ಕಿತವಾಡ ಫಾಲ್ಸ್​ಗೆ ಬಿದ್ದು ನಾಲ್ವರು ಯುವತಿಯರ ಸಾವು, ಓರ್ವಳ ಸ್ಥಿತಿ ಗಂಭೀರ

ಬೆಳಗಾವಿಯಿಂದ ಕಿತವಾಡ ಫಾಲ್ಸ್‌ಗೆ ಪ್ರವಾಸಕ್ಕೆ ಹೋಗಿದ್ದ ಯುವತಿಯರ ಪೈಕಿ ಐವರು ಫಾಲ್ಸ್​ಗೆ ಬಿದ್ದು ನಾಲ್ವರು ಸಾವನ್ನಪ್ಪಿದರೆ ಓರ್ವಳ ಸ್ಥಿತಿ ಗಂಭೀರವಾಗಿದೆ.

ಕಿತವಾಡ ಫಾಲ್ಸ್​ಗೆ ಬಿದ್ದು ನಾಲ್ವರು ಯುವತಿಯರ ಸಾವು, ಓರ್ವಳ ಸ್ಥಿತಿ ಗಂಭೀರ
ಕಿತವಾಡ ಫಾಲ್ಸ್​ಗೆ ಬಿದ್ದು ನಾಲ್ವರು ಯುವತಿಯರ ಸಾವು, ಓರ್ವಳ ಸ್ಥಿತಿ ಗಂಭೀರ
Follow us
TV9 Web
| Updated By: Rakesh Nayak Manchi

Updated on:Nov 26, 2022 | 4:21 PM

ಬೆಳಗಾವಿ: ಬೆಳಗಾವಿಯಿಂದ ಕಿತವಾಡ ಫಾಲ್ಸ್‌ಗೆ (Kitwad falls) ಪ್ರವಾಸಕ್ಕೆ ಹೋಗಿದ್ದ ಯುವತಿಯರ ಪೈಕಿ ಐವರು ಫಾಲ್ಸ್​ಗೆ ಬಿದ್ದು ನಾಲ್ವರು ಸಾವನ್ನಪ್ಪಿದರೆ ಓರ್ವಳ ಸ್ಥಿತಿ ಗಂಭೀರವಾಗಿದೆ. ಯುವತಿಯರ ಗುಂಪೊಂದು ಬೆಳಗಾವಿಯಿಂದ ಫಾಲ್ಸ್ ನೋಡುವ ನಿಟ್ಟಿನಲ್ಲಿ ಪ್ರವಾಸ ಕೈಗೊಂಡಿದ್ದರು. ಫಾಲ್ಸ್ ವೀಕ್ಷಣೆ ವೇಳೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಐವರು ಯುವತಿಯರು ಕಾಲು ಜಾರಿ ಫಾಲ್ಸ್​ಗೆ ಬಿದ್ದಿದ್ದಾರೆ. ಘಟನೆಯಲ್ಲಿ ಉಜ್ವಲ್ ನಗರ ಆಸೀಯಾ ಮುಜಾವರ್(17), ಅನಗೋಳದ ಕುದ್‌ಶೀಯಾ ಹಾಸ್‌ಂ ಪಟೇಲ್(20), ಝಟ್‌ಪಟ್ ಕಾಲೋನಿಯ ರುಕ್ಕಶಾರ್ ಭಿಸ್ತಿ(20), ತಸ್ಮಿಯಾ(20) ಸಾವನ್ನಪ್ಪಿದ್ದು, ಮತ್ತೋರ್ವಳ ಸ್ಥಿತಿ ಗಂಭೀರವಾಗಿದೆ.

ಕರ್ನಾಟಕ ಮಹಾರಾಷ್ಟ್ರ ಗಡಿಭಾಗದಲ್ಲಿ ಇರುವ ಕಿತವಾಡ ಫಾಲ್ಸ್​ಗೆ ಬೆಳಗಾವಿ ಕಾಮತ್​ಗಲ್ಲಿಯ ಮದರಸಾದಲ್ಲಿ ಓದುತ್ತಿದ್ದ 40 ಯುವತಿಯರು ಹೋಗಿದ್ದಾರೆ. ಈ ವೇಳೆ ಒಬ್ಬರಿಗೊಬ್ಬರು ಕೈ ಹಿಡಿದು ಸೆಲ್ಫಿ ಫೋಟೋ ತಗೆದುಕೊಳ್ಳುತ್ತಿದ್ದರು. ಈ ವೇಳೆ ಆಯ ತಪ್ಪಿ ಫಾಲ್ಸ್ ಮೇಲಿಂದ ಬಿದ್ದು ನಾಲ್ವರು ಸಾವನ್ನಪ್ಪಿದ್ದು, ಓರ್ವ ಯುವತಿಯ ಸ್ಥಿತಿ ಚಿಂತಾಜನಕವಾಗಿದೆ. ಈಕೆಯನ್ನು ಕೂಡಲೇ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಬಳಿ ಮೃತ ಯುವತಿಯರ ಕುಟುಂಸ್ಥರ ಕಣ್ಣೀರು ಸುರಿಸುತ್ತಿದ್ದಾರೆ.

ಇದನ್ನೂ ಓದಿ: Supreme Bail: 12 ಕೋಟಿ ವಂಚನೆ -ಸುಪ್ರೀಂ ಕೋರ್ಟ್ ಗೆ ಹೋಗಿ ಜಾಮೀನು ತಂದ ಡಿಸಿಸಿ ಬ್ಯಾಂಕ್ ಜವಾನ!

ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

ಕಲಬುರಗಿ: ಐದು ವರ್ಷದ ಬಾಲಕಿ ಮೇಲೆ 40 ವರ್ಷದ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಕಲೇಟ್ ಕೊಡಿಸುವುದಾಗಿ ಆಸೆಯೊಡ್ಡಿ ಬಾಲಕಿಯನ್ನು ಕೃಷಿ ಜಮೀನಿಗೆ ಕರೆದುಕೊಂಡು ಹೋಗಿದ್ದ ದುರುಳ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಜೋರಾಗಿ ಕಿರುಚಾಡಿದ್ದಾಳೆ. ಬೊಬ್ಬೆ ಶಬ್ದ ಕೇಳಿ ಜನರು ಓಡೋಡಿ ಬಂದು ಜಮೀನನ್ನು ಸುತ್ತುವರೆದು ಕಾಮುಕನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡು ವಾಡಿ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:43 pm, Sat, 26 November 22

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್