ಅಪಘಾತದಲ್ಲಿ ರೈತ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್: ಕಾನ್​ಸ್ಟೇಬಲ್​ನಿಂದಲೇ ಹತ್ಯೆ!

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗೋಟೆ ಗದ್ಯಾಳ ಗ್ರಾಮದ ಬಳಿ ಅಪಘಾತದಲ್ಲಿ ರೈತರೊಬ್ಬರು ಮೃತಪಟ್ಟಿದ್ದಾಗಿ ವರದಿಯಾಗಿತ್ತು. ಆದರೆ, ಇದು ಅಪಘಾತ ಅಲ್ಲ, ಕೊಲೆ ಎಂಬ ಸತ್ಯಸಂಗತಿ ಬಯಲಾಗಿದೆ. ಆಸ್ತಿ ವಿಚಾರಕ್ಕೆ ರೈತನನ್ನು ವಿಜಯಪುರದ ಜಲನಗರ ಠಾಣೆ ಕಾನ್​ಸ್ಟೇಬಲ್ ಕೊಲೆ ಮಾಡಿದ್ದಾಗಿ ತಿಳಿದುಬಂದಿದೆ.

ಅಪಘಾತದಲ್ಲಿ ರೈತ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್: ಕಾನ್​ಸ್ಟೇಬಲ್​ನಿಂದಲೇ ಹತ್ಯೆ!
ಕೊಲೆ ಆರೋಪಿಗಳಾದ ಕಾನ್​ಸ್ಟೇಬಲ್ ಮನ್ಸೂರ್ ಅಲಿ ಮತ್ತು ಈತನ ಸಹೋದರ ಮೆಹಮೂದ್
Follow us
TV9 Web
| Updated By: Rakesh Nayak Manchi

Updated on:Dec 19, 2023 | 8:40 AM

ಬಾಗಲಕೋಟೆ, ಡಿ.19: ಜಿಲ್ಲೆಯ (Bagalkot) ಜಮಖಂಡಿ ತಾಲೂಕಿನ ಗೋಟೆ ಗದ್ಯಾಳ ಗ್ರಾಮದ ಬಳಿ ಅಪಘಾತದಲ್ಲಿ ರೈತರೊಬ್ಬರು ಮೃತಪಟ್ಟ ಪ್ರಕರಣ ಇದೀಗ ತಿರುವು ಪಡೆದುಕೊಂಡಿದೆ. ಆಸ್ತಿ ವಿಚಾರವಾಗಿ ರೈತನನ್ನು ವಿಜಯಪುರದ ಜಲನಗರ ಠಾಣೆ ಕಾನ್​ಸ್ಟೇಬಲ್ ಕೊಲೆ (Murder) ಮಾಡಿದ್ದಾಗಿ ತಿಳಿದುಬಂದಿದೆ.

ಡಿಸೆಂಬರ್ 5 ರಂದು ಬೆಳಗ್ಗೆ ಹತ್ತೂವರೆ ಸಮಯಕ್ಕೆ ಟಾಟಾ‌ ಸಫಾರಿ ಬೈಕ್ ಮುಖಾಮುಖಿ ಡಿಕ್ಕಿಯಾಗಿ ರೈತ ಮಡ್ಡೆಸಾಬ್ ಗಲಗಲಿ (55) ಮೃತಪಟ್ಟಿದ್ದರು ಎಂದು ವರದಿಯಾಗಿತ್ತು. ಆದರೆ ಇದು ಅಪಘಾತವಲ್ಲ, ಆಸ್ತಿ ವಿಚಾರದಲ್ಲಿ ನಡೆದ ಕೊಲೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ: 14 ವರ್ಷ 6 ಕೊಲೆ, ಗೃಹಿಣಿಯೊಬ್ಬಳ ದ್ವೇಷದ ನಿಜ ಕತೆ ನೆಟ್​ಫ್ಲಿಕ್ಸ್​ನಲ್ಲಿ

ಮುಧೋಳ ತಾಲೂಕಿನ ಶಿರೋಳ‌ ಗ್ರಾಮದಲ್ಲಿರುವ ಮೂರುವರೆ ಎಕರೆ ಜಮೀನು ವಿವಾದ ವಿಚಾರವಾಗಿ ಕಾನ್​ಸ್ಟೇಬಲ್ ಮನ್ಸೂರ್ ಅಲಿ ಟಾಟಾ ಸಫಾರಿ ಕಾರಿನಿಂದ ಬೈಕಕ್​ಗೆ ಡಿಕ್ಕಿ‌ ಹೊಡೆದು ಮಡ್ಡೆಸಾಬ್ ಗಲಗಲಿ ಅವರನ್ನು ಕೊಲೆ ಮಾಡಿದ್ದನು. ಕೃತ್ಯ ಎಸಗಲು ಸಹೋದರ‌ ಮೆಹಮೂದ್ ಕೈಜೋಡಿಸಿದ್ದಾನೆ.

ಸದ್ಯ, ಕೃತ್ಯದ ಸಮಯದಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣ ದಾಖಲಿಸಿದ್ದ ಸಾವಳಗಿ ಠಾಣಾ ಪೊಲೀಸರು ಇದೀಗ ಕೊಲೆ ಪ್ರಕರಣ ದಾಖಲಿಸಿಕೊಂಡು ಮನ್ಸೂರ್ ಹಾಗೂ ಈತನ ಸಹೋದರ ಮೆಹಮೂದ್​ನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:39 am, Tue, 19 December 23

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ