AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಮೇಯರ್ ಸಂಪತ್ ರಾಜ್ ಪರಾರಿ: ಬ್ಯಾಪ್ಟಿಸ್ಟ್ ಅಸ್ಪತ್ರೆಯ 6 ಮಂದಿಗೆ CCB ಡ್ರಿಲ್

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಮೇಯರ್ ಸಂಪತ್ ರಾಜ್ ಎಸ್ಕೇಪ್ ಆಗಿದ್ದು, ಈ ಸಂಬಂಧ ಸಿಸಿಬಿ ಪೊಲೀಸರು ಅವರ ನಿವಾಸಕ್ಕೆ ಎರಡು ನೋಟಿಸ್ ಜಾರಿಮಾಡಿದ್ದಾರೆ. ಈ ಮಧ್ಯೆ, ಸಂಪತ್ ರಾಜ್ ಬಗ್ಗೆ ಪೂರ್ವ ಸೂಚನೆ ನೀಡಿದ್ದರೂ, ಅವರು ಚಿಕಿತ್ಸೆ ಪಡೆಯುತ್ತಿದ್ದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಆಡಳಿತ ಮಂಡಳಿಯವರು ಅವರ ಪರಾರಿಗೆ ನೆರವಾಗಿದ್ದಾರೆ. ಅದ್ರೆ ಅಕ್ಟೋಬರ್ 29ರಂದು ರಾತ್ರೋರಾತ್ರಿ ಸಂಪತ್ ರಾಜ್ ಡಿಸ್ಚಾರ್ಜ್‌ ಆಗಿ ಕಣ್ಮರೆಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ. […]

ಮಾಜಿ ಮೇಯರ್ ಸಂಪತ್ ರಾಜ್ ಪರಾರಿ: ಬ್ಯಾಪ್ಟಿಸ್ಟ್ ಅಸ್ಪತ್ರೆಯ 6 ಮಂದಿಗೆ CCB ಡ್ರಿಲ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 02, 2020 | 11:03 AM

Share

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಮೇಯರ್ ಸಂಪತ್ ರಾಜ್ ಎಸ್ಕೇಪ್ ಆಗಿದ್ದು, ಈ ಸಂಬಂಧ ಸಿಸಿಬಿ ಪೊಲೀಸರು ಅವರ ನಿವಾಸಕ್ಕೆ ಎರಡು ನೋಟಿಸ್ ಜಾರಿಮಾಡಿದ್ದಾರೆ. ಈ ಮಧ್ಯೆ, ಸಂಪತ್ ರಾಜ್ ಬಗ್ಗೆ ಪೂರ್ವ ಸೂಚನೆ ನೀಡಿದ್ದರೂ, ಅವರು ಚಿಕಿತ್ಸೆ ಪಡೆಯುತ್ತಿದ್ದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಆಡಳಿತ ಮಂಡಳಿಯವರು ಅವರ ಪರಾರಿಗೆ ನೆರವಾಗಿದ್ದಾರೆ. ಅದ್ರೆ ಅಕ್ಟೋಬರ್ 29ರಂದು ರಾತ್ರೋರಾತ್ರಿ ಸಂಪತ್ ರಾಜ್ ಡಿಸ್ಚಾರ್ಜ್‌ ಆಗಿ ಕಣ್ಮರೆಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರುಗಳಿಗೆಲ್ಲ ಸಿಸಿಬಿ ನೋಟಿಸ್ ನೀಡಿತ್ತು.

ಸ್ಪಷ್ಟನೆ ನೀಡಲಿರುವ ಆಸ್ಪತ್ರೆಯ ಆಡಳಿತ ಮಂಡಳಿ ಅದರಂತೆ ಇಂದು ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರು, ಆಡಳಿತ ಮಂಡಳಿಯವರು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿಂದೆ ಡಿಸ್ಚಾರ್ಜ್‌ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದರೂ ಬ್ಯಾಪ್ಟಿಸ್ಟ್ ಆಸ್ಪತ್ರೆ ನಿರ್ಲಕ್ಷ್ಯ ವಹಿಸಿದರು ಎಂದು ತಿಳಿದುಬಂದಿದೆ. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಅಸ್ಪತ್ರೆಗೆ ಕಾರಣ ಕೇಳಿ ನೋಟಿಸ್ ನೀಡಿದ್ದರು. ಸಿಸಿಬಿ ನೋಟಿಸ್ ಹಿನ್ನೆಲೆಯಲ್ಲಿ ಚಾಮರಾಜಪೇಟೆಯ ಸಿಸಿಬಿ ಕಚೇರಿಯಲ್ಲಿ ಅಸ್ಪತ್ರೆಯ ಆರು ಮಂದಿ ವಿಚಾರಣೆಗೆ ಹಾಜರಾಗಿದ್ದಾರೆ.

Published On - 10:58 am, Mon, 2 November 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು