ಬೆಳಗಿನ ಜಾವ ಲಾರಿ ಡ್ರೈವರ್ ಮೇಲೆ ಮುಸುಕುಧಾರಿಗಳಿಂದ ಹಲ್ಲೆ, ದರೋಡೆ

|

Updated on: Nov 21, 2019 | 2:04 PM

ನೆಲಮಂಗಲ: 6ಜನ ಮುಸುಕುಧಾರಿಗಳು ಲಾರಿ ಡ್ರೈವರ್​ಗೆ ಲಾಂಗ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿ ದರೋಡೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಬಿಹಾರಿ ಮೂಲದ 25ವರ್ಷ ವಯಸ್ಸಿನ ದೀಪಕ್ ಕುಮಾರ್ ಹಲ್ಲೆಗೊಳಗಾದ ಚಾಲಕ. ಬೆಳಗಿನ ಜಾವ 5 ಗಂಟೆಗೆ ಈ ಘಟನೆ ನಡೆದಿದ್ದು, ಆಟೋದಲ್ಲಿ ಬಂದಿದ್ದ ಮುಸುಕುಧಾರಿಗಳು ಲಾರಿ ಡ್ರೈವರ್ ಮೇಲೆ ಹಲ್ಲೆ ನಡೆಸಿ, ಜೇಬಿನಲ್ಲಿದ್ದ 3000 ಹಣ ಹಾಗೂ ಮೊಬೈಲ್ ದರೋಡೆ ಮಾಡಿದ್ದಾರೆ. ಡ್ರೈವರ್​ನನ್ನು ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಬೆಂಗಳೂರಿನ […]

ಬೆಳಗಿನ ಜಾವ ಲಾರಿ ಡ್ರೈವರ್ ಮೇಲೆ ಮುಸುಕುಧಾರಿಗಳಿಂದ ಹಲ್ಲೆ, ದರೋಡೆ
Follow us on

ನೆಲಮಂಗಲ: 6ಜನ ಮುಸುಕುಧಾರಿಗಳು ಲಾರಿ ಡ್ರೈವರ್​ಗೆ ಲಾಂಗ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿ ದರೋಡೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶೆಟ್ಟಿಹಳ್ಳಿಯಲ್ಲಿ ನಡೆದಿದೆ.

ಬಿಹಾರಿ ಮೂಲದ 25ವರ್ಷ ವಯಸ್ಸಿನ ದೀಪಕ್ ಕುಮಾರ್ ಹಲ್ಲೆಗೊಳಗಾದ ಚಾಲಕ. ಬೆಳಗಿನ ಜಾವ 5 ಗಂಟೆಗೆ ಈ ಘಟನೆ ನಡೆದಿದ್ದು, ಆಟೋದಲ್ಲಿ ಬಂದಿದ್ದ ಮುಸುಕುಧಾರಿಗಳು ಲಾರಿ ಡ್ರೈವರ್ ಮೇಲೆ ಹಲ್ಲೆ ನಡೆಸಿ, ಜೇಬಿನಲ್ಲಿದ್ದ 3000 ಹಣ ಹಾಗೂ ಮೊಬೈಲ್ ದರೋಡೆ ಮಾಡಿದ್ದಾರೆ. ಡ್ರೈವರ್​ನನ್ನು ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:19 pm, Thu, 21 November 19