ಬೆಂಗಳೂರಿನಲ್ಲಿ ಜೋಡಿ ಕೊಲೆ; ಚಾಕುವಿನಿಂದ ಇರಿದು ಬರ್ಬರ ಹತ್ಯೆ

ವರ್ಷದಿಂದ ವರ್ಷಕ್ಕೆ ಸಿಲಿಕಾನ್​​ ಸಿಟಿ ಬೆಂಗಳೂರಿನಲ್ಲಿ ಕ್ರೈಂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಪೊಲೀಸರು ಕೂಡ ಇದನ್ನು ತಡೆಯಲು ಅನೇಕ ರೀತಿಯ ಕ್ರಮಗಳನ್ನು ಕೈಗೊಂಡಿದ್ದಾರೆ. ಆದರೂ ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ಬೆಂಗಳೂರಿನ ಕುಂಬಾರಪೇಟೆಯಲ್ಲಿ ಇಬ್ಬರನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಜೋಡಿ ಕೊಲೆ; ಚಾಕುವಿನಿಂದ ಇರಿದು ಬರ್ಬರ ಹತ್ಯೆ
ಬೆಂಗಳೂರಿನ ಕುಂಬಾರಪೇಟೆಯಲ್ಲಿ ಚಾಕುವಿನಿಂದ ಇರಿದು ಇಬ್ಬರ ಬರ್ಬರ ಹತ್ಯೆ
Follow us
ರಾಚಪ್ಪಾಜಿ ನಾಯ್ಕ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 07, 2024 | 9:59 PM

ಬೆಂಗಳೂರು, ಫೆ.07: ರಾಜ್ಯ ರಾಜಧಾನಿಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಇದೀಗ ಬೆಂಗಳೂರಿನ ಕುಂಬಾರಪೇಟೆಯ(Kumbarpet) ಹರಿ ಅಂಗಡಿ ಮಳಿಗೆಯಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಇಬ್ಬರನ್ನು ಬರ್ಬರ ಹತ್ಯೆ ಮಾಡಿದ್ದಾರೆ. ಸುರೇಶ್, ಮಹೇಂದ್ರ ಮೃತ ರ್ದುದೈವಿಗಳು. ಆಸ್ತಿ ವಿಚಾರಕ್ಕೆ ಸಂಬಂಧಿಕರೇ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯಕ್ಕೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಕೇಂದ್ರ ವಿಭಾಗ ಡಿಸಿಪಿ ಹೇಳಿದ್ದಿಷ್ಟು

ಇನ್ನು ಈ ಕುರಿತು ಮಾತನಾಡಿದ ಕೇಂದ್ರ ವಿಭಾಗ ಡಿಸಿಪಿ ಶೇಖರ್ ‘ ಘಟನೆ ಕುರಿತು ಮಾಹಿತಿ ಬಂದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ್ದೀವಿ. ಮೃತ ಸುರೇಶ್ ಮತ್ತು ಮಹೇಂದ್ರ ಇಬ್ಬರು ಅಡುಗೆ ಉಪಕರಣಗಳನ್ನು ಮಾರಾಟ ಮಾಡುತ್ತಿದ್ದರು. . ಮೇಲ್ನೋಟಕ್ಕೆ ಆಸ್ತಿ ವಿಚಾರಕ್ಕೆ ನಡೆದ ಕೊಲೆ ಎನ್ನಲಾಗುತ್ತಿದೆ. ಈ ಕುರಿತು ತನಿಖೆ ನಡೆಸಿದ ಬಳಿಕ ಕೃತ್ಯಕ್ಕೆ ನಿಖರವಾದ ಕಾರಣ ತಿಳಿಸಲಾಗುವುದು ಎಂದರು. ಇನ್ನು ಈ ಕುರಿತು ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹಳೆಯ ವೈಷಮ್ಯ, ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ, ಕಿಲೋಮೀಟರ್​ಗಟ್ಟಲೆ ದೇಹ ಎಳೆದೊಯ್ದ ಪಾಪಿಗಳು

ಆರೋಪಿ ಟಾರ್ಗೆಟ್ ಇದ್ದಿದ್ದವನೇ ಬೇರೆ, ಬಿಡಿಸಲು ಹೋದವನು ಆದ ಕೊಲೆ

ಇನ್ನು ಆರೋಪಿ ಟಾರ್ಗೆಟ್ ಇದ್ದಿದ್ದು ಮೃತ ಸುರೇಶ್ ಮಾತ್ರ. ಆದರೆ, ಬಿಡಿಸಲು ಹೋದ ಮಹೇಂದ್ರನನ್ನು ಕೂಡ ಕೊಲೆ ಮಾಡಿದ್ದಾನೆ. ಸುರೇಶ್ ಹಾಗೂ ಮಹೇಂದ್ರ ಇಬ್ಬರು ಸ್ನೇಹಿತರು, ಈ ಹಿನ್ನಲೆ ಸುರೇಶ್ ಭೇಟಿಗೆ ಮಹೇಂದ್ರ ಆಗಮಿಸಿದ್ದ. ಈ ವೇಳೆ ಸುರೇಶ್ ಮೇಲೆ ಇದ್ದಕ್ಕಿದ್ದಂತೆ ಅಟ್ಯಾಕ್ ಮಾಡಿದ ಹಂತಕ, ಬಿಡಿಸಲು ಹೋದ ಮಹೇಂದ್ರನ ಮೇಲೂ ಹಲ್ಲೆ ಮಾಡಿ ಇಬ್ಬರನ್ನು ಹತ್ಯೆಗೈದಿದ್ದಾನೆ. ಸುರೇಶ್ ಅಂಗಡಿ ಒಳಗೆ ಚೇರ್ ಮೇಲೆ ಶವವಾಗಿ ಬಿದ್ದಿದ್ದರೆ, ಇತ್ತ ಮಹೇಂದ್ರ ಅಂಗಡಿ ಹೊರಗೆ ನಿಲ್ಲಿಸಿದ್ದ ಗಾಡಿಯಲ್ಲಿ ಸಾವನ್ನಪ್ಪಿದ್ದಾನೆ.

ತಂದೆ ಬುದ್ಧಿವಾದ ಹೇಳಿದಕ್ಕೆ ಮನನೊಂದು ಮಗ ಆತ್ಮಹತ್ಯೆ

ಧಾರವಾಡ: ತಂದೆ ಓದಿನ ಕಡೆ ಗಮನ ಕೊಡು ಎಂದು ಬುದ್ಧಿವಾದ ಹೇಳಿದಕ್ಕೆ ಮನನೊಂದು ಫುಟ್ಬಾಲ್ ಆಟಗಾರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ನಗರದ ಕೆಲಗೇರಿ ಕೆರೆಯಲ್ಲಿ ನಡೆದಿದೆ. ಸಾದನಕೇರಿ ಬಡಾವಣೆ ನಿವಾಸಿ ಶರಣಪ್ಪ ಕೊಂಡಿಹಾಳ ಎಂಬುವರ ಪುತ್ರ ಮೃತ ಚೇತನ್(23)​​. ತಂದೆ ಬುದ್ದಿ ಹೇಳಿದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಚೇತನ್, ಇಂದು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈ ಕುರಿತು ಧಾರವಾಡ ಉಪನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 pm, Wed, 7 February 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ