಂಡ ರಚಿಸಲಾಗಿದೆ. ಆದಷ್ಟು ಬೇಗ ಬಂಧಿಸುತ್ತೇವೆ. ಮಚ್ಚು ನೀಡಿದ್ದ ಆರೋಪಿಯ ಸಹೋದರನನ್ನು ಬಂಧಿಸಲಾಗಿದೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ