ಬೆಂಗಳೂರು: ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬು ಹತ್ಯೆ; ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಶಂಕೆ

|

Updated on: May 21, 2023 | 7:50 AM

ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನ ತಮಿಳುನಾಡಿನ ಕೃಷ್ಣಗಿರಿ ಬಳಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಜಯನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್​ ಆಗಿದ್ದ ಬಾಬುನನ್ನ ನಿನ್ನೆ(ಮೇ.20) ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.

ಬೆಂಗಳೂರು: ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬು ಹತ್ಯೆ; ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಶಂಕೆ
ರೌಡಿಶೀಟರ್ ಅಲ್ಯೂಮಿನಿಯಂ ಬಾಬು
Follow us on

ಬೆಂಗಳೂರು: ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನ ತಮಿಳುನಾಡಿನ ಕೃಷ್ಣಗಿರಿ ಬಳಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಜಯನಗರ(Jayanagar) ಠಾಣಾ ವ್ಯಾಪ್ತಿಯ ರೌಡಿಶೀಟರ್​ ಆಗಿದ್ದ ಬಾಬುನನ್ನ ನಿನ್ನೆ(ಮೇ.20) ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಕೊಲೆ, ಸುಲಿಗೆ, ಬೆದರಿಕೆ, ದರೋಡೆ ಸೇರಿ ಹಲವು ಪ್ರಕರಣಗಳಲ್ಲಿ ಅಲ್ಯೂಮಿನಿಯಂ ಬಾಬು ಭಾಗಿಯಾಗಿದ್ದ. ಇತ್ತೀಚೆಗೆ ಬೆಂಗಳೂರಿನಿಂದ ತಮಿಳುನಾಡಿಗೆ ರೌಡಿಶೀಟರ್​ ಬಾಬು ವಾಸ್ತವ್ಯ ಬದಲಿಸಿದ್ದ. ಇದೀಗ ಕೃಷ್ಣಗಿರಿ ತಾಲೂಕಿನ ಡೆಂಕಣಕೋಟೆ ಅರಣ್ಯ ಪ್ರದೇಶದಲ್ಲಿ ಆತನ ಶವ ಪತ್ತೆಯಾಗಿದೆ.

ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಶಂಕೆ

ಹೌದು ಕೊಲೆಯಾದ ಬಾಬು ಬೆಂಗಳೂರಿನ ಕೊತ್ತನೂರು ದಿಣ್ಣೆ ಬಳಿ ಹಾಲೋಬ್ರಿಕ್ಸ್ ವ್ಯವಹಾರ ನಡೆಸುತಿದ್ದ. ಜೊತೆಗೆ ಕೆಲ ರಾಜಕಾರಣಿಗಳನ್ನು ಎದುರು ಹಾಕಿಕೊಂಡಿದ್ದ. ಮೃತ ರೌಡಿ ಶೀಟರ್ ಅರಸಯ್ಯನ ಗ್ಯಾಂಗ್​ನಲ್ಲಿ ಬಾಬು ಗುರುತಿಸಿಕೊಂಡಿದ್ದ. ಇನ್ನು ಇತನನ್ನ ಬೆಂಗಳೂರಿನಿಂದ ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನ ಡೆಂಕಣಕೋಟೆ ಕಾಡಿನಲ್ಲಿ, ಪ್ಲಾಸ್ಟಿಕ್ ಚೀಲದಲ್ಲಿ ಅರೆಸುಟ್ಟ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ. ಘಟನೆ ಸಂಬಂಧ ತಮಿಳುನಾಡಿನ ತಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ:Mysore: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ನ ಹತ್ಯೆ: ದುಷ್ಕರ್ಮಿಗಳು ಪರಾರಿ

ಮೈಸೂರಿನಲ್ಲಿ ರೌಡಿಶೀಟರ್​ ಚಂದ್ರಶೇಖರ್ ಕೊಲೆ ಪ್ರಕರಣ; ಸಿಸಿಬಿ ಪೊಲೀಸರಿಂದ 7 ಆರೋಪಿಗಳ ಬಂಧನ

ಮೈಸೂರು: ನಗರದಲ್ಲಿ ರೌಡಿಶೀಟರ್​ ಚಂದ್ರಶೇಖರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು 7 ಆರೋಪಿಗಳನ್ನ ಬಂಧಿಸಿದ್ದಾರೆ. ಒಂಟಿಕೊಪ್ಪಲಿನ ನಿವಾಸಿ ಚಂದ್ರಶೇಖರ್ ಅಲಿಯಾಸ್ ಚಂದುನನ್ನ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಈ ಕುರಿತು ಮೈಸೂರಿನ ವಿವಿ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಇದೀಗ ಕೊಲೆ ಮಾಡಿ ಬೈಕ್​ಗಳಲ್ಲಿ ಪರಾರಿಯಾಗಿದ್ದ ಆರೋಪಿಗಳನ್ನ ಬಂಧಿಸಲಾಗಿದೆ.

ಇನ್ನು ಹುಣಸೂರು ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಚಂದು, ಕಳೆದ ಕೆಲ ದಿನಗಳಿಂದಷ್ಟೇ ಪ್ರಕರಣ ಖುಲಾಸೆಯಾಗಿ ಜೈಲಿನಿಂದ ಹೊರ ಬಂದಿದ್ದ. ಈ ಹಿನ್ನಲೆ ಪಡುವಾರಳ್ಳಿಯ ದೇವು ಕೊಲೆಗೆ ಪ್ರತಿಕಾರ ತೀರಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ ಚಂದುನನ್ನ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಮಾಹಿತಿ ಬೆನ್ನತ್ತಿ ಹೊರಟ ಪೊಲೀಸರು ಇದೀಗ ಆರೋಪಿಗಳನ್ನ ಬಂಧಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ