Bangalore: ಚಾಕು ತೋರಿಸಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ
ಊರಿನ ಜನರು ಗಣೇಶನ ವಿಗ್ರಹವನ್ನು ವಿಸರ್ಜನೆ ಮಾಡಲು ಹೋಗಿದ್ದರು. ಈ ವೇಳೆ ಆರ್ಚ್ ಲೈಟ್ ಸ್ವಿಚ್ ಆಫ್ ಮಾಡಲು ತೆರಳಿದ್ದ ಮಹಿಳೆಗೆ ಚಾಕು ತೋರಿಸಿದ ಕಾಮುಕನೊಬ್ಬ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು: ಆರ್ಚ್ ಲೈಟ್ ಸ್ವಿಚ್ ಆಫ್ ಮಾಡಲು ತೆರಳಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಾಂತಲಾನಗರದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶನ ವಿಗ್ರಹವನ್ನು ವಿಸರ್ಜನೆ ಮಾಡಲು ಜನರು ತೆರಳಿದ್ದಾರೆ. ಈ ವೇಳೆ ವಿಲಿಯಮ್ ಪ್ರಕಾಶ್ ಎಂಬಾತ ಆರ್ಚ್ ಲೈಟ್ ಸ್ವಿಚ್ ಆಫ್ ಮಾಡಲು ತೆರಳಿದ್ದ ಮಹಿಳೆಗೆ ಚಾಕು ತೋರಿಸಿ ಅತ್ಯಾಚಾರಕ್ಕೆ ಯತ್ನಿಸಿರುವುದು ತಿಳಿದುಬಂದಿದೆ.
ಅಶೋಕನಗರ ಠಾಣಾ ವ್ಯಾಪ್ತಿಯ ಶಾಂತಲಾನಗರದಲ್ಲಿ ಜನರು ಗಣೇಶನನ್ನು ಕೂರಿಸಿದ್ದರು. ಅದರಂತೆ ಸೆ.10ರ ರಾತ್ರಿ ಜನರು ವಿಗ್ರಹ ವಿಸರ್ಜನೆಗೆ ತೆರಳಿದ್ದರು. ಅದರಂತೆ 9.30ರ ಸುಮಾರಿಗೆ ಆರ್ಚ್ ಲೈಟ್ ಸ್ವಿಚ್ ಆಫ್ ಮಾಡಲು ಮಹಿಳೆಯೊಬ್ಬರು ತೆರಳಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ವಿಲಿಯಮ್ ಪ್ರಕಾಶ್, ಚಾಕು ತೋರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಪ್ರತಿರೋಧವೊಡ್ಡಿದ ಮಹಿಳೆ ಕಾಮುಕನನ್ನು ದೂರ ತಳ್ಳಿ ತಪ್ಪಿಸಿಕೊಂಡು ಬಂದಿದ್ದಾರೆ.
ಕೃತ್ಯಕ್ಕೆ ಯತ್ನಿಸಿದ್ದ ವೇಳೆ ಆರೋಪಿ ಬೆದರಿಕೆ ಹಾಕಿದ್ದ ಹಿನ್ನೆಲೆ ಆತನಿಗೆ ಹೆದರಿ ಮಹಿಳೆ ಇಷ್ಟು ದಿನ ಯಾರ ಬಳಿಯೂ ಹೇಳದೆ, ದೂರು ಕೂಡ ನೀಡದೆ ಸುಮ್ಮನಿದ್ದರು. ಸದ್ಯ ಕೆಲವು ಸಾಮಾಜಿಕ ಕಾರ್ಯಕರ್ತರ ಸಹಾಯದಿಂದ ಮಹಿಳೆ ಪೊಲೀಸ್ ಠಾಣೆ ಮೆಟ್ಟಿಲೇರಿ ದೂರು ದಾಖಲಿಸಿದ್ದಾರೆ. ಅದರಂತೆ ಅಶೋಕನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಘಟನಾ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದು, ಮಹಿಳೆಯಿಂದ ಹೆಚ್ಚಿನ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ
ಮಂಡ್ಯ: ಗ್ಯಾರೇಜ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತ ಕೃಷಿ ಇಲಾಖೆಯ ನಿವೃತ್ತ ಅಧಿಕಾರಿಯೊಬ್ಬರು ದಯಾಮರಣ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದಾರೆ. ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ ಹೆಚ್.ಜಿ.ಕುಟ್ಟಪ್ಪ ಮತ್ತು ಅವರ ಪತ್ನಿ ವಾಸವಿರುವ ಮನೆಯ ಸಮೀಪದಲ್ಲಿ ವ್ಯಕ್ತಿಯೊಬ್ಬರು ಗ್ಯಾರೇಜ್ ತೆರೆದಿದ್ದಾರೆ. ಇಲ್ಲಿನ ಸಿಬ್ಬಂದಿ ನಿತ್ಯವು ಕಿರುಕುಳ ನೀಡುತ್ತಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರಿಗೆ ವೃದ್ಧ ದಂಪತಿ ಹಲವು ಬಾರಿ ದೂರು ನೀಡಿದ್ದಾರೆ. ಆದರೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ದಯಾಮರಣ ಕೋರಿ ರಾಜ್ಯಲಾಪರಿಗೆ ಅರ್ಜಿ ಸಲ್ಲಿಸಿದ್ದಾರೆ.