Bagalakote: ಕೊಟ್ಟ ಸಾಲ ಸ್ನೇಹಿತರು ವಾಪಸ್ ನೀಡದಿದ್ದಕ್ಕೆ ಪಶುವೈದ್ಯ ಆತ್ಮಹತ್ಯೆ!

ಕೊಟ್ಟ ಸಾಲವನ್ನು ಸ್ನೇಹಿತರು ಹಿಂದಿರುಗಿಸಿಲ್ಲ ಎಂದು ಮನನೊಂದ ಪಶುವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದ್ದು, ಸ್ಥಳಕ್ಕೆ ಜಮಖಂಡಿ ಗ್ರಾಮಾಂತರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Bagalakote: ಕೊಟ್ಟ ಸಾಲ ಸ್ನೇಹಿತರು ವಾಪಸ್ ನೀಡದಿದ್ದಕ್ಕೆ ಪಶುವೈದ್ಯ ಆತ್ಮಹತ್ಯೆ!
ಆತ್ಮಹತ್ಯೆ ಮಾಡಿಕೊಂಡ ಪಶುವೈದ್ಯ ನಂದೆಪ್ಪ ಬಾಗೇವಾಡಿ (ಎಡಚಿತ್ರ) ಹಾಗೂ ಡೆತ್​ನೋಟ್ (ಬಲ ಚಿತ್ರ)
Follow us
Rakesh Nayak Manchi
|

Updated on: Mar 15, 2023 | 4:41 PM

ಬಾಗಲಕೋಟೆ: ಕೊಟ್ಟ ಸಾಲವನ್ನು ಸ್ನೇಹಿತರು ವಾಪಸ್ ಹಿಂದಿರುಗಿಸಿಲ್ಲ ಎಂದು ಮನನೊಂದು ಪಶುವೈದ್ಯರೊಬ್ಬರು ಆತ್ಮಹತ್ಯೆ (Veterinarian commits suicide) ಮಾಡಿಕೊಂಡ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ನಡೆದಿದೆ. ನಂದೆಪ್ಪ ಬಾಗೇವಾಡಿ ಮೃತ ಪಶುವೈದ್ಯ. ಬನಹಟ್ಟಿ ತಾಲೂಕಿನ ಹಿಪ್ಪರಗಿ ನಿವಾಸಿಯಾಗಿರುವ ನಂದೆಪ್ಪ ಅವರು ತನ್ನ ಓರ್ವ ಸಹೋದ್ಯೋಗಿ ಪಶುವೈದ್ಯನಿಗೆ 5 ಲಕ್ಷ ರೂಪಾಯಿ ಹಾಗೂ ಮತ್ತೊಬ್ಬ ಗೆಳೆಯನಿಗೆ 7 ಲಕ್ಷ ರೂಪಾಯಿ ಸಾಲು ನೀಡಿದ್ದರು. ಆದರೆ ಸಾಲ ಹಿಂದಿರುಗಿಸದ ಹಿನ್ನಲೆ ಮನೆಯಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಡೆತ್​ನೋಟ್ ಪತ್ತೆಯಾಗಿದ್ದು, ಇದರಲ್ಲಿ ಸಾಲ ನೀಡಿದ್ದರ ಬಗ್ಗೆ ಉಲ್ಲೇಖಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಜಮಖಂಡಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

24 ಕೇಸ್​ಗಳಲ್ಲಿ ವಾರೆಂಟ್ ಬಾಕಿ ಇದ್ದರೂ ಕಳ್ಳತನ ಮಾಡುತ್ತಿದ್ದ ಇಬ್ಬರು ಅರೆಸ್ಟ್

ಬೆಂಗಳೂರು: ಕಳೆದ 14 ವರ್ಷಗಳಿಂದ ಕಳ್ಳತನ ಮಾಡಿ 24 ಕೇಸ್​ಗಳಲ್ಲಿ ವಾರೆಂಟ್ ಬಾಕಿ ಇದ್ದು ಮತ್ತೆ ಕಳ್ಳತನ ಮಾಡುತ್ತಿದ್ದ ಅರೋಪಿಗಳನ್ನು ನಗರದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಮ್ರಾನ್ ಅಲಿಯಾಸ್ ಚೋರ್ ಇಮ್ರಾನ್ ಮತ್ತು ನೂರುಲ್ಲಾ ಮುಲ್ಲಾ ಬಂಧಿತ ಅರೋಪಿಗಳು. ಇವರ ಬಳಿಯಿಂದ 70 ಲಕ್ಷ ಮೌಲ್ಯದ 1.522 ಕೆಜಿ ಚಿನ್ನದ ಒಡವೆಗಳು ಮತ್ತು ಚಿನ್ನದ ಗಟ್ಟಿ ವಶಕ್ಕೆ ಪಡೆಯಲಾಗಿದೆ. ಸದ್ಯ ಆರೋಪಿಗಳ ಬಂಧನದಿಂದಾಗಿ ಹಲಸೂರು ಗೇಟ್, ಕೆ ಪಿ ಅಗ್ರಹಾರ, ಎಸ್ ಆರ್ ನಗರ , ಕೋಣನಕುಂಟೆ, ಕೆ ಆರ್ ಪೇಟೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳು ಬಯಲಿಗೆ ಬಂದಿವೆ.

ಇದನ್ನೂ ಓದಿ: ಸಾಲ ಮಾಡಿ ತಲೆಮರೆಸಿಕೊಂಡ ತಂದೆ: ಡಿಸಿ ಕಚೇರಿ ಮುಂದೆ ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕಮ್ಮಗೊಂಡನಹಳ್ಳಿ ರೈಲ್ವೆ ಬ್ರಿಡ್ಜ್​ ಬಳಿ ಶವ ಪತ್ತೆ

ಬೆಂಗಳೂರು: ಕಮ್ಮಗೊಂಡನಹಳ್ಳಿ ಬ್ರಿಡ್ಜ್​ ಬಳಿ ರೈಲು ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ದುರ್ಮರಣ ಹೊಂದಿದ್ದು, ಮೃತದೇಹ ಇಂದು ಪತ್ತೆಯಾಗಿದೆ. ಚಿಕ್ಕಬಾಣಾವರ-ಯಶವಂತಪುರ ರೈಲ್ವೆ ಮಾರ್ಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಯಶವಂತಪುರ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಅಲ್ಲದೆ, ವ್ಯಕ್ತಿಯ ಗುರುತು ಪತ್ತೆಗಾಗಿ ಎಲ್ಲೆಡೆ ಮಾಹಿತಿ ನೀಡುವಂತೆ ಪತ್ರ ಬರೆಯಲಾಗಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈಲಿನಡಿ ಸಿಲುಕುತ್ತಿದ್ದ ವೃದ್ಧರನ್ನು ರಕ್ಷಿಸಿದ ಬಂಗಾಳದ ಕಾನ್‌ಸ್ಟೆಬಲ್
ರೈಲಿನಡಿ ಸಿಲುಕುತ್ತಿದ್ದ ವೃದ್ಧರನ್ನು ರಕ್ಷಿಸಿದ ಬಂಗಾಳದ ಕಾನ್‌ಸ್ಟೆಬಲ್
ಬಾಡಿಗೆ ಮನೆಯಲ್ಲಿದ್ದೇನೆ, ಸಂಭಾವನೆಯಿಂದ ಸಾಲ ತೀರಿಸ್ತೀನಿ: ತ್ರಿವಿಕ್ರಮ್
ಬಾಡಿಗೆ ಮನೆಯಲ್ಲಿದ್ದೇನೆ, ಸಂಭಾವನೆಯಿಂದ ಸಾಲ ತೀರಿಸ್ತೀನಿ: ತ್ರಿವಿಕ್ರಮ್
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
ಬಿಜೆಪಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ: ಸಂಸದ
ಬಿಜೆಪಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ: ಸಂಸದ
ಹನುಮಂತುಗೆ ಹೊಡೆದರೂ ಭವ್ಯಾನ ಹೊರಗೆ ಹಾಕಲಿಲ್ಲ ಯಾಕೆ? ಮಂಜು ಹೇಳಿದ್ದೇನು?
ಹನುಮಂತುಗೆ ಹೊಡೆದರೂ ಭವ್ಯಾನ ಹೊರಗೆ ಹಾಕಲಿಲ್ಲ ಯಾಕೆ? ಮಂಜು ಹೇಳಿದ್ದೇನು?
ಜಲಮಂಡಳಿ ನಿರ್ವಹಣೆಗೆ ಹಣ ಹೊಂದಿಸಲಾಗುತ್ತಿಲ್ಲ, ದರಯೇರಿಕೆ ಅನಿವಾರ್ಯ: ಸಚಿವ
ಜಲಮಂಡಳಿ ನಿರ್ವಹಣೆಗೆ ಹಣ ಹೊಂದಿಸಲಾಗುತ್ತಿಲ್ಲ, ದರಯೇರಿಕೆ ಅನಿವಾರ್ಯ: ಸಚಿವ
ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಟ್ರಂಪ್ ಹೇಳಿಕೆ
ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಟ್ರಂಪ್ ಹೇಳಿಕೆ
ಇಕ್ಬಾಲ್ ಹುಸ್ಸೇನ್ ಹೇಳಿಕೆಗೆ ಕೌಂಟರ್ ನೀಡಿದ ಸಚಿವ ರಾಜಣ್ಣ
ಇಕ್ಬಾಲ್ ಹುಸ್ಸೇನ್ ಹೇಳಿಕೆಗೆ ಕೌಂಟರ್ ನೀಡಿದ ಸಚಿವ ರಾಜಣ್ಣ
ಕಾಂಗ್ರೆಸ್ ಪಕ್ಷ ಒಂದು ಸಿಟಿ ಬಸ್​ನಂತೆ, ಯಾರು ಬೇಕಾದರೂ ಹತ್ತಬಹುದು: ಲಾಡ್
ಕಾಂಗ್ರೆಸ್ ಪಕ್ಷ ಒಂದು ಸಿಟಿ ಬಸ್​ನಂತೆ, ಯಾರು ಬೇಕಾದರೂ ಹತ್ತಬಹುದು: ಲಾಡ್
150 ರೂ.ಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ದೊಡ್ಡ ಸಂಭಾವನೆ
150 ರೂ.ಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ದೊಡ್ಡ ಸಂಭಾವನೆ