AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಬುದ್ದಿ ಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಗೆ ಗ್ರಾಮಸ್ಥರಿಂದ ಥಳಿತ

ಬುದ್ದಿ ಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿಬಂದಿದ್ದು, ಆರೋಪಿಗೆ ಗ್ರಾಮಸ್ಥರು ಆರೋಪಿಗೆ ಧರ್ಮದೇಟು ನೀಡಿರುವ ಘಟನೆ ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೈಸೂರು: ಬುದ್ದಿ ಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಗೆ ಗ್ರಾಮಸ್ಥರಿಂದ ಥಳಿತ
ಆರೋಪಿಗೆ ಧರ್ಮದೇಟು
ವಿವೇಕ ಬಿರಾದಾರ
|

Updated on: Mar 29, 2023 | 8:17 AM

Share

ಮೈಸೂರು: ಬುದ್ದಿ ಮಾಂದ್ಯ (Dementia) ಬಾಲಕಿ (Child) ಮೇಲೆ ಅತ್ಯಾಚಾರಕ್ಕೆ (Rape) ಯತ್ನಿಸಿರುವ ಆರೋಪ ಕೇಳಿಬಂದಿದ್ದು, ಆರೋಪಿಗೆ ಗ್ರಾಮಸ್ಥರು ಆರೋಪಿಗೆ ಧರ್ಮದೇಟು ನೀಡಿರುವ ಘಟನೆ ಹುಣಸೂರು ಪೊಲೀಸ್ ಠಾಣಾ (Hunasuru Police Station) ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮಹದೇವ (57) ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಮಹದೇವ ಬುದ್ದಿಮಾಂದ್ಯ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಕೂಗಾಡಿದ್ದಾಳೆ. ಕೂಗಾಟದ ಶಬ್ಧ ಕೇಳಿ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ. ನಂತರ ಆರೋಪಿಯನ್ನು ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಥಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹುಣಸೂರು ಠಾಣಾ ಪೊಲೀಸರು ಆರೋಪಿ ಮಹದೇವನನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಮಹದೇವ ಅಷ್ಟೊತ್ತಿಗಾಗಲೇ ಅಸ್ವಸ್ಥನಾಗಿದ್ದನು. ಈ ಹಿನ್ನೆಲೆ ಆತನನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ಇದನ್ನೂ ಓದಿ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ, ಇಬ್ಬರು ಶಿಕ್ಷಕರು ಅಮಾನತು

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ಆನೇಕಲ್: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ 21 ವರ್ಷದ ಆರೋಪಿಗೆ ನ್ಯಾಯಾಲಯ ಪೋಸ್ಕೋ ಕಾಯ್ದೆಯಡಿ 10 ವರ್ಷಗಳ‌ ಕಠಿಣ ಸಜೆ, ‌10 ‌ಸಾವಿರ ರೂ. ದಂಡ ವಿಧಿಸಿದೆ. ಅಲ್ಲದೇ ಸಂತ್ರಸ್ತೆಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದೆ. 2017‌ರಲ್ಲಿ 14 ವರ್ಷದ ಬಾಲಕಿ ಕುರಿಕಾಯಲು ತೆರಳಿದ್ದರು. ಈ ವೇಳೆ ಆರೋಪಿ ಅಜ್ಜಿಯೊಬ್ಬರು ರಸ್ತೆಯಲ್ಲಿ ಬಿದ್ದಿದ್ದಾರೆ ಅಂತ ಆನೇಕಲ್‌ ತಾಲೂಕಿನ ಜಿಗಣಿ ಹೊರವಲಯಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಜಿಗಣಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಕುವಿನಿಂದ ಇರಿದು ತಂದೆಯಿಂದಲೇ ಮಗನ ಕೊಲೆ

ಕೋಲಾರ: ಚಾಕುವಿನಿಂದ ಇರಿದು ತಂದೆಯೇ ಮಗನನ್ನು ಕೊಲೆ ಮಾಡಿರುವ ಅಮಾನುಷ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ನಡೆದಿದೆ. ಪುತ್ರ ಭುವನ್(9) ಮೃತ ದುರ್ದೈವಿ. ತಂದೆ ಬಾಲಸುಬ್ರಹ್ಮಣ್ಯಂ ಕೊಲೆಗೈದ ಆರೋಪಿ. ನಂಗಲಿ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಆರೋಪಿ ಬಾಲಸುಬ್ರಹ್ಮಣ್ಯಂ ಈ ಹಿಂದೆ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ‌ ಬಂದಿದ್ದನು. ಈಗ ಚಾಕುವಿನಿಂದ ಚುಚ್ಚಿ ಮಗನನ್ನು ಕೊಲೆ ಮಾಡಿದ್ದಾನೆ. ಆರೋಪಿಯನ್ನು ನಂಗಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ