ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆಗೆ ಬಂದ ಹಳಿಯೂರು ಗ್ರಾಮ ಪಂಚಾಯಿತಿ ಸದಸ್ಯ ರೆಸಾರ್ಟ್​ನಲ್ಲಿ ಅನುಮಾನಾಸ್ಪದವಾಗಿ ಸಾವು

ಹಳಿಯೂರು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೆ.ಆರ್.ನಗರ ತಾಲೂಕಿನಲ್ಲಿ ನಡೆದಿದೆ. ಜವರೇಗೌಡ ಕೊಪ್ಪಲಿನ ಗ್ರಾಮ ಪಂಚಾಯತ್ ಸದಸ್ಯ ಸತೀಶ್(34) ಮೃತಪಟ್ಟವರು.

ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆಗೆ ಬಂದ ಹಳಿಯೂರು ಗ್ರಾಮ ಪಂಚಾಯಿತಿ ಸದಸ್ಯ ರೆಸಾರ್ಟ್​ನಲ್ಲಿ ಅನುಮಾನಾಸ್ಪದವಾಗಿ ಸಾವು
ಮೃತಪಟ್ಟ ಗ್ರಾಮ ಪಂಚಾಯತ್ ಸದಸ್ಯ ಸತೀಶ್
Follow us
TV9 Web
| Updated By: Rakesh Nayak Manchi

Updated on: Jul 26, 2022 | 2:32 PM

ಮೈಸೂರು: ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಹಳಿಯೂರು ಗ್ರಾಮದಲ್ಲಿ ನಡೆದಿದೆ. ಜವರೇಗೌಡ ಕೊಪ್ಪಲಿನ ಗ್ರಾಮ ಪಂಚಾಯತ್ ಸದಸ್ಯ ಸತೀಶ್(34) ಮೃತಪಟ್ಟವರು. ನಾಳೆ ಹಳಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆ ಹಿನ್ನೆಲೆ 10ಕ್ಕೂ ಹೆಚ್ಚು ಸದಸ್ಯರು ಆರ್.ಟಿ.ನಗರದ ಸುಭೀಕ್ಷ ಗಾರ್ಡನ್​ಗೆ ಬಂದಿದ್ದರು. ಇವರಲ್ಲಿ ಸತೀಶ್ ಕೂಡ ಒಬ್ಬರು. ಆದರೆ ಇವರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು,  ಎದೆ ನೋವಿನಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ಜು.27ರಂದು ಹಿಳಿಯೂರು ಗ್ರಾಮ ಪಂಚಾಯಿತು ಅಧ್ಯಕ್ಷ ಚುನಾವಣೆ ಹಿನ್ನೆಲೆ ಜವರೇಗೌಡ ಕೊಪ್ಪಲಿನ ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಸೇರಿದಂತೆ ಒಟ್ಟು 10 ಮಂದಿ ಸದಸ್ಯರು ಸೋಮವಾರದಂದು ಮೈಸೂರಿನ ಆರ್.ಟಿ.ನಗರದ ಸುಭೀಕ್ಷ ಗಾರ್ಡನ್​ನಲ್ಲಿ ನೆಲೆಸಿದ್ದರು. ಆದರೆ ಇವರು ರಾತ್ರಿ ಎದೆ ನೋವಿನಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಕೋಟ್ಯಂತರ ರೂ. ಮೌಲ್ಯದ ರಕ್ತ ಚಂದನ ಜಪ್ತಿ

ಬೆಂಗಳೂರು: ರಕ್ತಚಂದನದ ತುಂಡು ಮಾರಾಟ ಮಾಡಲು ಮುಂದಾದ ಐವರು ಆರೋಪಿಗಳ ಸಹಿತ ಕೋಟ್ಯಂತರ ರೂ. ಮೌಲ್ಯದ ರಕ್ತ ಚಂದನವನ್ನು ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿನೋದ್​, ಲಕ್ಷ್ಮಯ್ಯ, ಸಂಜಯ್​, ರಾಜು, ಕೃಷ್ಣ ಬಂಧಿತ ಆರೋಪಿಗಳು. ಇವರಿಂದ ಒಟ್ಟು 2.68 ಕೋಟಿ ಮೌಲ್ಯದ ರಕ್ತಚಂದನ ಮರದ ತುಂಡುಗಳನ್ನು ಜಪ್ತಿ ಮಾಡಲಾಗಿದೆ.

ಆರೋಪಿಗಳು ರಕ್ತಚಂದನ ಮರದ ತುಂಡುಗಳನ್ನು ಮೈಸೂರು ರಸ್ತೆ ಸ್ಯಾಟ್​ಲೈಟ್ ಬಸ್ ನಿಲ್ದಾಣದ ಬಳಿ ಮಾರಾಟ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಬ್ಯಾಟರಾಯನಪುರ ಠಾಣಾ ಪೊಲೀಸರು, ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪೊಲೀಸರು ಪ್ರಾಥಮಿಕ ತನಿಖೆಗೆ ಒಳಪಡಿಸಿದಾಗ ರಕ್ತಚಂದನದ ತುಂಡುಗಳನ್ನು ಬಚ್ಚಿಟ್ಟ ಮಾಹಿತಿ ಹೊರಹಾಕಿದ್ದಾರೆ.

ಹೆಸರುಘಟ್ಟದ ಮನೆಯೊಂದರಲ್ಲಿ ರಕ್ತಚಂದನ ಮರದ ತುಂಡುಗಳನ್ನು ಬಚ್ಚಿಟ್ಟ ಬಗ್ಗೆ ಆರೋಪಿಗಳು ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾರೆ. ಇವರು ನೀಡಿದ ಮಾಹಿತಿಯಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನೀರಿನ ಸಂಪ್​​ನಲ್ಲಿ ರಕ್ತಚಂದನ ಬಚ್ಚಿಟ್ಟಿರುವುದು ಪತ್ತೆಯಾಗಿದೆ. ಅದರಂತೆ 2.68 ಕೋಟಿ ಮೌಲ್ಯದ ರಕ್ತಚಂದನ ಮರದ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ