ಚಾಕು ಇರಿತದಿಂದ ಗಾಯಗೊಂಡಿದ್ದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪತಿ ಆಯೂಬ್ ಖಾನ್ ಸಾವು

ಬೆಂಗಳೂರಿನ ಟಿಪ್ಪುನಗರ ವಾರ್ಡ್​ನ ಮಾಜಿ ಕಾರ್ಪೊರೇಟರ್ ನಜೀಮಾ ಅವರ ಪತಿ ಆಯೂಬ್​​​ ಖಾನ್ ಗುರುವಾರ (ಜುಲೈ 14) ನಸುಕಿನಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟರು.

ಚಾಕು ಇರಿತದಿಂದ ಗಾಯಗೊಂಡಿದ್ದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪತಿ ಆಯೂಬ್ ಖಾನ್ ಸಾವು
ಅಯೂಬ್ ಖಾನ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 14, 2022 | 8:23 AM

ಬೆಂಗಳೂರು: ಚಾಕು ಇರಿತದಿಂದ ಗಾಯಗೊಂಡಿದ್ದ ಬೆಂಗಳೂರಿನ ಟಿಪ್ಪುನಗರ ವಾರ್ಡ್​ನ ಮಾಜಿ ಕಾರ್ಪೊರೇಟರ್ ನಜೀಮಾ ಅವರ ಪತಿ ಆಯೂಬ್​​​ ಖಾನ್ ಗುರುವಾರ (ಜುಲೈ 14) ನಸುಕಿನಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟರು. ನಿನ್ನೆಯಷ್ಟೇ ಆಯೂಬ್​ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಯೂಬ್​​ ಹೊಟ್ಟೆಯ ಭಾಗದಲ್ಲಿ ತೀವ್ರ ರಕ್ತಸ್ರಾವ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ಕೊಡಿಸಲಾಯಿತು. ಆದರೆ ಫಲಿಸದೆ ಆಯೂಬ್ ಅವರು ಮೃತಪಟ್ಟರು. ಆಸ್ತಿ ವಿಚಾರವಾಗಿ ಆಸ್ತಿ ವಿಚಾರವಾಗಿ ಆಯೂಬ್​ ಖಾನ್​ ಅಣ್ಣನ ಮಕ್ಕಳಿಂದ ಅಪರಾಧ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದರು. ಆಯೂಬ್ ಹೊಟ್ಟೆಯ ಭಾಗಕ್ಕೆ ದುಷ್ಕರ್ಮಿಗಳು ಇರಿದಿದ್ದರು. ಆರೋಪಿಗಳಿಗಾಗಿ ಚಾಮರಾಜಪೇಟೆ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

ಮೇಲ್ನೋಟಕ್ಕೆ ಆಸ್ತಿ ವಿವಾದವೇ ಜಗಳಕ್ಕೆ ಮುಖ್ಯ ಕಾರಣ ಎಂದು ಶಂಕಿಸಲಾಗಿದೆ. ರಕ್ತದ ಮಡುವಿನಲ್ಲಿದ್ದ ಅಯೂಬ್​ನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅಣ್ಣನ‌ ಮಗನೊಂದಿಗೆ ಪದೇ ಪದೇ ಜಗಳ ನಡೆಯುತ್ತಿತ್ತು. ನಿನ್ನೆ ಸಂಜೆ ಮನೆಗೆ ಹೋಗಿದ್ದ ಅಯೂಬ್ ಅಣ್ಣನ‌ ಮಗನಿಂದ ಜಗಳ ನಡೆದಿತ್ತು. ಜಗಳ ವಿಕೋಪಕ್ಕೆ ಹೋಗಿ ಚಾಕುವಿನಿಂದ ಹೊಟ್ಟೆಗೆ ಇರಿಯಲಾಗಿದೆ ಎಂದು ತಿಳಿದು ಬಂದಿದೆ.

ಚಾಮರಾಜಪೇಟೆ ಠಾಣೆಯಲ್ಲಿ ಎಫ್​ಐಆರ್

ಚಾಕು ಇರಿತದಿಂದ ಮೃತಪಟ್ಟ ಆಯೂಬ್​​​ ಖಾನ್ ಕೊಲೆಗೆ ಸಂಬಂಧಿಸಿಂತೆ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಪತ್ನಿ ನಜೀಮಾ ನೀಡಿದ ದೂರಿನ ಮೇರೆಗೆ ಎಫ್​ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕಾಂಪೌಂಡ್ ಗೋಡೆ ಕುಸಿದು ಇಬ್ಬರ ಸಾವು

ಬೆಂಗಳೂರಿನ ದೀಪಾಂಜಲಿ ನಗರದ ಕಿಮ್ಕೊ ಜಂಕ್ಷನ್ ಬಳಿ ಶಿಥಿಲಾವಸ್ಥೆಯಲ್ಲಿದ್ದ ಕಾಂಪೌಂಡ್​ ಗೋಡೆ ಕುಸಿದು ಬಿದ್ದು ಬಾಲ(35), ರಾಜಮಣಿ(30) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತಪಟ್ಟ ಬಾಲ ಮತ್ತು ರಾಜಮಣಿ ಸ್ನೇಹಿತರ ಜೊತೆ ಬಾರ್​ಗೆ ಹೋಗಿದ್ದರು. ಬಾರ್​ನಿಂದ ಹೊರಬಂದು ಮೂತ್ರ ವಿಸರ್ಜನೆಗೆ ತೆರಳಿದ್ದಾಗ ದುರ್ಘಟನೆ ನಡೆದಿದೆ. ಘಟನೆ ವೇಳೆ ಬಾಲ, ರಾಜಮಣಿ ಜೊತೆಗಿದ್ದ ಮೂವರು ಸ್ಥಳದಿಂದ ಪರಾರಿಯಾಗಿದ್ದಾರೆ. ಪಿಲ್ಲರ್​ನ ಕಬ್ಬಿಣ ತೆಗೆಯುವಾಗ ಕಾಂಪೌಂಡ್ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು ಪರಾರಿಯಾಗಿದ್ದ ಮೂವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ

Published On - 6:43 am, Thu, 14 July 22