AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಹೆಸರಲ್ಲಿ 11.500 ಕೆಜಿ ಅಡಿಕೆ ಕಳ್ಳಸಾಗಣೆ: 24.26 ಲಕ್ಷ ರೂ. ದಂಡ ವಿಧಿಸಿದ ತೆರಿಗೆ ಅಧಿಕಾರಿಗಳು

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೈತರ ಹೆಸರಲ್ಲಿ ದಾಖಲೆ ಇಲ್ಲದೆ 460 ಬ್ಯಾಗ್​ ಅಂದರೆ 11.500 ಕೆಜಿ ಅಡಿಕೆ ಕಳ್ಳಸಾಗಣೆ ಮಾಡಿರುವಂತಹ ಘಟನೆ ಕಂಡುಬಂದಿದ್ದು, ವಾಣಿಜ್ಯ ತೆರಿಗೆ ಇಲಾಖೆ ಜಾಗೃತ ದಳದ ಅಧಿಕಾರಿಗಳಿಂದ ಸದ್ಯ ಅಡಿಕೆಯನ್ನು ವಶಕ್ಕೆ ಪಡೆದಿದ್ದು, 24.26 ಲಕ್ಷ ರೂ. ದಂಡ ವಿಧಿಸಿದ್ದಾರೆ.

ರೈತರ ಹೆಸರಲ್ಲಿ 11.500 ಕೆಜಿ ಅಡಿಕೆ ಕಳ್ಳಸಾಗಣೆ: 24.26 ಲಕ್ಷ ರೂ. ದಂಡ ವಿಧಿಸಿದ ತೆರಿಗೆ ಅಧಿಕಾರಿಗಳು
ಅಡಿಕೆ (ಸಂಗ್ರಹ ಚಿತ್ರ)
Follow us
Shivaprasad
| Updated By: ಗಂಗಾಧರ​ ಬ. ಸಾಬೋಜಿ

Updated on: Dec 02, 2023 | 10:07 PM

ಬೆಂಗಳೂರು, ಡಿಸೆಂಬರ್​​ 02: ರೈತರ ಹೆಸರಲ್ಲಿ ದಾಖಲೆ ಇಲ್ಲದೆ 460 ಬ್ಯಾಗ್​ ಅಂದರೆ 11.500 ಕೆಜಿ ಅಡಿಕೆ (areca nut) ಕಳ್ಳಸಾಗಣೆ ಮಾಡಿರುವಂತಹ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ವಾಣಿಜ್ಯ ತೆರಿಗೆ ಇಲಾಖೆ ಜಾಗೃತ ದಳದ ಅಧಿಕಾರಿಗಳಿಂದ ಸದ್ಯ ಅಡಿಕೆಯನ್ನು ವಶಕ್ಕೆ ಪಡೆದಿದ್ದು, 24.26 ಲಕ್ಷ ರೂ. ದಂಡ ವಿಧಿಸಿದ್ದಾರೆ. ಡಿಜಿಟಲ್ ಸಾಕ್ಷ್ಯಗಳ ಆಧಾರದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಕರಣ ಭೇದಿಸಿದ್ದಾರೆ. ಅಸ್ಸಾಂ ಹಾಗೂ ಮಣಿಪುರದಿಂದ ಮಧ್ಯಪ್ರದೇಶ ಹಾಗೂ ಬೆಂಗಳೂರಿಗೆ ಅಡಿಕೆ ಸಾಗಾಟ ಮಾಡಲಾಗುತಿತ್ತು. ಮಯನ್ಮಾರ್ ನಿಂದ ಅಡಿಕೆಯನ್ನ ಕಳ್ಳಸಾಗಣೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಬಗ್ಗೆ ಅಸ್ಸಾಂ, ಮಣಿಪುರ ಹಾಗೂ ಮಧ್ಯಪ್ರದೇಶ ಜಿಎಸ್​ಟಿ ಅಧಿಕಾರಿಗಳಿಂದ ತನಿಖೆ ಮಾಡಲಾಗುತ್ತಿದೆ. ಕಡಿಮೆ ಗುಣಮಟ್ಟ ಹಾಗೂ ಕಡಿಮೆ ಬೆಲೆಯ ಅಡಿಕೆ ತಂದು ಸ್ಥಳೀಯ ಅಡಿಕೆಯಲ್ಲಿ ಕಲಬೆರಕೆ ಮಾಡುವ ಸಂಚು ರೂಪಿಸಲಾಗಿದೆ.

ಲಂಚಕ್ಕೆ ಬೇಡಿಕೆ: ಆರ್‌ಎಫ್‌ಓ ಅಮಾನತು 

ಹಾಸನ: ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ಸಕಲೇಶಪುರ ತಾಲ್ಲೂಕಿನ ಯಸಳೂರು ಆರ್‌ಎಫ್‌ಓ ಜಗದೀಶ್ ಅಮಾನತು ಆಗಿದ್ದಾರೆ. ಶಿಸ್ತು ಪ್ರಾಧಿಕಾರಿ ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾದಿಕಾರಿ ಬ್ರಿಜೇಶ್ ಕುಮಾರ್ ದಿಕ್ಷಿತ್‌ರಿಂದ ಆದೇಶ ಹೊರಡಿಸಲಾಗಿದೆ. ಕಾಮಗಾರಿಯೊಂದರ ವೇಳೆ ವಶಕ್ಕೆ ಪಡೆದಿದ್ದ ಜೆಸಿಬಿ ಬಿಡುಗಡೆಗಾಗಿ 1.20 ಲಕ್ಷ ರೂ. ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಕೆಆರ್​ ಪುರಂ ಠಾಣೆ PSI ಪಿಸ್ತೂಲ್ ಕಳವು ಮಾಡಿದ್ದ 3 ಆರೋಪಿಗಳ ಬಂಧನ

ಬಾಚೀಹಳ್ಳಿ ವ್ಯಾಪ್ತಿಯಲ್ಲಿ ರಸ್ತೆ-ಚರಂಡಿ ನಿರ್ಮಾಣ ಮಾಡುವ ವೇಳೆ ಸೀಜ್ ಮಾಡಲಾಗಿದೆ. ಜೆಸಿಬಿ ವಶಪಡಿಸಿಕೊಂಡಿದ್ದ ಜಗದೀಶ್ ಎಫ್‌ಐಆರ್ ದಾಖಲಿಸಿದ್ದರು. ಆರ್‌ಎಫ್‌ಓಯಿಂದ ಅಧಿಕಾರ ದುರ್ಬಳಕೆ ಆರೋಪದ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಹಿನ್ನಲೆ ಅಧಿಕಾರಿಗಳು ವರದಿ ಆಧರಿಸಿ ಅಮಾನತು ಮಾಡಿದ್ದಾರೆ.

ಶಾರ್ಟ್ ಸರ್ಕ್ಯೂಟ್​ನಿಂದ ಕಟಿಂಗ್ ಶಾಪ್​ಗೆ ಬೆಂಕಿ: ಸಾವಿರಾರು ರೂ. ಮೌಲ್ಯದ ಸಾಮಗ್ರಿಗಳು ಹಾನಿ

ಗದಗ: ಶಾರ್ಟ್ ಸರ್ಕ್ಯೂಟ್​ನಿಂದ ಕಟಿಂಗ್ ಶಾಪ್​ಗೆ ಬೆಂಕಿ ತಗುಲಿರುವಂತಹ ಘಟನೆ ನಗರದ ರಡ್ಡಿ ಕಾಲೇಜ್ ಕಾಂಪ್ಲೆಕ್ಸ್​ನಲ್ಲಿದ್ದ ಕಟೀಂಗ್ ಶಾಪ್​ನಲ್ಲಿ ನಡೆದಿದೆ. ಶ್ರೀನಿವಾಸ್ ರಾಂಪೂರ ಎಂಬವರಿಗೆ ಸೇರಿದ ಕಟೀಂಗ್ ಶಾಪ್. ಸಾವಿರಾರು ರೂ. ಮೌಲ್ಯದ ಸಾಮಗ್ರಿಗಳು ಹಾನಿ ಆಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ