AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ರಾಮಮಂದಿರ ಮಂತ್ರಾಕ್ಷತೆ ವಿತರಣಾ ಸಂಚಾಲಕನ ಮೇಲೆ ಹಲ್ಲೆ

ಇದೇ ಜನವರಿ 22ರಂದು ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಆಗಮಿಸಿದ ಮಂತ್ರಾಕ್ಷತೆಯನ್ನು ಹಿಂದೂ ಸಂಘಟನೆಗಳು ಮನೆ-ಮನೆಗೆ ವಿತರಣೆ ಮಾಡುತ್ತಿದ್ದಾರೆ. ಅದರಂತೆ ಮಂಗಳೂರಿನಲ್ಲಿ ರಾಮಮಂದಿರ ಮಂತ್ರಾಕ್ಷತೆ ವಿತರಣಾ ಸಂಚಾಲಕನ ಮೇಲೆ ಹಲ್ಲೆ ನಡೆದಿದೆ.

ಮಂಗಳೂರು: ರಾಮಮಂದಿರ ಮಂತ್ರಾಕ್ಷತೆ ವಿತರಣಾ ಸಂಚಾಲಕನ ಮೇಲೆ ಹಲ್ಲೆ
ಸಂತೋಷ್, ಹಲ್ಲೆಗೊಳಗಾದ ಯುವಕ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Jan 16, 2024 | 4:57 PM

Share

ಮಂಗಳೂರು, (ಜನವರಿ 16): ರಾಮಮಂದಿರ ಮಂತ್ರಾಕ್ಷತೆ ವಿತರಣಾ (Ayodhya Ram Mandir Mantrakshate) ಸಂಚಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಪುತ್ತೂರಿನ ಮುಂಡೂರು ಎಂಬಲ್ಲಿ ನಡೆದಿದೆ. ಮುಂಡೂರು ಗ್ರಾಮದಲ್ಲಿ ಅಕ್ಷತೆ ಹಂಚುವ ಹೊಣೆ ಹೊತ್ತಿದ್ದ ಸಂತೋಷ್ ಮೇಲೆ ಸ್ಥಳೀಯ ನಿವಾಸಿ ಧನಂಜಯ್ ಮತ್ತು ಆತನ ಸಹಚರರು ಹಲ್ಲೆ ಮಾಡಿದ್ದಾರೆ ಆರೋಪಿಸಲಾಗಿದೆ. ಗಲಾಟೆ ತಡೆಯಲು ಬಂದ ಸಂತೋಷ್ ತಾಯಿ ಮೇಲೂ ಸಹ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಸಂತೋಷ್ ಅವರು ಮನೆ ಮನೆಗೆ ಅಕ್ಷತೆ ಹಂಚುವುದಕ್ಕೆ ಒಂದು ಗುಂಪು ವಿರೋಧವ್ಯಕ್ತಪಡಿಸಿತ್ತು. ಇದೇ ದ್ವೇಷದಿಂದ ಸಂತೋಷ್‌ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಯಿಂದ ಗಾಯಗೊಂಡಿರುವ ಸಂತೋಷ್ ಹಾಗೂ ಆತನ ತಾಯಿಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Ayodhya Ram Mandir: ರಾಮ ಮಂದಿರದಲ್ಲಿ ರಾಮಲಲ್ಲಾ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ವಿಧಿವಿಧಾನಗಳು ಇಂದಿನಿಂದ ಪ್ರಾರಂಭ

ಈ ವಿಚಾರ ತಿಳಿಯುತ್ತಿದ್ದಂತೆಯೇ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಂಜೀವ ಮಠಂದೂರು, ಇದೊಂದು ರಾಜಕೀಯ ಪ್ರೇರಿತ ಹಲ್ಲೆಯಾಗಿದೆ. ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದರು.

ಇನ್ನು ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ