ಬೆಂಗಳೂರಿನಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆ; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಕೃತ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇತ್ತೀಚೆಗಷ್ಟೇ ನಗರದ ಕೋರಮಂಗಲ ಪಿಜಿಯಲ್ಲಿದ್ದ ಯುವತಿಯನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಶೇಷಾದ್ರಿಪುರಂ ಠಾಣಾ ವ್ಯಾಪ್ತಿಯ ರಶಿಲ್ಲಾರ್ ಸ್ಟ್ರೀಟ್​ನಲ್ಲಿ ಹಾಡಹಗಲೇ ಯುವಕನೋರ್ವನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆ; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
ಬೆಂಗಳೂರಿನಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆ
Follow us
Shivaprasad
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 01, 2024 | 5:29 PM

ಬೆಂಗಳೂರು, ಆ.01: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ(Bengaluru) ಅಪರಾಧ ಕೃತ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ ಶೇಷಾದ್ರಿಪುರಂ ಠಾಣಾ ವ್ಯಾಪ್ತಿಯ ರಶಿಲ್ಲಾರ್ ಸ್ಟ್ರೀಟ್​ನಲ್ಲಿ ಹಾಡಹಗಲೇ ಯುವಕನೋರ್ವನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ. ಅಜಿತ್(27) ಕೊಲೆಯಾದವ. ಘಟನಾ ಸ್ಥಳಕ್ಕೆ ಕೇಂದ್ರ ವಿಭಾಗ ಡಿಸಿಪಿ ಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಶೇಷಾದ್ರಿಪುರ ಪೊಲೀಸ್ ಠಾಣೆ ರೌಡಿಶೀಟರ್ ಆಗಿದ್ದ ಅಜಿತ್, ಇಂದು(ಗುರುವಾರ) ಮಧ್ಯಾಹ್ನ 4:15 ರ ವೇಳೆಗೆ ಮನೆಯಿಂದ ಊಟ ಮುಗಿಸಿ ಹೊರಬಂದಿದ್ದ. ಈ ವೇಳೆ ಅಟ್ಯಾಕ್ ಮಾಡಿರುವ ಹಂತಕರ ಗ್ಯಾಂಗ್, ಮಾರಕಾಸ್ತ್ರ ಬೀಸಿದ ರಭಸಕ್ಕೆ ಅಜಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಧ್ಯ ಮೃತದೇಹ ಮರಣೋತ್ತರ ಪರೀಕ್ಷೆಗೆ ಬೋರಿಂಗ್​ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ:ಕಲಬುರಗಿ: ಮಹಿಳೆಯ ಬರ್ಬರ ಹತ್ಯೆ ಕೇಸ್ ಭೇಧಿಸಿದ ಖಾಕಿ ಪಡೆ! ಹಂತಕ ಸಿಕ್ಕಿಬಿದ್ದಿದ್ದೇಗೆ?

ಕೇಂದ್ರ ವಿಭಾಗದ ಡಿಸಿಪಿ ಹೇಳಿದ್ದಿಷ್ಟು

ಈ ಘಟನೆ ಕುರಿತು ಮಾತನಾಡಿದ, ‘ಕೇಂದ್ರ ವಿಭಾಗದ ಡಿಸಿಪಿ ಶೇಖರ್, ‘ಮೃತ ಅಜಿತ್ ಕುಮಾರ್ ಎಂಬ 27 ವಯಸ್ಸಿನ ವ್ಯಕ್ತಿಯ ಕೊಲೆ ನಡೆದಿದೆ. ಈತ ಕೊಲೆ ಪ್ರಕರಣದ ಆರೋಪಿಯಾಗಿದ್ದು, 2022ರಲ್ಲಿ ಕೊಲೆ ಕೇಸ್​ನಲ್ಲಿ ಜೈಲಿಗೆ ಹೋಗಿದ್ದ. ಅದೇ ವಿಚಾರಕ್ಕೆ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಬ್ಲಡ್ ಬ್ಯಾಂಕ್​ವೊಂದರಲ್ಲಿ ಇತ ಕೆಲಸ ಮಾಡ್ತಿದ್ದ. ಸದ್ಯ ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದರು.

ನಿಂತ ಲಾರಿಗೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ; ಮೂವರಿಗೆ ಗಾಯ

ಬಾಗಲಕೋಟೆ: ರಸ್ತೆ ಬದಿ ಕೆಟ್ಟು ನಿಂತ ಲಾರಿಗೆ ಗೂಡ್ಸ್ ವಾಹನ ಹಿಂಬದಿ ಡಿಕ್ಕಿ ಹೊಡೆದಿದ್ದು, ಬೊಲೆರೊ ವಾಹನದಲ್ಲಿದ್ದ ಮೂವರಿಗೆ ಗಾಯವಾದ ಘಟನೆ ಬಾಗಲಕೋಟೆ ತಾಲ್ಲೂಕಿನ ಮನ್ನಿಕಟ್ಟಿ ಕ್ರಾಸ್ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. ಬಾಗಲಕೋಟೆ ‌ಕೂಡಲಸಂಗಮ ಮಾರ್ಗದಲ್ಲಿ ಈ ದುರ್ಘಟನೆ ನಡೆದಿದ್ದು, ಬಾಗಲಕೋಟೆ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಬೊಲೆರೊ ವಾಹನ ಕ್ಲೀನರ್ ಮಂಜುನಾಥ್​ ಭಜಂತ್ರಿ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Thu, 1 August 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ