ಶಾಲೆಯ ಟೆರೇಸ್​ನಿಂದ ಬಿದ್ದು ವಿದ್ಯಾರ್ಥಿನಿ ಸಾವು, ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆ ಮಾಡಿರುವ ಶಂಕೆ, ಶಿಕ್ಷಕರ ವಿರುದ್ಧ ದೂರು ದಾಖಲು

ಅಯೋಧ್ಯೆಯ ಖಾಸಗಿ ಶಾಲೆಯ ಟೆರೇಸ್​ನಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿದ್ದು, ಸಾಮೂಹಿಕ ಅತ್ಯಾಚಾರ(Rape) ನಡೆಸಿ, ಮಗಳನ್ನು ಕೊಲೆ ಮಾಡಿದ್ದಾರೆ ಎಂದು ವಿದ್ಯಾರ್ಥಿನಿಯ ತಂದೆ ಆರೋಪಿಸಿದ್ದಾರೆ

ಶಾಲೆಯ ಟೆರೇಸ್​ನಿಂದ ಬಿದ್ದು ವಿದ್ಯಾರ್ಥಿನಿ ಸಾವು, ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆ ಮಾಡಿರುವ ಶಂಕೆ, ಶಿಕ್ಷಕರ ವಿರುದ್ಧ ದೂರು ದಾಖಲು
ಶಾಲೆImage Credit source: NDTV
Follow us
|

Updated on: May 28, 2023 | 12:56 PM

ಅಯೋಧ್ಯೆಯ ಖಾಸಗಿ ಶಾಲೆಯ ಟೆರೇಸ್​ನಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿದ್ದು, ಸಾಮೂಹಿಕ ಅತ್ಯಾಚಾರ(Rape) ನಡೆಸಿ, ಮಗಳನ್ನು ಕೊಲೆ ಮಾಡಿದ್ದಾರೆ ಎಂದು ವಿದ್ಯಾರ್ಥಿನಿಯ ತಂದೆ ಆರೋಪಿಸಿದ್ದಾರೆ. ಶಾಲೆಯ ಪ್ರಾಂಶುಪಾಲರು ಮತ್ತು ಇಬ್ಬರು ಸಿಬ್ಬಂದಿ, ಒಬ್ಬರು ಕ್ರೀಡಾ ಶಿಕ್ಷಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತರಗತಿ ಇಲ್ಲದಿದ್ದರೂ 10ನೇ ತರಗತಿ ವಿದ್ಯಾರ್ಥಿಯನ್ನು ಪ್ರಾಂಶುಪಾಲರು ಬೆಳಗ್ಗೆ 8:30ಕ್ಕೆ ಕರೆ ತಂದಿದ್ದಾರೆ ಎಂದು ಬಾಲಕಿಯ ತಂದೆ ಆರೋಪಿಸಿದ್ದಾರೆ. ನನ್ನ ಮಗಳಿಗೆ ಉಯ್ಯಾಲೆಯಿಂದ ಬಿದ್ದು ಗಾಯವಾಗಿದೆ ಎಂದು ಬೆಳಿಗ್ಗೆ 9:50 ರ ಸುಮಾರಿಗೆ ಪ್ರಾಂಶುಪಾಲರು ನನಗೆ ಮಾಹಿತಿ ನೀಡಿದರು ಎಂದು ತಂದೆ ಹೇಳಿದರು.

ನಾನು ಶಾಲೆಗೆ ತಲುಪಿದಾಗ, ನನ್ನ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ನನಗೆ ತಿಳಿಸಲಾಯಿತು. ಆಕೆಯ ದೇಹದಾದ್ಯಂತ ಗಾಯದ ಗುರುತುಗಳಿವೆ, ಉಯ್ಯಾಲೆಯಿಂದ ಬಿದ್ದರೆ ಈ ರೀತಿಯ ಗಾಯಗಳಾಗಲು ಸಾಧ್ಯವಿಲ್ಲ. ಮರಣೋತ್ತರ ಪರೀಕ್ಷೆಯು ಕಟ್ಟಡದಿಂದ ಬಿದ್ದ ಕಾರಣದಿಂದ ಗಾಯಗಳಾಗಿವೆ ಎಂದು ಹೇಳಿದೆ. ಮರಣೋತ್ತರ ಪರೀಕ್ಷೆಯ ಪರಿಣಾಮವಾಗಿ ಆಘಾತ ಮತ್ತು ರಕ್ತಸ್ರಾವವು ಸಾವಿಗೆ ಕಾರಣ ಎಂದು ವರದಿಗಳು ಹೇಳುತ್ತವೆ ಎಂದು ಅಯೋಧ್ಯೆಯ ಪೊಲೀಸ್ ಉಪ ನಿರೀಕ್ಷಕ ಜಿ ಮುನಿರಾಜ್ ಹೇಳಿದ್ದಾರೆ.

ವಿದ್ಯಾರ್ಥಿಯನ್ನು ಬೇರೆ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಪ್ರಾಂಶುಪಾಲರ ಹೇಳಿಕೆಗೆ ವ್ಯತಿರಿಕ್ತವಾಗಿ ಬಾಲಕಿ ಶಾಲಾ ಕಟ್ಟಡದ ಟೆರೇಸ್‌ನಿಂದ ಬಿದ್ದಿದ್ದಾಳೆ ಎಂಬುದು ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಅತ್ಯಾಚಾರ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ಓದಿ: ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್

ಶನಿವಾರ ಮಧ್ಯಾಹ್ನ ವಿದ್ಯಾರ್ಥಿನಿಯ ಕುಟುಂಬದವರ ದೂರಿನ ಮೇರೆಗೆ ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ವ್ಯವಸ್ಥಾಪಕರು ಹಾಗೂ ಕ್ರೀಡಾ ಶಿಕ್ಷಕರ ವಿರುದ್ಧ ಬಾಲಕಿ ತಂದೆ ಅತ್ಯಾಚಾರ, ಕೊಲೆ, ಸಾಕ್ಷ್ಯಾಧಾರಗಳ ನಾಶ ಪ್ರಕರಣ ದಾಖಲಿಸಿದ್ದಾರೆ. ಇಂದು ಮುಂಜಾನೆ ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಸಿ ಪೊಲೀಸರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಬಾಲಕಿಯ ತಂದೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು