ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಜೀವದಹನ

ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದಾರೆ.

ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಮೂವರು ಕಾರ್ಮಿಕರು ಸಜೀವದಹನ
ಪರ್ಫ್ಯೂಮ್ ಫ್ಯಾಕ್ಟರಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Feb 18, 2024 | 8:19 PM

ರಾಮನಗರ, ಫೆಬ್ರವರಿ 18: ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡ (Fire accident) ದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರ್ಫ್ಯೂಮ್ ಕೆಮಿಕಲ್‌ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ ಬೆಂಕಿಯಿಂದ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿಯುತ್ತಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದಾರೆ.

ಐವರಿಗೆ ಗಂಭೀರ ಗಾಯ 

ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ಅಲ್ಲಾಭಕ್ಷ, ಅಫ್ರೋಜ್, ರಿಯಾಜ್, ಸಾಧಿಕ್, ಇಮ್ರಾನ್​ರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೂವರ ಮೃತದೇಹಗಳು ಆರ್​.ಆರ್​.ನಗರದ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: ಶಿವಮೊಗ್ಗ: ಬ್ಯಾಗ್​​​​​ನಲ್ಲಿದ್ದ ವಸ್ತು ಸ್ಫೋಟ: ಹಲವರಿಗೆ ಗಾಯ, ಪ್ರಕರಣ ದಾಖಲು

ಅಗ್ನಿ ದುರಂತ ಬಗ್ಗೆ ಕುಂಬಳಗೋಡು ಪೊಲೀಸರಿಂದ ತನಿಖೆ ಮುಂದುವರೆದಿದ್ದು, ಖಾಲಿ ಜಾಗದ ಶೆಡ್​ನಲ್ಲಿ ಪರ್ಫ್ಯೂಮ್ ಕೆಮಿಕಲ್ ಫಿಲ್ಲಿಂಗ್ ಮಾಡಲಾಗುತ್ತಿತ್ತು. ಒಟ್ಟು 8 ಸಿಬ್ಬಂದಿ ಕೆಮಿಕಲ್ ಫಿಲ್ಲಿಂಗ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಇದೆ. ಫಿಲ್ಲಿಂಗ್ ವೇಳೆ ಸ್ಫೋಟಗೊಂಡು ಇಡೀ ಮನೆಗೆ ಬೆಂಕಿ ಆವರಿಸಿರುವ ಶಂಕೆ ವ್ಯಕ್ತವಾಗಿದೆ.  ಅಗ್ನಿ ದುರಂತದಲ್ಲಿ 1 ಬೈಕ್, 1 ಕಾರು ಹಾಗೂ ಆಟೋ ಸಂಪೂರ್ಣ ಹಾನಿಯಾಗಿದ್ದು, ಬೆಂಕಿಯ ತೀವ್ರತೆಗೆ ಅಕ್ಕಪಕ್ಕದ ಮನೆಯ ವಸ್ತುಗಳು ಬೆಂಕಿಗಾಹುತಿ ಆಗಿದೆ.

FSL ತಜ್ಞರ ವರದಿ ಬಳಿಕ ಘಟನೆಗೆ ಸ್ಪಷ್ಟ ಕಾರಣ ಗೊತ್ತಾಗಲಿದೆ: ಎಸ್‌ಪಿ ಕಾರ್ತಿಕ್‌ ರೆಡ್ಡಿ

ಘಟನಾ ಸ್ಥಳದಲ್ಲಿ ರಾಮನಗರ ಎಸ್‌ಪಿ ಕಾರ್ತಿಕ್‌ ರೆಡ್ಡಿ ಪ್ರತಿಕ್ರಿಯಿಸಿದ್ದು, ರಾಮಸಂದ್ರದಲ್ಲಿ ಸಂಜೆ 5 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ಸಲೀಂ ಸೇರಿ ಮೂವರು ಸಾವು, ಇಬ್ಬರ ಗುರುತು ಪತ್ತೆಯಾಗಿಲ್ಲ. ಗಾಯಾಳು ಐವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಐವರು ಗಾಯಾಳುಗಳ ಪೈಕಿ ಓರ್ವ 15 ವರ್ಷದ ಬಾಲಕನಿದ್ದಾನೆ.

FSL ತಜ್ಞರ ವರದಿ ಬಳಿಕ ಘಟನೆಗೆ ಸ್ಪಷ್ಟ ಕಾರಣ ಗೊತ್ತಾಗಲಿದೆ. ಗ್ರಾಮ ಪಂಚಾಯಿತಿನಿಂದ ಅನುಮತಿ ಪಡೆದಿದ್ದ ಬಗ್ಗೆ ಪರಿಶೀಲಿಸ್ತಿದ್ದೇವೆ. ವಿಠಲ್ ಎಂಬುವವರ ಜಾಗದಲ್ಲಿ ಸಲೀಂ ಗೋಡೌನ್ ನಡೆಸುತ್ತಿದ್ದ. ಕಳೆದ ಒಂದು ತಿಂಗಳ ಹಿಂದಷ್ಟೆ ಗೋದಾಮು ಆರಂಭಿಸಿದ್ದರು ಎಂದು ಹೇಳಿದ್ದಾರೆ.

ರೆಸ್ಟೋರೆಂಟ್​ನಲ್ಲಿ ಬೆಂಕಿ ಅವಘಡ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯ ಚಿಮಣಿಯಿಂದ ಬೆಂಕಿ ಹೊತ್ತಿಕೊಂಡು ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಬಿರಿಯಾನಿ ಝೋನ್ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅನಾಹುತ ಉಂಟಾಗಿದೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಕಾರ್ ಶೋ ರೂಂಗೆ ಬೆಂಕಿ: 2 ಕೋಟಿ ರೂ. ನಷ್ಟ, ಸುಟ್ಟು ಕರಕಲಾದ ಕಾರ್​ಗಳು

ರೆಸ್ಟೋರೆಂಟ್‌ನಲ್ಲಿದ್ದ ಎಲ್ಲಾ ವಸ್ತುಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ರೆಸ್ಟೋರೆಂಟ್ ಸಿಬ್ಬಂದಿಗಳು ಹೊರಗೆ ಓಡಿಬಂದಿದ್ದಾರೆ. ಘಟನೆಯಲ್ಲಿ ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಮರಗಳಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು 

ದಾವಣಗೆರೆ: ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಮರಗಳಿಗೆ ಕಿಡಿಗೇಡಿಗಳು ಬೆಂಕಿಯಿಟ್ಟಿರುವಂತಹ ಘಟನ ದಾವಣಗೆರೆ ತಾಲೂಕಿನ ಹುಣಸಡಕಟ್ಟೆ ಗ್ರಾಮದಲ್ಲಿ ನಡೆದಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್​ ಠಾಣೆಗೆ ದೂರು ನೀಡಲಾಗಿದೆ. 1,300 ಅಡಿಕೆ, 1,400 ಬಾಳೆ ಗಿಡಗಳು ಬೆಂಕಿಗಾಹುತಿಯಾಗಿವೆ. ವಿಶ್ವನಾಥ ಎಂಬುವರ ಫಸಲು ನಾಶಗೊಳಿಸಿದ್ದಾರೆ.

ಸ್ಥಳೀಯರಿಂದ ಹರ ಸಾಹಸದಿಂದ ಅರ್ಧ ಅಡಿಕೆ ಹಾಗೂ ಬಾಳೆ ತೋಟವನ್ನು ಗ್ರಾಮಸ್ಥರು ಉಳಿಸಿದ್ದಾರೆ. ಕಳೆದ ವರ್ಷ ಬಾಳೆ 7 ಲಕ್ಷ ರೂಪಾಯಿ ಆದಾಯ ಮಾಡಿತ್ತು. ಈ ವರ್ಷ ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:51 pm, Sun, 18 February 24

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು