Ayodhya: ದೇವಸ್ಥಾನದ ಅರ್ಚಕ ಆತ್ಮಹತ್ಯೆ, ಪೊಲೀಸರ ವಿರುದ್ಧ ಗಂಭೀರ ಆರೋಪ

ದೇವಾಲಯಗಳ ನಗರಿ ಅಯೋಧ್ಯೆಯ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ನರಸಿಂಹ ದೇವಸ್ಥಾನದ ಅರ್ಚಕರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ayodhya: ದೇವಸ್ಥಾನದ ಅರ್ಚಕ ಆತ್ಮಹತ್ಯೆ, ಪೊಲೀಸರ ವಿರುದ್ಧ ಗಂಭೀರ ಆರೋಪ
ಅರ್ಚಕರು

Updated on: May 02, 2023 | 11:53 AM

ದೇವಾಲಯಗಳ ನಗರಿ ಅಯೋಧ್ಯೆಯ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ನರಸಿಂಹ ದೇವಸ್ಥಾನದ ಅರ್ಚಕರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಅರ್ಚಕರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಪೊಲೀಸರು ತನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಅಯೋಧ್ಯೆಯ ನರಸಿಂಹ ದೇವಸ್ಥಾನದ ಅರ್ಚಕರನ್ನು ರಾಮ್ ಶಂಕರ್ ದಾಸ್ (28) ಎಂದು ಗುರುತಿಸಲಾಗಿದೆ. ಈ ಕುರಿತು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಇದೇ ದೇವಸ್ಥಾನದ ಹಿರಿಯರಾದ ಮಹಂತ್ ರಾಮಶರಣ್ ದಾಸ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಸ್ ವಿರುದ್ಧ ಪೊಲೀಸರು ಕೆಲ ದಿನಗಳ ಹಿಂದೆ ಪ್ರಕರಣ ದಾಖಲಿಸಿದ್ದರು ಎಂದು ಮೂಲಗಳು ತಿಳಿಸಿವೆ.

ರಾಮ್ ಶಂಕರ್ ದಾಸ್ ಅವರ ಮೃತದೇಹ ಸೋಮವಾರ ಮಧ್ಯಾಹ್ನ ದೇವಸ್ಥಾನದ ಅವರ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಬೆಂಗಳೂರು: ಡೆತ್​ನೋಟ್​ ಬರೆದಿಟ್ಟು 7ನೇ ಮಹಡಿದಿಂದ ಜಿಗಿದ ವಿದ್ಯಾರ್ಥಿನಿ

ಅಯೋಧ್ಯೆಯ ಇನ್‌ಸ್ಪೆಕ್ಟರ್ ಕೊತ್ವಾಲಿ ಮನೋಜ್ ಶರ್ಮಾ ಅರ್ಚಕ ರಾಮ್ ಶಂಕರ್ ದಾಸ್ ಮಾದಕ ವ್ಯಸನಿಯಾಗಿದ್ದರು, ಅವರು ಮಾದಕ ವ್ಯಸನದ ಅಮಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಮ ಅವರು ಪೊಲೀಸರ ಮೇಲೆ ಕೂಡ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us