AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಾಯ ಮೀರಿ ಆಸ್ತಿ ಗಳಿಕೆ: ಕೊಡಗು, ಮೈಸೂರಿನಲ್ಲಿ ಅಧಿಕಾರಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ

ಆದಾಯ ಮೀರಿ ಆಸ್ತಿ ಗಳಿಕೆ, ಲಂಚ ಆರೋಪ ಸಂಬಂಧ ಬೆಂಗಳೂರು, ಕೊಡಗು ಹಾಗೂ ಮೈಸೂರಿನಲ್ಲಿರುವ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.

ಆದಾಯ ಮೀರಿ ಆಸ್ತಿ ಗಳಿಕೆ: ಕೊಡಗು, ಮೈಸೂರಿನಲ್ಲಿ ಅಧಿಕಾರಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ
ಮೈಸೂರು ಮತ್ತು ಕೊಡಗಿನನಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ
TV9 Web
| Edited By: |

Updated on:Oct 21, 2022 | 2:42 PM

Share

ಮೈಸೂರು: ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಮೂವರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳು ಸೇರಿದಂತೆ ಒಟ್ಟು 7 ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಎಡಿಜಿಪಿ ಪ್ರಶಾಂತ್ ಕುಮಾರ್ ಹಾಗೂ ಲೋಕಾಯುಕ್ತ ಎಸ್​ಪಿ ಸುರೇಶ್ ಬಾಬು ಮಾರ್ಗದರ್ಶ‌ನದಲ್ಲಿ ಡಿಎಸ್‌ಪಿಗಳಾದ ಕೃಷ್ಣಯ್ಯ ಮಾಲ್ತೀಶ್, ಪವನ್ ಕುಮಾರ್, ಎಸ್​ಟಿ ಒಡೆಯರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.  ಮೈಸೂರಿನ ಕೆ‌.ಸಿ.ಬಡಾವಣೆ ನಿವಾಸಿಯಾಗಿರುವ ಮಡಿಕೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪಿಡಬ್ಲ್ಯುಡಿ ಇಲಾಖೆ ಇಇ ಡಿ.ನಾಗರಾಜು ಅವರಿಗೆ ಸೇರಿದ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ಮನೆಯನ್ನು ಜಾಲಾಡಿದ ಅಧಿಕಾರಿಗಳು ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.

ಇನ್ನು ನೀರಾವರಿ ಇಲಾಖೆಯ ಜ್ಯೂನಿಯರ್ ಇಂಜಿನಿಯರ್ ಆಗಿರುವ ರಫೀಕ್ ಅವರಿಗೆ ಕುಶಾಲನಗರದಲ್ಲಿರುವ​ ಮನೆಗೂ ಅಧಿಕಾರಿಗಳು ಎಂಟ್ರಿ ಕೊಟ್ಟು ದಾಖಲೆಗಳನ್ನು ಪರಿಶೀಲನೆ ನಡೆಸಿದೆ. ಇದೇ ವೇಳೆ ಮತ್ತೊಂದು ತಂಡ ಮಾದಾಪಟ್ಟಣದಲ್ಲಿರುವ ರಾಜ್ಯ ಗುಪ್ತವಾರ್ತೆ ಪೊಲೀಸ್ ಇನ್​ಸ್ಪೆಕ್ಟರ್ ಎಂ.ಮಹೇಶ್ ಅವರಿಗೆ ಸೇರಿದ ಮನೆಯ ಮೇಲೂ ದಾಳಿ ನಡೆಸಿದೆ.

ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇ

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಎಇ ನಾಗರಾಜ್ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬಿಳೇಕಹಳ್ಳಿಯ ಬೆಸ್ಕಾಂ ಇಲಾಖೆ ಎಇ ಆಗಿರುವ ನಾಗರಾಜ್, ಮಂಜೂರಾದ ಕೆಲಸಕ್ಕೆ ಎಕ್ಸಿಕ್ಯೂಟ್​ಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ. ಅದರಂತೆ ಆರ್​ಆರ್ ನಗರ ಮನೆ ಹತ್ತಿರ ಹಣ ಸಂಬಂಧಪಟ್ಟ ಗುತ್ತಿಗೆದಾರನ ಬಳಿಯಿಂದ 50 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ದಾಳಿ ನಡೆಸಿದ ಅಧಿಕಾರಿಗಳು ನಾಗರಾಜ್​ನನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್​ಪಿ ಅಶೋಕ್ ನೇತೃತ್ವದ ತಂಡದಿಂದ ಈ ದಾಳಿ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:42 pm, Fri, 21 October 22

ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ