AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ 12 ವರ್ಷದ ಬಾಲಕನ ಬರ್ಬರ ಹತ್ಯೆ; ಕೊಲೆಗೈದು ರೈಲ್ವೆ ಹಳಿ ಪಕ್ಕದಲ್ಲಿ ಶವ ಎಸೆದ ದುಷ್ಕರ್ಮಿಗಳು

ಮಕ್ಕಳ ಬಗ್ಗೆ ಎಷ್ಟೇ ಕಾಳಜಿ ವಹಿಸಿದರೂ ಅದು ಕಡಿಮೆಯೇ, ಇದೀಗ ಹಾಸನದಲ್ಲಿ ಮಕ್ಕಳ ಜೊತೆ ಕಣ್ಣಾಮುಚ್ಚಾಲೆ ಆಡುತ್ತಿದ್ದ ವೇಳೆ ಬಚ್ಚಿಟ್ಟುಕೊಳ್ಳಲು ಹೋದ ಮಗುವೊಂದು ಕಾಣೆಯಾಗಿತ್ತು. ಪೋಷಕರು ಕೂಡ ಹುಡುಕಾಟ ನಡೆಸಿದ್ದರು. ಆದರೆ, ಇಂದು(ಬುಧವಾರ) ಮಧ್ಯಾಹ್ನ ಪೊದೆಯೊಂದರಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ.

ಹಾಸನದಲ್ಲಿ 12 ವರ್ಷದ ಬಾಲಕನ ಬರ್ಬರ ಹತ್ಯೆ; ಕೊಲೆಗೈದು ರೈಲ್ವೆ ಹಳಿ ಪಕ್ಕದಲ್ಲಿ ಶವ ಎಸೆದ ದುಷ್ಕರ್ಮಿಗಳು
12 ವರ್ಷದ ಮೃತ ಬಾಲಕನ
ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Jul 10, 2024 | 4:29 PM

Share

ಹಾಸನ, ಜು.10: ಹನ್ನೆರಡು ವರ್ಷದ ಬಾಲಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿ ರೈಲ್ವೆ ಹಳಿ(Railway track) ಪಕ್ಕದಲ್ಲಿ ಶವ ಎಸೆದು ಹೋದ ಘಟನೆ ಹಾಸನ(Hassan) ಹೊರವಲಯದ ಬಸವನಹಳ್ಳಿ ಬಳಿ ನಡೆದಿದೆ. ರೈಲ್ವೆ ಹಳಿ ಬಳಿ ಪೊದೆಯಲ್ಲಿ ಕುಶಾಲ್ ಗೌಡ(12) ಮೃತದೇಹ ಪತ್ತೆಯಾಗಿದೆ. ಚಿಕ್ಕಹೊನ್ನೇನಹಳ್ಳಿಯ ವೆಂಕಟೇಶ್​ ಹಾಗೂ ರೂಪಾ ದಂಪತಿಯ ಪುತ್ರನಾಗಿರುವ ಕುಶಾಲ್, ನಿನ್ನೆ (ಜು.09) ಸಂಜೆ ಮಕ್ಕಳ ಜೊತೆ ಕಣ್ಣಾಮುಚ್ಚಾಲೆ ಆಡುತ್ತಿದ್ದ ವೇಳೆ ಬಚ್ಚಿಟ್ಟುಕೊಳ್ಳಲು ಹೋಗಿ ಕಾಣೆಯಾಗಿದ್ದನಂತೆ.

ಮಗು ವಾಪಸ್ ಬಾರದ ಹಿನ್ನೆಲೆಯಲ್ಲಿ ಪೋಷಕರು ಗಾಬರಿಗೊಂಡು ಹುಡುಕಾಟ ನಡೆಸಿದ್ದಾರೆ. ಇತ್ತೀಚೆಗೆ ಚಿರತೆ ಕಾಟ ಕೂಡ ಹೆಚ್ಚಾದ ಹಿನ್ನಲೆ ಅದೇ ಹೊತ್ತೊಯ್ದಿರಬಹುದೆಂದು ಪೋಷಕರ ಜೊತೆ ಅರಣ್ಯ ಇಲಾಖೆ ಸಿಬ್ಬಂದಿ ಕೂಡ ಸೇರಿಕೊಂಡು ಶೋಧ ನಡೆಸಿದ್ದರು. ಆದರೆ, ಎಲ್ಲಿಯೂ ಪತ್ತೆಯಾಗಿರಲಿಲ್ಲ. ಇಂದು(ಜು.10) ಮಧ್ಯಾಹ್ನ ಪೊದೆಯೊಂದರಲ್ಲಿ ಕುಶಾಲ್ ಗೌಡ ಮೃತದೇಹ ಪತ್ತೆಯಾಗಿದ್ದು, ರೈಲು ಡಿಕ್ಕಿಯಾಗಿ ಸತ್ತಿದ್ದಾನೆಂದು ಬಿಂಬಿಸಲು ಶವ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಇನ್ನು ವಿಷಯ ತಿಳಿದು ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಹಾಸನದಲ್ಲಿ ಡಾನ್ ಪಟ್ಟಕ್ಕಾಗಿ ರೌಡಿ ಶೀಟರ್ ಚೈಲ್ಡ್ ರವಿ ಬರ್ಬರ ಹತ್ಯೆ ಪ್ರಕರಣ; ನಾಲ್ವರು ಅಂದರ್​

ಜಮೀನಿನಲ್ಲಿ ಕೆಲಸ ಮಾಡ್ತಿದ್ದ ವೇಳೆ ಹಾವು ಕಚ್ಚಿ ರೈತ ಮಹಿಳೆ ಸಾವು

ಹಾವೇರಿ: ಜಿಲ್ಲೆಯ ಹಾನಗಲ್ ತಾಲೂಕಿನ ಮಾರನಬೀಡ್ ಗ್ರಾಮದ ಜಮೀನಿನೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ರೈತ ಮಹಿಳೆ ಸಾವನ್ನಪ್ಪಿದ್ದಾರೆ. ನಾಗವೇಣಿ ಗಂಜಿಗಟ್ಟಿ (52) ಮೃತ ಮಹಿಳೆ. ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹಾವು ಕಚ್ಚಿದ್ದು, ಕೂಡಲೇ ಆಕೆಯನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Wed, 10 July 24