ಶಿವಮೊಗ್ಗದಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ
ಶಿವಮೊಗ್ಗ ನಗರದ ಗುಡ್ಡೆಕಲ್ ಫ್ಲೈಓವರ್ ಬಳಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ. ಹತ್ಯೆ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಎಸ್‌ಪಿ ಮಿಥುನ್ ಕುಮಾರ್ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.
ಶಿವಮೊಗ್ಗ, ನ.14: ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ (Murder) ಮಾಡಿದ ಘಟನೆ ಶಿವಮೊಗ್ಗ (Shivamogga) ನಗರದ ಗುಡ್ಡೆಕಲ್ ಫ್ಲೈಓವರ್ ಬಳಿ ನಡೆದಿದೆ. ಮಲ್ಲೇಶ್ (35) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಹತ್ಯೆ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಿವಮೊಗ್ಗದ ಕೋಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಮುಂದಿನ ಕ್ರಮ ಕೈಗೊಂಡಿದ್ದಾರೆ. ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಕೂಡ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಮಲ್ಲೇಶ್ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಇದನ್ನೂ ಓದಿ: ತಾಯಿಯನ್ನು ಕೊಂದವನನ್ನು ಕಲ್ಲಿನಿಂದ ಜಜ್ಜಿ ಹತ್ಯೆಗೈದ ಮಗ: 6 ವರ್ಷದ ಹಿಂದಿನ ಸೇಡು ತೀರಿಸಿಕೊಂಡ
ಇತ್ತೀಚೆಗಷ್ಟೇ, ಅಂದರೆ ಅಕ್ಟೋಬರ್ 20 ರಂದು ಸೈಯದ್ ರಜಿಖ್ (30) ಎಂಬಾತನನ್ನು ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ (Bhadravati) ಪಟ್ಟಣದಲ್ಲಿ ನಡೆದಿತ್ತು. ಹಳೆ ವೈಷಮ್ಯವೇ ಕೊಲೆಗೆ ಕಾರಣ ಎಂದು ತಿಳಿದಬಂದಿತ್ತು.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ