AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ್ಮಾಂಗಕ್ಕೆ ಹೊಡೆದು ವ್ಯಕ್ತಿಯ ಹತ್ಯೆ; ಪತ್ನಿ ಹಾಗೂ ಆಕೆಯ ಗೆಳೆಯನ ಮೇಲೆ ಡೌಟ್

ವ್ಯಕ್ತಿಯೊಬ್ಬರನ್ನು ಮನೆಯ ಟ್ರರೇಸ್ ಮೇಲೆಯೇ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಮೃತನ ಪತ್ನಿ ಮತ್ತು ಈಕೆಯ ಗೆಳೆಯನ ಮೇಲೆ ಅನುಮಾನ ವ್ಯಕ್ತವಾಗಿದೆ.

ಮರ್ಮಾಂಗಕ್ಕೆ ಹೊಡೆದು ವ್ಯಕ್ತಿಯ ಹತ್ಯೆ; ಪತ್ನಿ ಹಾಗೂ ಆಕೆಯ ಗೆಳೆಯನ ಮೇಲೆ ಡೌಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 22, 2022 | 9:16 AM

Share

ಬೆಂಗಳೂರು: ವ್ಯಕ್ತಿಯೊಬ್ಬರನ್ನು ಮನೆಯ ಟರೇಸ್ ಮೇಲೆಯೇ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಮೃತನ ಪತ್ನಿ ಮತ್ತು ಈಕೆಯ ಗೆಳೆಯನ ಸುತ್ತ ಅನುಮಾನ ಹುತ್ತ ಬೆಳೆದಿದೆ. ಯಲಹಂಕದ ಕೊಂಡಪ್ಪ ಲೇಔಟ್​ನಲ್ಲಿ ಚಂದ್ರಶೇಖರ್ ಎಂಬವರನ್ನು ಅವರ ಮನೆಯ ಟರೇಸ್ ಮೇಲೆಯೇ ತಲೆ ಹಾಗೂ ಮರ್ಮಾಂಗಕ್ಕೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಸದ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಯಲಹಂಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಆಂದ್ರ ಮೂಲದ ಚಂದ್ರಶೇಖರ್ ಕಳೆದ ಎಂಟು ವರ್ಷಗಳಿಂದ ಕೊಂಡಪ್ಪ ಲೇಔಟ್​ ಏರಿಯಾದಲ್ಲಿ ಪತ್ನಿಯೊಂದಿಗೆ ನೆಲೆಸಿದ್ದು, ಜೀವನೋಪಯವಾಗಿ ಬಟ್ಟೆ ನೇಯ್ಯೂವ ಕೆಲಸ ಮಾಡಿಕೊಂಡಿದ್ದನು. ಆದರೆ ನಿನ್ನೆ (ಅ. 21) ರಾತ್ರಿ ಚಂದ್ರಶೇಖರ್​ನನ್ನು ಮನೆಯ ಟರೇಸ್ ಮೇಲೆಯೇ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ಯಲಹಂಕ ಸರ್ಕಾರಿ ಅಸ್ಪತ್ರೆಗೆ ರವಾನೆ ಮಾಡಿದ್ದಾರೆ. ಪ್ರಕರಣದಲ್ಲಿ ಕೊಲೆಯಾದವನ ಹೆಂಡತಿ ಹಾಗೂ ಆಕೆಯ ಗೆಳೆಯನ ಮೇಲೆ ಅನುಮಾನ ವ್ಯಕ್ತವಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಪತಿ ಸಾವಿನಿಂದ ನೊಂದು ಮಗಳನ್ನ ಹತ್ಯೆಗೈದು ತಾಯಿ ಆತ್ಮಹತ್ಯೆ

ಬೆಳಗಾವಿ: ಪತಿ ಸಾವಿನಿಂದ ಮನನೊಂದ ಪತ್ನಿ ತನ್ನ ಒಂದೂವರೆ ವರ್ಷದ ಮಗಳನ್ನ ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟ‌ನೆ ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ. ಮೃತ ಹೊಳೆಪ್ಪ ಮಸ್ತಿ (25) ಎಂಬವರ ಪತ್ನಿ ವಾಸಂತಿ (20) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೂ ಮುನ್ನ ತನ್ನ ಮಗಳಾದ ಮಾನಸಾಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಘಟನೆ ಸಂಬಂಧ ಕಾಕತಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ.

ಹೊಳೆಪ್ಪ ಮಸ್ತಿ ಎಂಬಾತನಿಗೆ ಕುಡಿತದ ಚಟವಿತ್ತು. ಅದರಂತೆ ಮದ್ಯ ಸೇವನೆ ಮಾಡಿದ ಅಮಲಿನಲ್ಲೇ ಇದ್ದ ಹೊಳೆಪ್ಪ ಅ.20ರಂದು ಮಧ್ಯಾಹ್ನ ಮಲ್ಲಹೋಳ ಗ್ರಾಮದ ತನ್ನ ಮನೆಯಲ್ಲೇ ಕ್ರಿಮಿನಾಶಕ ಸೇವಿಸಿದ್ದನು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದನು.

ತನ್ನ ಪತಿಯ ಮರಣದ ಮಾರನೇ ದಿನ ವಾಸಂತಿ ವಂಟಮೂರಿನಲ್ಲಿರುವ ತವರು ಮನೆಗೆ ಬಂದಿದ್ದಳು. ಇಲ್ಲಿ ಹೊರವಲಯದ ಗದ್ದೆಗೆ ಮಗಳು ಮಾನಸಾಳನ್ನು ಕರೆದೊಯ್ದಿದ್ದ ವಾಸಂತಿ ಮೊದಲು ಆಕೆಯ ಕತ್ತು ಹಿಸುಕಿ ಕೊಂಡು ಹಾಕಿದ್ದಾಳೆ. ಬಳಿಕ ಪಕ್ಕದಲ್ಲೇ ಇದ್ದ ಮರಕ್ಕೆ ಶಾಲ್​ನಿಂದ ನೇಣು ಬಿಗಿದುಕೊಂಡು ವಾಸಂತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆತ್ಮಹತ್ಯೆ ಸಹಾಯವಾಣಿ

ಕಾರಣ ಯಾವುದೇ ಇರಲಿ, ಆತ್ಮಹತ್ಯೆಯ ನಿರ್ಧಾರ ಬೇಡ. ಆತ್ಮಹತ್ಯೆಯ ಭಾವನೆಗಳು ಮನಸ್ಸಿನಲ್ಲಿ ಸುಳಿಯುತ್ತಿದ್ದರೆ ನಿಮ್ಮ ಆಪ್ತರೊಂದಿಗೆ ಮಾತನಾಡಿ. ಸಾಧ್ಯವಾಗದಿದ್ದರೆ ಆತ್ಮಹತ್ಯೆ ಸಹಾಯವಾಣಿಗೆ ಕರೆ ಮಾಡಿ. ಸಹಾಯವಾಣಿ ಸಂಖ್ಯೆ – 9152987821

ಮತ್ತಷ್ಟು ಅರಪಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:13 am, Sat, 22 October 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ