ಜೋರು ಸೌಂಡ್ ಇಟ್ಟು ಅಂಗಡಿಯಲ್ಲಿ ಭಜನೆ ಹಾಡು ಹಾಕಿದ್ದಕ್ಕೆ ಹಲ್ಲೆ: ಮೂವರ ಬಂಧನ
ಮಸೀದಿಯಲ್ಲಿ ಪ್ರಾರ್ಥನೆ ಮಾಡುವಾಗ ಜೋರು ಸೌಂಡ್ ಇಟ್ಟು ಹಾಡು ಹಾಕಬೇಡ ಎಂದು ಬೆಂಗಳೂರಿನ ನಗರತ್ಪೇಟೆಯಲ್ಲಿರುವ ಮೊಬೈಲ್ ಅಂಗಡಿಯಲ್ಲಿನ ಯುವಕ ಮೇಲೆ ಐವರು ಹಲ್ಲೆ ಮಾಡಿದ್ದಾರೆ. ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಬೆಂಗಳೂರು, ಮಾರ್ಚ್ 18: ಜೋರು ಸೌಂಡ್ (Loud Sound) ಇಟ್ಟು ಭಜನೆ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ನಗರತ್ಪೇಟೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮೂವರನ್ನು ಪೊಲೀಸರು (Police) ಬಂಧಿಸಿದ್ದಾರೆ. ಸುಲೇಮಾನ್, ಶಹನವಾಜ್, ರೋಹಿತ್ ಬಂಧಿತ ಆರೋಪಿಗಳು.
ನಗರತ್ಪೇಟೆಯಲ್ಲಿರುವ ಮೊಬೈಲ್ ಶಾಪ್ನಲ್ಲಿ ಯುವಕ ಹಿಂದಿ ಭಾಷೆಯ ಭಜನೆ ಹಾಡುಗಳನ್ನು ಜೋರು ಸೌಂಡ್ ಇಟ್ಟು ಹಚ್ಚಿದ್ದರು. ಈ ವೇಳೆ ಅಂಗಡಿಗೆ ಬಂದ ಆರು ಜನ ಯುವಕರು “ಮಸೀದಿಯಲ್ಲಿ ಪ್ರಾರ್ಥನೆ ಮಾಡುವಾಗ ಜೋರು ಸೌಂಡ್ ಇಟ್ಟು ಹಾಡು ಹಾಕಬೇಡ ಎಂದಿದ್ದಾರೆ. ಇದೇ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ನಂತರ ಆರು ಜನ ಯುವಕರು ಅಂಗಡಿಯಲ್ಲಿದ್ದ ಯುವಕ ಮುಖೇಶ್ ಅವರ ಕೊರಳ ಪಟ್ಟಿ ಹಿಡಿದು, ಅಂಗಡಿಯಿಂದ ಹೊರಗೆ ಎಳೆದೊಯ್ದು ಹಲ್ಲೆ ಮಾಡಿದ್ದಾರೆ.
ಗ್ಯಾಂಗ್ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ಗಾಯಗೊಂಡ ಮುಖೇಶ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯುವಕನ ದೂರಿನನ್ವಯ, ಹಲ್ಲೆ ಮಾಡಿದ್ದ ಸುಲೇಮಾನ್, ತರುಣ್, ಶನವಾಜ್, ರೋಹಿತ್, ಡ್ಯಾನಿಶ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 506, 504, 149, 307, 323 ಹಾಗೂ 324ರ ಅಡಿಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಸದ್ಯ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಿಂದಿ ಭಜನೆ ಹಾಡು ಹಾಕಿದ್ದಕ್ಕೆ ಕಿರಿಕ್ ಮಾಡಿದ್ದಾಗಿ ವಿಚಾರಣೆ ವೇಳೆ ಆರೋಪಿಗಳು ಬಾಯಿ ಬಿಟ್ಟಿದ್ದಾರೆ.
ಇದನ್ನೂ ಓದಿ: ವಿವಸ್ತ್ರಗೊಳಿಸಿ ಹಲ್ಲೆ, ಕಂಡಕ್ಟರ್ಗೆ ಟಾರ್ಚರ್: ಇವೇ ಕಾಂಗ್ರೆಸ್ ಸರ್ಕಾರದ ಅಸಲಿ ಮಹಿಳಾ ಸಬಲೀಕರಣವೆಂದ ಬಿಜೆಪಿ
ಕರ್ನಾಟಕ ತಾಲಿಬಾನ್ ಆಗಿ ಬದಲಾಗುತ್ತಿದೆ: ಬಿಜೆಪಿ
“ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಕೈಗೆ ಸಿಕ್ಕು ತಾಲಿಬಾನ್ ಆಗಿ ಬದಲಾಗುತ್ತಿದೆ. ಬೆಂಗಳೂರಿನ ಸಿದ್ದಣ್ಣಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಮೊಬೈಲ್ ಅಂಗಡಿಗೆ ನುಗ್ಗಿದ ಮತಾಂಧ ಕಿಡಿಗೇಡಿಗಳು ಮುಖೇಶ್ ಎಂಬ ಹಿಂದೂ ಯುವಕನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿ ಓಡಿ ಹೋಗಿದ್ದಾರೆ.”
ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕ @INCKarnataka ದ ಕೈಗೆ ಸಿಕ್ಕು ತಾಲಿಬಾನ್ ಆಗಿ ಬದಲಾಗುತ್ತಿದೆ.
ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಮೊಬೈಲ್ ಅಂಗಡಿಗೆ ನುಗ್ಗಿದ ಮತಾಂಧ ಕಿಡಿಗೇಡಿಗಳು ಮುಖೇಶ್ ಎಂಬ ಹಿಂದೂ ಯುವಕನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿ ಓಡಿ ಹೋಗಿದ್ದಾರೆ.
ಅಂಗಡಿ ಮಾಲೀಕ ಮುಖೇಶ್ ಸಂಜೆ ಪೂಜೆ… pic.twitter.com/XYSDTZN0GT
— BJP Karnataka (@BJP4Karnataka) March 18, 2024
“ಅಂಗಡಿ ಮಾಲೀಕ ಮುಖೇಶ್ ಸಂಜೆ ಪೂಜೆ ಸಮಯದಲ್ಲಿ ಭಕ್ತಿ ಗೀತೆಗಳನ್ನು ಹಾಕಿದ್ದೇ ಮತಾಂದ ದುರುಳರು ಹಲ್ಲೆ ಮಾಡಲು ಕಾರಣ. ಹಲ್ಲೆಗೊಳಗಾದ ಮುಖೇಶ್ ಹಲಸೂರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೂ, ಪೊಲೀಸರು ದೂರು ದಾಖಲಿಸಿಕೊಳ್ಳದೆ ಹಿಂದೇಟು ಹಾಕುತ್ತಿದ್ದಾರೆ ಎಂದರೆ, ಇದರ ಹಿಂದೆ ಮಜಾವಾದಿ ಸಿದ್ದರಾಮಯ್ಯ ಸರ್ಕಾರದ ಕಳಂಕಿತ ಕೈಗಳ ಕೈವಾಡ ಇರುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ.”
“ಕೂಡಲೇ ಪಾ’ಕೈ’ಸ್ತಾನ್ ಸರ್ಕಾರ ಮತಾಂಧ ಗೂಂಡಾ ಬ್ರದರ್ಸ್‌ಗಳನ್ನು ಬಂಧಿಸಿ ಕ್ರಮಕೈಗೊಳ್ಳದೆ ಹೋದರೆ, ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಚ್ಚರ!” ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ