ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ, 23 ಆರೋಪಿಗಳು ಅರೆಸ್ಟ್, 1 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

ಬೆಂಗಳೂರು ನಗರದ ವೈಟ್​ಫೀಲ್ಡ್ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 23 ಆರೋಪಿಗಳ ಸಹಿತ 1ಕೋಟಿಗೂ ಅಧಿಕ ಮೌಲ್ಯದ ಕಳವು ಮಾಲುಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ, 23 ಆರೋಪಿಗಳು ಅರೆಸ್ಟ್, 1 ಕೋಟಿ ಮೌಲ್ಯದ ವಸ್ತುಗಳು ಜಪ್ತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:Jun 09, 2022 | 6:00 PM

ಬೆಂಗಳೂರು: ನಗರದ ವೈಟ್​ಫೀಲ್ಡ್ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 1ಕೋಟಿಗೂ ಅಧಿಕ ಮೌಲ್ಯದ ಕಳವು ಮಾಲುಗಳನ್ನು ವಶಕ್ಕೆ ಪಡೆದಿದ್ದಾರೆ. ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ 23 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 1.70 ಕೋಟಿ ರೂ. ಮೌಲ್ಯದ ಕಳವು ಮಾಡಿದ್ದ ಮಾಲು ಜಪ್ತಿ ಮಾಡಲಾಗಿದೆ. ಇದರಲ್ಲಿ 9 ಕಾರು, 45 ಬೈಕ್​ಗಳು, 135 ಮೊಬೈಲ್​ಗಳು, 5 ಕ್ಯಾಮರಾ, 1 ಲ್ಯಾಪ್​ಟಾಪ್, 150 ಗ್ರಾಂ ಚಿನ್ನ ಒಳಗೊಂಡಿದೆ. ವಶಕ್ಕೆ ಪಡೆದ ಮಾಲುಗಳು ಹೆಚ್​ಎಎಲ್, ಕಾಡುಗೋಡಿ, ಬೆಳ್ಳಂದೂರು, ಮಾರತ್ತಹಳ್ಳಿ ಮತ್ತು ವೈಟ್​ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳವು ಪ್ರಕರಣದ್ದಾಗಿದೆ.

ಇದನ್ನೂ ಓದಿ: Crime News: ಆಸ್ತಿಯಲ್ಲಿ ಭಾಗ ಕೇಳುವಂತೆ ಪೀಡಿಸುತ್ತಿದ್ದ ಭಾವನನ್ನೇ ಹತ್ಯೆಗೈದ ಬಾಮೈದ!

ಲೀಗಲ್ ನೋಟಿಸ್​ಗೆ ಹೆದರಿ ರೈತ ಆತ್ಮಹತ್ಯೆ

ಮಂಡ್ಯ: ಪಿಎಲ್​ಡಿ ಬ್ಯಾಂಕ್ ಲೀಗಲ್ ನೋಟಿಸ್​ಗೆ ಹೆದರಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗೆಂಡೆಹೊಸಹಳ್ಳಿಯಲ್ಲಿ ನಡೆದಿದೆ. ರಘು ಆತ್ಮಹತ್ಯೆ ಮಾಡಿಕೊಂಡ ರೈತ. ರಘು ತನ್ನ ತಾತಿ ಗಾಯತ್ರಮ್ಮ ಅವರ ಹೆಸರಿನಲ್ಲಿ ಪಿಎಲ್​ಡಿ ಬ್ಯಾಂಕ್​ನಿಂದ 8.78 ಲಕ್ಷ ರೂ. ಸಾಲ ಪಡೆದಿದ್ದು. ಅದರಂತೆ ಕಳೆದ ಮೂರು ತಿಂಗಳಿನಿಂದ ರಘು ಅವರಿಗೆ ಆರ್ಥಿಕ ಸಂಕಷ್ಟ ಎದುರಾದ ಹಿನ್ನೆಲೆ ಕಂತು ಪಟ್ಟಲು ಸಾಧ್ಯವಾಗಿಲ್ಲ. ಸಂಕಷ್ಟದ ಸಮಯದಲ್ಲಿ ಬ್ಯಾಂಕ್​ನಿಂದ ಲೀಗಲ್ ನೋಟಿಸ್ ನೋಟಿಸ್ ಜಾರಿಯಾಗಿದ್ದನು ಕಂಡು ಭಯದಿಂದ ರಘು ವಿಷ ಸೇವಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ರಘು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Bengaluru News: ಹದಗೆಟ್ಟ ರಸ್ತೆಗಳಿಂದ ನಿರಂತರ ಅಪಘಾತ, ಆತಂಕದಲ್ಲಿ ವಾಹನ ಸವಾರರು!

ಕರ್ತವ್ಯ ಲೋಪ ಎಸಗಿದ ಪಿಎಸ್​ಐ ಅಮಾನತು

ಬೆಂಗಳೂರು ಗ್ರಾಮಾಂತರ: ಕರ್ತವ್ಯ ಲೋಪ ಎಸಗಿದ ಪ್ರಕರಣ ಸಂಬಂಧ ಹೊಸಕೋಟೆ ತಾಲೂಕಿನ ಸೂಲಿಬೆಲೆ ಠಾಣೆಯ ಪಿಎಸ್​ಐ ರಮೇಶ್ ಅವರನ್ನು ಅಮಾನತುಗೊಳಿಸಲಾಗಿದೆ. ರಮೇಶ್ ಅವರು ಗಾಂಜಾ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಆರೋಪ ಕೇಳಿಬಂದಿತ್ತು. ಅದರಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್​​ಪಿ ವಂಶಿಕೃಷ್ಣ ಅವರು ರಮೇಶ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಕಳೆದ ಮೂರು ದಿನಗಳ ಹಿಂದೆ ಕೈಗಾರಿಕಾ ಪ್ರದೇಶದಲ್ಲಿ ಗಾಂಜಾ ಮಾರಾಟ ಮಾಡುವಾಗ ಆರೋಪಿಗಳು ಸಿಕ್ಕಿಬಿದ್ದಿದ್ದರು. ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ್ದ ಡಿವೈಎಸ್​ಪಿ ಉಮಾಶಂಕರ್ ನೇತೃತ್ವದ ತಂಡ ದಾಳಿ ನಡೆಸಿತ್ತು. ಹೀಗಾಗಿ ಕರ್ತವ್ಯ ಲೋಪ ಎಸಗಿದ್ದಕ್ಕೆ ರಮೇಶ್ ಅವರನ್ನು ಅಮಾನತುಗೊಳಿಸಲಾಗಿದೆ. ಇದನ್ನೂ ಓದಿ: Crime News: ಕುಡುಕ ಪತಿಯ ಕಾಟ ತಾಳಲಾರದೆ ಕತ್ತು ಹಿಚುಕಿ ಪತ್ನಿಯಿಂದಲೇ ಪತಿಯ ಕೊಲೆ!

ಇನ್ನೊಂದೆಡೆ, ಪಿಎಸ್​ಐ ರಮೇಶ್ ಕಿರುಕುಳ ನೀಡುತ್ತಿದ್ದ ಬಗ್ಗೆ ಸ್ವತಃ ಪತ್ನಿಯೇ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ತನಿಖೆಗೆ ತಂಡ ರಚನೆ ಮಾಡುವಂತೆ ಹಾಗೂ ಆರೋಪದ ಸತ್ಯಾಸತ್ಯತೆ ಪತ್ತೆ ಹೆಚ್ಚುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ವಂಶಿಕೃಷ್ಣ ಆದೇಶ ಹೊರಡಿಸಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:00 pm, Thu, 9 June 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ