AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಗೆ ನಿಂದನೆ, ಹಲ್ಲೆ ಯತ್ನ ಆರೋಪ: ಕೊತ್ತನೂರು ಪೊಲೀಸರಿಂದ ಆಟೋ ಚಾಲಕ ಅರೆಸ್ಟ್​

ಈಶಾನ್ಯ ಭಾರತ ಮೂಲದ ಯುವತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿರುವ ಆರೋಪದ ಹಿನ್ನಲೆ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 2ರ ಸಂಜೆ 7.30ರ ಸುಮಾರಿಗೆ ಬೆಂಗಳೂರಲ್ಲಿ ನಡೆದಿದ್ದ ಘಟನೆ ಸಂಬಂಧ ಕೊತ್ತನೂರು ಪೊಲೀಸರಿಗೆ ಯುವತಿ ದೂರು ನೀಡಿದ್ದಳು. ಆ ಬೆನ್ನಲ್ಲೇ ಆಟೋ ಚಾಲಕನನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಯುವತಿಗೆ ನಿಂದನೆ, ಹಲ್ಲೆ ಯತ್ನ ಆರೋಪ: ಕೊತ್ತನೂರು ಪೊಲೀಸರಿಂದ ಆಟೋ ಚಾಲಕ ಅರೆಸ್ಟ್​
ಆಟೋ ಚಾಲಕನ ಬಂಧನ
ಪ್ರಸನ್ನ ಹೆಗಡೆ
|

Updated on:Oct 10, 2025 | 7:43 PM

Share

ಬೆಂಗಳೂರು, ಅಕ್ಟೋಬರ್​ 10: ಆಟೋ ಬುಕ್​ ಮಾಡಿ ಕ್ಯಾನ್ಸಲ್​ ಮಾಡಿದ ವಿಚಾರವಾಗಿ ಯುವತಿಗೆ ಅವಾಚ್ಯ ಶಬ್ದಗಳಿಂದ‌ ನಿಂದಿಸಿ, ಹಲ್ಲೆಗೆ ಯತ್ನಿಸಿರುವ ಆರೋಪದ ಹಿನ್ನಲೆ ಆಟೋ  ಚಾಲಕನನ್ನು (Auto Driver) ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪವನ್ ಎಂದು ಗುರುತಿಸಲಾಗಿದ್ದು, ಆಟೋ ವಿಚಾರವಾಗಿ ಈಶಾನ್ಯ ಭಾರತ ಮೂಲದ ಯುವತಿ ಜೊತೆಗೆ ಈತನ ಗಲಾಟೆಯ ವಿಡಿಯೋ ವೈರಲ್​ ಆಗಿತ್ತು.

ಅಕ್ಟೋಬರ್ 2ರ ಸಂಜೆ 7.30ರ ಸುಮಾರಿಗೆ ಈಶಾನ್ಯ ಭಾರತ ಮೂಲದ ಯುವತಿ ಕ್ಯಾಲಸನಹಳ್ಳಿಯಿಂದ ಬಾಣಸವಾಡಿಗೆ ತೆರಳಲು ಆಟೋ ಬುಕ್ ಮಾಡಿದ್ದಳು. ಆದರೆ ಬುಕ್ ಮಾಡಿದ್ದ ಆಟೋ ಬರೋದು ತಡವಾದ ಕಾರಣ, ಈ ವೇಳೆ ಅದೇ ಮಾರ್ಗದಲ್ಲಿ ಬಂದ ಮತ್ತೊಂದು ಆಟೋವನ್ನು ಆಕೆ ಹತ್ತಿದ್ದಳು. ಹಾಗೆಯೇ ಬುಕ್​ ಮಾಡಿದ್ದ ಆಟೋವನ್ನು ಕ್ಯಾನ್ಸಲ್​ ಮಾಡಿದ್ದಳು. ಆದರೆ ಈವೇಳೆಗೆ ಬುಕ್​ ಮಾಡಿದ್ದ ಆಟೋ ಕೂಡ ಸ್ಥಳ ತಲುಪಿದ್ದು, ಬೇರೆ ಆಟೋ ಹತ್ತಿ ಹೊರಟ ಯುವತಿ ಬಳಿ ಚಾಲಕ ಪವನ್ ಜಗಳ ತೆಗೆದಿದ್ದಾರೆ. ಅವಾಚ್ಯ ಶಬ್ದಗಳಿಂದ‌ ನಿಂದಿಸಿ, ಹೊಡೆಯಲು ಯತ್ನ ಮಾಡಿರುವ ಬಗ್ಗೆ ಯುವತಿ ಆರೋಪಿಸಿದ್ದಳು. ಘಟನೆ ಬಗ್ಗೆ ಕೊತ್ತನೂರು ಠಾಣೆಗೆ ದೂರನ್ನೂ ನೀಡಿದ್ದಳು. ಆ ದೂರು ಆಧರಿಸಿ ಪೊಲೀಸರು ಆಟೋ ಚಾಲಕನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಏಕಕಾಲಕ್ಕೆ ಎರಡು ಆಟೋ ಬುಕ್​ ಮಾಡಿದ ಯುವತಿ, ರೊಚ್ಚಿಗೆದ್ದ ಆಟೋ ಚಾಲಕ

ಪರ-ವಿರೋಧ ಚರ್ಚೆ

ವಿಡಿಯೋ ರೆಕಾರ್ಡ್​ ಮಾಡುತ್ತಿದ್ದರೂ ಕ್ಯಾರೇ ಎನ್ನದ ಆಟೋ ಚಾಲಕ ಪದೇ ಪದೆ ಹಲ್ಲೆಗೆ ಯತ್ನಿಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಳು. ಅಲ್ಲದೆ ಆ್ಯಪ್​ ಗಳ ಮೂಲಕ ಬುಕ್ಕಿಂಗ್​ ಮಾಡಿ ತೆರಳುವ ಆಟೋಗಳಲ್ಲಿನ ಸುರಕ್ಷತೆ ಬಗ್ಗೆಯೂ ಪ್ರಶ್ನೆ ಮಾಡಿ ವಿಡಿಯೋ ಹಂಚಿಕೊಂಡಿದ್ದಳು. ಆ ಬೆನ್ನಲ್ಲೇ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆಗಳು ಶುರುವಾಗಿವೆ. ಕೆಲವರು ಯುವತಿಯನ್ನು ಬೆಂಬಲಿಸಿದ್ದರೆ, ಇನ್ನು ಕೆಲವರು ಒಂದು ಆಟೋ ಬುಕ್​ ಮಾಡಿ ಮತ್ತೊಂದರಲ್ಲಿ ಹೋಗಿದ್ದು ತಪ್ಪಲ್ಲವಾ ಎಂದು ಪ್ರಶ್ನಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:40 pm, Fri, 10 October 25

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು