AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ತೀರಿಸೋಕೆ ರೈಲ್ವೆ ಪ್ರಯಾಣಿಕರ ವಸ್ತು ಕಳ್ಳತನ ಮಾಡ್ತಿದ್ದ ಅಸಿಸ್ಟೆಂಟ್ ಲೋಕೋ ಪೈಲಟ್ ಅರೆಸ್ಟ್

13 ಲಕ್ಷ ಸಾಲ ಮಾಡಿಕೊಂಡಿದ್ದ ಅಸಿಸ್ಟೆಂಟ್ ಲೋಕೋ ಪೈಲಟ್ ಪಡಿ ಸ್ವರಾಜ್ ಅವರು ಸಾಲ ತೀರಿಸೋಕೆ ರೈಲ್ವೆ ಪ್ರಯಾಣಿಕರ ವಸ್ತುಗಳ ಕಳ್ಳತನಕ್ಕೆ ಇಳಿದಿದ್ದರು. ಸದ್ಯ ಅರಸಿಕೆರೆ ರೈಲ್ವೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸ್ವರಾಜ್ ಅವರನ್ನು ಬಂಧಿಸಿದ್ದಾರೆ.

ಸಾಲ ತೀರಿಸೋಕೆ ರೈಲ್ವೆ ಪ್ರಯಾಣಿಕರ ವಸ್ತು ಕಳ್ಳತನ ಮಾಡ್ತಿದ್ದ ಅಸಿಸ್ಟೆಂಟ್ ಲೋಕೋ ಪೈಲಟ್ ಅರೆಸ್ಟ್
ಪಡಿ ಸ್ವರಾಜ್
Jagadisha B
| Updated By: ಆಯೇಷಾ ಬಾನು|

Updated on: Jan 30, 2024 | 7:44 AM

Share

ಬೆಂಗಳೂರು, ಜ.30: ಸಾಲ ತೀರಿಸೋಕೆ ಪರದಾಡುತ್ತಿದ್ದ ಅಸಿಸ್ಟೆಂಟ್ ಲೋಕೋ ಪೈಲಟ್ (Assistant Loco Pilot)  ಸಾಲ ತೀರಿಸಲು ಕಳ್ಳತನದ (Theft) ದಾರಿ ಹಿಡಿದು ಜೈಲು ಸೇರಿದ್ದಾರೆ. ಅರಸಿಕೆರೆ ರೈಲ್ವೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಅಸಿಸ್ಟೆಂಟ್ ಲೋಕೋ ಪೈಲಟ್ ಪಡಿ ಸ್ವರಾಜ್ ಅವರನ್ನು ಬಂಧಿಸಿ 3 ಲಕ್ಷದ 33 ಸಾವಿರದ 489 ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ರೈಲ್ವೆ ಪೊಲೀಸರು ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಾಲ ತೀರಿಸೋಕೆ ಪಡಿ ಸ್ವರಾಜ್ ರೈಲ್ವೆ ಪ್ರಯಾಣಿಕರ ವಸ್ತುಗಳ ಕಳ್ಳತನಕ್ಕೆ ಇಳಿದಿದ್ದರು. ಒಂದು ವರ್ಷದ ಹಿಂದೆಯಷ್ಟೇ ತುಂಬುಬಡ ಕುಟುಂಬದ ಹುಡಗಿಯನ್ನ ಮದುವೆಯಾಗಿದ್ದ ಪಡಿ ಸ್ವರಾಜ್ ಸುಮಾರು 13 ಲಕ್ಷ ಸಾಲ ಮಾಡಿಕೊಂಡಿದ್ದರು. ಮೈ ತುಂಬಾ ಇದ್ದ ಸಾಲ ತೀರಿಸಲಾಗದೇ ಒದ್ದಾಡುತ್ತಿದ್ದರು. ಈ ವೇಳೆ ಬೆಂಗಳೂರಿನಿಂದ ಉಡುಪಿಗೆ ಪ್ರಯಾಣಿಸುತ್ತಿದ್ದ ಓರ್ವ ಪ್ರಯಾಣಿಕರು ಮಲಗಿದ್ದಾಗ ಅವರ ಲ್ಯಾಪ್ ಟಾಪ್ ಬಾಗ್ ಕಳ್ಳತನವಾಗಿತ್ತು. ಈ ಪ್ರಕರಣದ ತನಿಖೆ ಕೈ ಗೊಂಡಾ ಗಪಡಿ ಸ್ವರಾಜ್ ಕೈ ಚಳಕ ಬಯಲಾಗಿದೆ.

ಅನುಮಾನ ಬಂದು ಪೊಲೀಸರು, ಪಡಿ ಸ್ವರಾಜ್ ಟ್ರಾಲಿ ಬ್ಯಾಗ್ ಪರಿಶೀಲಿಸಿದ್ದು ಅತನ ಬ್ಯಾಗ್​ನಲ್ಲಿ ಮೊಬೈಲ್ ಫೋನ್​ಗಳು, ಆಭರಣ ಪತ್ತೆಯಾಗಿದೆ. ಅದರ ಬಗ್ಗೆ ಕೇಳಿದಾಗ ಮೊದಲಿಗೆ ತನ್ನ ಹೆಂಡತಿಯ ಆಭರಣ ಎಂದು ಸ್ವರಾಜ್ ಕಥೆ ಕಟ್ಟಿದ್ದ. ಅನಂತರ ಪೊಲೀಸರ ವಿಚಾರಣೆಯಲ್ಲಿ ಕಳ್ಳತನ ಮಾಡುತ್ತಿರೋದಾಗಿ ತಪ್ಪೊಪ್ಪಿಕೊಂಡರು. ಆರೋಪಿಯ ವಿಚಾರಣೆಯಿಂದ ಒಟ್ಟು 5 ಪ್ರಕರಣಗಳು ಬೆಳಕಿಗೆ ಬಂದಿದೆ. ಒಟ್ಟು 3 ಲಕ್ಷದ 33 ಸಾವಿರ 489 ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ನೆಲಮಂಗಲ: ಗುರಾಯಿಸಿ ನಿಂದಿಸಿದ ಯುವಕನಿಗೆ ಚಾಕು ಇರಿತ

ಬೈಕ್ ಚಕ್ರಕ್ಕೆ ಟಾರ್ಪಲ್ ಸಿಲುಕಿ ಸವಾರ ಸಾವು

ರಸ್ತೆಯಲ್ಲಿ ರೈತರು ಹುರುಳಿ ಹುಲ್ಲನ್ನು ಒಕ್ಕಣೆ ಮಾಡುತ್ತಿದ್ದರು. ಹುರುಳಿ ಹುಲ್ಲಿನ ಗುಡ್ಡೆಗೆ ಹಾಕಿದ್ದ ಟಾರ್ಪಲ್ ಬೈಕ್ ಚಕ್ರಕ್ಕೆ ಸಿಲುಕಿ ಸವಾರ ಸಾವನ್ನಪ್ಪಿದ್ದಾನೆ. ಚಾಮರಾಜನಗರ ಜಿಲ್ಲೆಯ ಅರಕಲವಾಡಿ ಸಮೀಪ ಘಟನೆ ನಡೆದಿದ್ದು, ಬೈಕ್ ಹಿಂಬದಿ ಸವಾರ ಮಹಾದೇವಯ್ಯ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಇನ್ನೂ ಸವಾರ ಉದಯ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ರು.

ಆಕಸ್ಮಿಕ ಬೆಂಕಿಗೆ ಮೆಕ್ಕೆಜೋಳ ಬಣವೆ ಭಸ್ಮ

ಆಕಸ್ಮಿಕ ಬೆಂಕಿಯಿಂದ ಮೆಕ್ಕೆಜೋಳ, ಶೇಂಗಾ ಬಣವೆಗಳು ಸುಟ್ಟು ಕರಕಲಾಗಿವೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಈಚಲ ಬೊಮ್ಮನಹಳ್ಳಿಯಲ್ಲಿ ಅವಘಡ ನಡೆದಿದೆ. ರೈತ ರಾಘವೇಂದ್ರಗೆ ಸೇರಿದ ಮೆಕ್ಕೆಜೋಳದ ಹೊಟ್ಟು, ಶೇಂಗಾ ಹೊಟ್ಟು ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ