ಕೊಪ್ಪಳದಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಓರ್ವ ಆರೋಪಿಯ ಬಂಧನ; ಮೂವರಿಗಾಗಿ ಶೋಧ

ತನ್ನನ್ನು ಅಪಹರಿಸಿ ಅತ್ಯಾಚಾರ ಎಸಗಿದ ನವೀನ್ ಮತ್ತು ಇದಕ್ಕೆ ಕುಮ್ಮಕ್ಕು ನೀಡಿದ ಮೂವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಯುವತಿ ದೂರಿನಲ್ಲಿ ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 363 (ಅಪಹರಣ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕೊಪ್ಪಳದಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಓರ್ವ ಆರೋಪಿಯ ಬಂಧನ; ಮೂವರಿಗಾಗಿ ಶೋಧ
ಸಾಂದರ್ಭಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on:Oct 15, 2023 | 10:32 AM

ಕೊಪ್ಪಳ ಅ.14: ಬಳ್ಳಾರಿಯ (Ballari) ಖಾಸಗಿ ಕಾಲೇಜು ವಿದ್ಯಾರ್ಥಿನಿಯನ್ನು ಆಟೋದಲ್ಲಿ ಕಿಡ್ನಾಪ್ ಮಾಡಿ ಕೊಪ್ಪಳಕ್ಕೆ (Koppal) ಕರೆತಂದು ಬಿಯರ್ ಕುಡಿಸಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತ ನವೀನ್ ಅತ್ಯಾಚಾರವೆಸಗಿದ ಆರೋಪಿ​. ಮೂವರನ್ನು ಬಳ್ಳಾರಿ ನಗರದ ಕೌಲ್ ಬಜಾರ್ ನಿವಾಸಿಗಳಾದ ನವೀನ್ ಕುಮಾರ್, ಮಹಮ್ಮದ್ ಸಾಕಿಬ್, ತನುಗೌಡ ಎಂದು ಗುರುತಿಸಲಾಗಿದ್ದು, ನಾಲ್ಕನೇ ಆರೋಪಿಯ ಗುರುತನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.

ಬಿಯರ್​ ಕುಡಿಸಿ ಅತ್ಯಾಚಾರವೆಸಗಿದ ದುಷ್ಕರ್ಮಿಗಳು

ಬಳ್ಳಾರಿಯ ಖಾಸಗಿ ಕಾಲೇಜೊಂದರಲ್ಲಿ ಬಿ. ಕಾಂ ಅಂತಿಮ ವರ್ಷದಲ್ಲಿ ಓದುತ್ತಿದ್ದಾಳೆ. ನಿನ್ನೆ (ಅ.14) ರಂದು ಪರೀಕ್ಷೆ ಬರೆಯುತ್ತಿದ್ದ ಯುವತಿಯನ್ನು ‘ನಿಮ್ಮ ಅಣ್ಣ ಬಂದಿದ್ದಾನೆ’ ಎಂದು ಸುಳ್ಳು ಹೇಳಿ ತರಗತಿಯಲ್ಲಿದ್ದ ಆಕೆಯನ್ನು ಆಯಾಳಿಂದ ಹೊರಗಡೆ ಕರೆಸಿಕೊಂಡ ಪರಿಚಿತ ಯುವಕ, ಬಳಿಕ ತನ್ನ ಮೂವರು ಸ್ನೇಹಿತರೊಟ್ಟಿಗೆ ಸೇರಿ ಆಕೆಯನ್ನು ಆಟೋದಲ್ಲಿ ಹೊತ್ತೊಯ್ದಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ: ಪ್ರೀತಿ ತಿರಸ್ಕರಿಸಿದ್ದಕ್ಕೆ ಕಿಡ್ನಾಪ್ ಮಾಡಿ ಅತ್ಯಾಚಾರವೆಸಗಿ ಯುವತಿ ಕೊಂದ ಪಾಗಲ್ ಪ್ರೇಮಿ

ಯುವತಿಯನ್ನು ಗಂಗಾವತಿ ತಾಲೂಕು ಸಣಾಪುರ ಬಳಿಯ ಖಾಸಗಿ ಹೋಟೆಲ್‌ವೊಂದರಲ್ಲಿ ಕೂಡಿಹಾಕಿ ಆಕೆಗೆ ಬಿಯರ್​ ಕುಡಿಸಿದ್ದಾರೆ. ಬಳಕಿ ಆರೋಪಿ ನವೀನ್​ ಅತ್ಯಾಚಾರ ಎಸಗಿದ್ದಾನೆ. ಉಳಿದ ಮೂವರು ಈ ಕೃತ್ಯಕ್ಕೆ ಕುಮ್ಮಕ್ಕು ನೀಡಿದ್ದಾರೆ. ಈ ಕುರಿತು ಸಂತ್ರಸ್ತೆ ನಗರದ ಮಹಿಳಾ ಠಾಣೆಯಲ್ಲಿ ನೀಡಿದ ದೂರು ನೀಡಿದ್ದಳು.

ತನ್ನನ್ನು ಅಪಹರಿಸಿ ಅತ್ಯಾಚಾರ ಎಸಗಿದ ನವೀನ್ ಮತ್ತು ಇದಕ್ಕೆ ಕುಮ್ಮಕ್ಕು ನೀಡಿದ ಮೂವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಯುವತಿ ದೂರಿನಲ್ಲಿ ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 363 (ಅಪಹರಣ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:29 am, Sun, 15 October 23

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು