ದೇವನಹಳ್ಳಿ: ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಐಫೋನ್ಗಳನ್ನು ವಶಕ್ಕೆ ಪಡೆದಿದ್ದಾರೆ. ತಪಾಸಣೆ ನಡೆಸುತ್ತಿದ್ದ ಕಸ್ಟಮ್ಸ್ ಅಧಿಕಾರಿಗಳಿಗೆ ಪ್ರಯಾಣಿಕನೊಬ್ಬನ ಮೇಲೆ ಅನುಮಾನ ಮೂಡಿದೆ. ಹೀಗಾಗಿ ತಪಾಸಣೆ ಹಾಗೂ ವಿಚಾರಣೆ ನಡೆಸಿದಾಗ ಮೊಬೈಲ್ ಫೋನ್ಗಳು ಪತ್ತೆಯಾಗಿವೆ. ಸದ್ಯ 34 ಲಕ್ಷ ಮೌಲ್ಯದ 23 ಐಫೋನ್ ಮೊಬೈಲ್ಗಳು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದ್ದಾರೆ.
ಬ್ಯಾಂಕಾಕ್ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನೊಬ್ಬ ಅಧಿಕಾರಿಗಳಿಗೆ ಅನುಮಾನ ಹುಟ್ಟಿಸುವಂತೆ ನಡೆದಿದ್ದಾನೆ. ಕೂಡಲೇ ಎಚ್ಚೆತ್ತ ಅಧಿಕಾರಿಗಳು ಪ್ರಯಾಣಿಕರನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಬೆಳೆಬಾಳುವ ಐಫೋನ್ಗಳು ಪತ್ತೆಯಾಗಿದ್ದು, 37,47,700 ರೂಪಾಯಿ ಮೌಲ್ಯದ ಒಟ್ಟು 23 ಐಫೋನ್ಗಳು ಜಪ್ತಿ ಮಾಡಿದ್ದಾರೆ. ಸದ್ಯ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ