ಬಾಗಲಕೋಟೆ: ಆಸ್ತಿಗಾಗಿ ಅಪ್ಪನನ್ನೇ ಕೊಲೆ ಮಾಡಿಸಿದ್ದ ಮಗ, ಸೊಸೆ ಅರೆಸ್ಟ್

ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ವಾಸಿಗಳಾದ ತಂದೆ ಚೆನ್ನಪ್ಪ ಮತ್ತು ಮಗ ಚನ್ನಬಸಪ್ಪ ನಡುವೆ 37 ಎಕರೆ ಜಮೀನನ್ನು ಭಾಗ ಮಾಡುವ ವಿಚಾರಕ್ಕೆ ಪದೆ ಪದೆ ಗಲಾಟೆ ನಡೆಯುತ್ತಿತ್ತು. ಹೀಗಾಗಿ ಚನ್ನಬಸಪ್ಪ, ಪತ್ನಿ ಶಿವಬಸವ್ವ ಮತ್ತು ಚನ್ನಬಸಪ್ಪನ ಆಪ್ತ ರಮೇಶ್ ಮನಗೂಳಿ ಒಟ್ಟಿಗೆ ಸೇರಿ ಕೊಲೆ ಮಾಡಲು ಯೋಚನೆ ರೂಪಿಸಿದ್ದರು. ಮುಂದೇನಾಯ್ತು ಈ ಸ್ಟೋರಿ ಓದಿ..

ಬಾಗಲಕೋಟೆ: ಆಸ್ತಿಗಾಗಿ ಅಪ್ಪನನ್ನೇ ಕೊಲೆ ಮಾಡಿಸಿದ್ದ ಮಗ, ಸೊಸೆ ಅರೆಸ್ಟ್
ಪ್ರಾತಿನಿಧಿಕ ಚಿತ್ರ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ವಿವೇಕ ಬಿರಾದಾರ

Updated on: Jan 27, 2024 | 9:45 AM

ಬಾಗಲಕೋಟೆ, ಜನವರಿ 27: ಆಸ್ತಿಗಾಗಿ (Property) ಸುಪಾರಿ ಕೊಟ್ಟು ಅಪ್ಪನನ್ನೇ ಮಗ ಕೊಲೆ ಮಾಡಿಸಿದ್ದಾನೆ. ಚೆನ್ನಪ್ಪ (66) ಕೊಲೆಯಾದ ತಂದೆ. ಚನ್ನಬಸಪ್ಪ ಕೊಲೆ‌ ಮಾಡಿಸಿದ‌ ಮಗ. ಮಾಂತೇಶ್ ಮರಡಿಮಠ ಕೊಲೆ‌ ಮಾಡಿದ ಆರೋಪಿ. ಚೆನ್ನಪ್ಪನ ಕುಟುಂಬ ಬಾಗಲಕೋಟೆ (Bagalkot) ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ವಾಸಿಸುತ್ತಿತ್ತು. 37 ಎಕರೆ ಜಮೀನನ್ನು ಭಾಗ ಮಾಡುವ ವಿಚಾರಕ್ಕೆ ತಂದೆ ಮತ್ತು ಮಗನ ನಡುವೆ ಪದೆ ಪದೆ ಗಲಾಟೆ ನಡೆಯುತ್ತಿತ್ತು. ಹೀಗಾಗಿ ಚನ್ನಬಸಪ್ಪ, ಪತ್ನಿ ಶಿವಬಸವ್ವ ಮತ್ತು ಚನ್ನಬಸಪ್ಪನ ಆಪ್ತ ರಮೇಶ್ ಮನಗೂಳಿ ಒಟ್ಟಿಗೆ ಸೇರಿ ಕೊಲೆ ಮಾಡಲು ಯೋಚನೆ ರೂಪಿಸಿದ್ದರು.

ನಂತರ ವಿಜಯಪುರ ಜಿಲ್ಲೆಯ ನಿಡಗುಂದಿ ಮೂಲದ ‌ಮಾಂತೇಶ್ ಮರಡಿಮಠ ಎಂಬುವನಿಗೆ 3 ಲಕ್ಷ ರೂ. ನೀಡಿ ಚೆನ್ನಪ್ಪನನ್ನು ಕೊಲೆ ಮಾಡುವಂತೆ ಸುಫಾರಿ ನೀಡಿದ್ದಾರೆ. ಸುಫಾರಿ ಪಡೆದ ‌ಮಾಂತೇಶ್ ಮರಡಿಮಠ ಜನವರಿ 25ರ ರಾತ್ರಿ ರಾಂಪುರ‌ ಗ್ರಾಮದ ಬಳಿ ಚೆನ್ನಪ್ಪನನ್ನು ಮಚ್ಚಿನಿಂದ ಕೊಚ್ಚಿ, ಕಲ್ಲಿನಿಂದ ತಲೆ ಜಜ್ಜಿ‌‌ ಕೊಲೆ ಮಾಡಿದ್ದಾನೆ. ವಿಚಾರ ತಿಳಿದು ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮತ್ತು ಪ್ರಕರಣ ದಾಖಲಿಸಿಕೊಂಡರು.

ಪೊಲೀಸರ ತನಿಖೆ ನಡೆಸಿ ಕೊಲೆ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಪ್ರಕರಣದ ಆರೋಪಿಗಳಾದ ಮಗ ಚನ್ನಬಸಪ್ಪ, ಸೊಸೆ ಶಿವಬಸವ್ವ ಸೇರಿದಂತೆ ನಾಲ್ವರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಬೇರೊಬ್ಬಳ ಮೋಜಿಗೆ ಬಿದ್ದು ಪತ್ನಿಯನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ಕಟ್ಟಿ ಕೆರೆಗೆ ಎಸೆದ ಪತಿ

ಪತಿ, ಅತ್ತೆ-ಮಾವನ ಕಿರುಕುಳದಿಂದ ಬೇಸತ್ತು ಗೃಹಿಣಿ ಆತ್ಮಹತ್ಯೆ

ಮೈಸೂರು: ಪತಿ, ಅತ್ತೆ-ಮಾವನ ಕಿರುಕುಳದಿಂದ ಬೇಸತ್ತು ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ. 35 ವರ್ಷದ ವಿಜಯಲಕ್ಷ್ಮೀ ಮೃತ ದುರ್ದೈವಿ. ವಿಜಯಲಕ್ಷ್ಮೀ ದಾಂಪತ್ಯ ಜೀವನಕ್ಕೆ ಕಾಲಿಟ್ಟು 12 ವರ್ಷಗಳಾಗಿವೆ. ಎರಡು ಮುದ್ದಾದ ಮಕ್ಕಳಿವೆ. ಆದರೆ ವರದಕ್ಷಿಣೆಗಾಗಿ ಅತ್ತೆ, ಮಾವ, ಮೈದುನ ಮತ್ತು ಪತಿ ಕಿರುಕುಳ ತಾಳದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ