ಹಾಡಹಗಲೇ ರೇಷ್ಮೆ ವ್ಯಾಪಾರಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ; ದಾಳಿಕೋರರಿಂದ ಪಾರಾದ ಫೈರೋಜ್
ಹಾಡಹಗಲೇ ರೇಷ್ಮೆ ವ್ಯಾಪಾರಿ ಫೈರೋಜ್ ಎಂಬುವವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ: ಹಾಡಹಗಲೇ ರೇಷ್ಮೆ (Silk) ವ್ಯಾಪಾರಿ ಫೈರೋಜ್ ಎಂಬುವವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಶಿಡ್ಲಘಟ್ಟದಲ್ಲಿ ನಡೆದಿದೆ. ಸ್ಟಾರ್ಸಿಟಿ ಬೈಕ್ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ. ಅದೃಷ್ಟವಶಾತ್ ಫೈರೋಜ್ ದಾಳಿಕೋರರಿಂದ ತಪ್ಪಿಸಿಕೊಂಡಿದ್ದಾರೆ. ಫೈರೋಜ್ನ ಎಡಗೈನ ಹೆಬ್ಬೆರಳು ಕತ್ತರಿಸಿದ್ದು, ಹೆಬ್ಬೆರಳು ಮರುಜೋಡಣೆಗಾಗಿ ಬೆಂಗಳೂರಿನ (Bengaluru) ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಹಿಂದೆ ಫೈರೋಜ್ ಸ್ನೇಹಿತ ಅಮ್ಜದ್ನ ಕೊಲೆಯಾಗಿತ್ತು. ಅಮ್ಜದ್ ಕೊಂದಿದ್ದ ಖಲಂದರ್ ಕಡೆಯವರಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಶಿಡ್ಲಘಟ್ಟ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಹುಬ್ಬಳ್ಳಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
ಹುಬ್ಬಳ್ಳಿ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಶೆಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಉತ್ತರ ಪ್ರದೇಶ ಮೂಲದ ಕುಮಾರ್ ಎಂಬುವನ ಮೇಲೆ ಹಲ್ಲೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಕುಮಾರ್ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಿರುದ್ಯೋಗಿಗಳನ್ನ ಬಳಸಿಕೊಂಡು ಡ್ರಗ್ಸ್ ಸರಬರಾಜು ಗ್ಯಾಂಗ್ ಬಂಧನ
ಬೆಂಗಳೂರು: ನಿರುದ್ಯೋಗಿಗಳನ್ನು ಬಳಸಿಕೊಂಡು ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಐವರನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಶಾಲ್ ಕುಮಾರ್, ಭೀಮಾಂಶು ಠಾಕೂರ್, ಸಾಗರ್ ಮಹಾಬಲಿಸಿಂಗ್, ಸುಬರ್ಜಿತ್ ಸಿಂಗ್ ಬಂಧಿತ ಆರೋಪಿಗಳು. ಆರೋಪಗಳು Loconto ಮೂಲಕ ಉದ್ಯೋಗದ ಆಸೆ ತೋರಿಸುತ್ತಿದ್ದರು.
ಆರೋಪಿಗಳು ಯುವಕರಿಗೆ ಉದ್ಯೋಗದ ಆಸೆ ತೋರಿಸಿ ನೇಮಕ ಮಾಡಿಕೊಳ್ಳುತ್ತಿದ್ದರು. ನಂತರ ಅಂತಾರಾಷ್ಟ್ರೀಯ ಕೊರಿಯರ್ ಸರ್ವಿಸ್ ಮೂಲಕ ಯುವಕರ ಬಳಿಗೆ ಡ್ರಗ್ಸ್ ಕಳುಹಿಸುತ್ತಿದ್ದರು.
ನಂತರ ಆರೋಪಿಗಳು ಇಂಟರ್ ನ್ಯಾಷನಲ್ ಕೊರಿಯರ್ ಸರ್ವೀಸ್ ಮೂಲಕ ಅವರ ಬಳಿಗೆ ಡ್ರಗ್ಸ್ ಕಳುಹಿಸುತ್ತಿದ್ದರು. ವಿವಿಧ ನಗರಗಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಗಿರಾಕಿಗಳನ್ನ ಸಂಪರ್ಕಿಸಿ ಪೋನ್ ಪೇ ಮೂಲಕ ಹಣ ಪಡೆದುಕೊಳ್ಳುತ್ತಾ ಇದ್ದರು.
ಹಣ ಪಡೆದ ಬಳಿಕ ಉದ್ಯೋಗದ ನೆಪದಲ್ಲಿ ಯುವಕರ ಮೂಲಕ ಡ್ರಗ್ಸ್ ಸಪ್ಲೈ ಮಾಡಿಸುತ್ತಾ ಇದ್ದರು. ಗಿಫ್ಟ್ ಬಾಕ್ಸ್, ಕೊರಿಯರ್ ಎನ್ ವಲಪ್ ಮುಖಾಂತರ ಡ್ರಗ್ಸ್ ಸರಬರಾಜು ಮಾಡಲಾಗುತ್ತಿತ್ತು. ಪೊಲೀಸರು ಆರೋಪಿಗಳಿಂದ ಎರಡು ಕೋಟಿ ಮೌಲ್ಯದ ವಿವಿಧ ರೀತಿಯ ಸಿಂಥೆಟಿಕ್ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಪೊಲೀಸ್ರು ಐದು ಬ್ಯಾಂಕ್ ಖಾತೆಗಳನ್ನ ಫ್ರೀಜ್ ಮಾಡಿದ್ದಾರೆ.
ಅಸಿಸ್ಟೆಂಟ್ ರಿಜಿಸ್ಟ್ರಾರ್ ಮೇಲೆ KSOU ವಿಸಿಯಿಂದ ಹಲ್ಲೆ ಆರೋಪ
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU) ಕುಲಪತಿ, ಅಸಿಸ್ಟೆಂಟ್ ರಿಜಿಸ್ಟ್ರಾರ್ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ತಡವಾಗಿ ಕಚೇರಿಗೆ ಬಂದಿದ್ದಕ್ಕೆ ಅಸಿಸ್ಟೆಂಟ್ ರಿಜಿಸ್ಟ್ರಾರ್ ಪ್ರದೀಪ್ ಗಿರಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಎಸ್ಓಯು ಕುಲಪತಿ ವಿದ್ಯಾಶಂಕರ್, ಪಿಎಸ್ ದೇವರಾಜು ವಿರುದ್ಧ ಆರೋಪ ಕೇಳಿ ಬಂದಿದೆ.
ತಡವಾಗಿ ಕಚೇರಿಗೆ ಬಂದಿದ್ದಕ್ಕೆ ಅಸಿಸ್ಟೆಂಟ್ ರಿಜಿಸ್ಟ್ರಾರ್ ಜೊತೆ ಜಗಳ ಪ್ರಾರಂಭವಾಗಿದೆ. ಮಾತಿನ ಚಕಮಕಿ ನಂತರ ಕೊಠಡಿಗೆ ಕರೆದೊಯ್ದು ಹಲ್ಲೆಗೈದ ಆರೋಪ ಕೇಳಿ ಬಂದಿದೆ. ಪ್ರದೀಪ್ ಗಿರಿ ಅವರಿಗೆ ಮುಖ, ಕಿವಿಗೆ ಗಾಯವಾಗಿದ್ದು, ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಯಲಕ್ಷ್ಮೀ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸಿದ್ದರಾಮೋತ್ಸವಕ್ಕೆ ಆಗಮಿಸುತ್ತಿದ್ದ ಕ್ರೂಸರ್ ಪಲ್ಟಿ, ಓರ್ವ ಸಾವು
ಬಾಗಲಕೋಟೆ: ಸಿದ್ದರಾಮೋತ್ಸವಕ್ಕೆ ಆಗಮಿಸುತ್ತಿದ್ದ ಕ್ರೂಸರ್ ಪಲ್ಟಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಬಾದಾಮಿ ತಾಲೂಕಿನ ಹೂಲಗೇರಿ ಸಮೀಪ ನಡೆದಿದೆ. ಚಿಕ್ಕಆಲಗುಂಡಿ ಗ್ರಾಮದ ಪ್ರಕಾಶ್ ಕಂಬಾರ(35) ಮೃತ ದುರ್ದೈವಿ. ಕ್ರೂಸರ್ ವಾಹನದಲ್ಲಿದ್ದ ನಾಲ್ವರಿಗೆ ಗಾಯ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಳೆ ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ವೃದ್ಧೆ ಸಾವು
ತುಮಕೂರು: ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧೆ ಸಾವನ್ನಪ್ಪಿರುವ ಘಟನೆ ತುಮಕೂರಿನ ಕ್ಯಾತ್ಸಂದ್ರ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ಸಕ್ಕರೆಗೊಲ್ಲಹಳ್ಳಿಯ ಜಯಮ್ಮ(81) ಮೃತ ದುರ್ದೈವಿ. ಬೆಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ವೃದ್ಧೆಗೆ ಡಿಕ್ಕಿ ಹೊಡೆದಿದೆ. ತುಮಕೂರು ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 4:13 pm, Tue, 2 August 22