AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕಾಸಿನ ವಿಚಾರಕ್ಕೆ ಗಲಾಟೆ: ಅಂಗನವಾಡಿಯಲ್ಲಿ ಚಾಕು ಇರಿದು ಯುವಕನ ಬರ್ಬರ ಹತ್ಯೆ

ಬೆಳಗಾವಿ ಜಿಲ್ಲೆಯ ಕುಡಚಿ ಪಟ್ಟಣದಲ್ಲಿ ಹಣಕಾಸಿನ ವಿಚಾರವಾಗಿ ನಡೆದ ಜಗಳದಲ್ಲಿ ಓರ್ವ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಅಂಗನವಾಡಿ ಕೇಂದ್ರದಲ್ಲಿ ಘಟನೆ ನಡೆದಿದೆ. ಕೊಲೆ ಬಳಿಕ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

ಹಣಕಾಸಿನ ವಿಚಾರಕ್ಕೆ ಗಲಾಟೆ: ಅಂಗನವಾಡಿಯಲ್ಲಿ ಚಾಕು ಇರಿದು ಯುವಕನ ಬರ್ಬರ ಹತ್ಯೆ
ಯಾಸೀರ್, ರೋಹಿತ್ ಜಾಧವ್
Sahadev Mane
| Edited By: |

Updated on:Jun 22, 2025 | 10:50 AM

Share

ಬೆಳಗಾವಿ, ಜೂನ್​ 22: ಹಣಕಾಸಿನ ವಿಚಾರಕ್ಕೆ ನಡೆದ ಗಲಾಟೆ ಕೊನೆಗೆ ಓರ್ವನ ಕೊಲೆಯಲ್ಲಿ (kill) ಅಂತ್ಯವಾಗಿರುವಂತಹ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ (Kudachi) ಪಟ್ಟಣದ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ. ಯಾಸೀರ್ ಜಾತಗಾರ(24) ಕೊಲೆಯಾದ ಯುವಕ. ಯಾಸೀರ್ ಕೊಲೆಗೈದು ರೋಹಿತ್ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಎಸ್​ಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಣಕಾಸಿನ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿದೆ. ಬಳಿಕ ಚಾಕುವಿನಿಂದ ಇರಿದು ಯಾಸೀರ್​ನನ್ನ ರೋಹಿತ್ ಕೊಲೆ ಮಾಡಿದ್ದಾನೆ. ಸುಮಾರು ಹತ್ತು ಜನರಿಂದ ಕೊಲೆ‌ ಮಾಡಿರುವ ಆರೋಪ ಕೇಳಿಬಂದಿದ್ದು, ಮೃತನ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಚೆಕ್​​ಡ್ಯಾಂನಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು

ಚೆಕ್​​ಡ್ಯಾಂನಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವನ್ನಪ್ಪಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದ ಬಳಿ ನಡೆದಿದೆ. ಅರವಿಂದ(13) ಮತ್ತು ಹನುಮಂತ(13) ಮೃತ ಬಾಲಕರು.

ಇದನ್ನೂ ಓದಿ: ಕೌಟುಂಬಿಕ ಕಲಹಕ್ಕೆ ಯುವತಿ ಆತ್ಮಹತ್ಯೆ: ರೈತ ಮಹಿಳೆ ಎಂದು ಐದು ಲಕ್ಷ ರೂ ಪರಿಹಾರ ಪಡೆದ ಕುಟುಂಬಸ್ಥರು

ಚೆಕ್​ಡ್ಯಾಂನಲ್ಲಿ ಈಜುವಾಗ ನೀರಿನ ಆಳಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಎಂಟನೇ ತರಗತಿಯಲ್ಲಿ ಓದುತ್ತಿದ್ದರು. ಹೊಸಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾಂಗ್​ನಿಂದ ದಾಳಿ: ಕೊಲೆ

ಶಿವಮೊಗ್ಗದ ಬೊಮ್ಮನಕಟ್ಟೆಯ ಕೆರೆ ಏರಿಯಾದಲ್ಲಿ ಲಾಂಗ್​ನಿಂದ ದಾಳಿ ಮಾಡಿ ಓರ್ವ ವ್ಯಕ್ತಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಅವಿನಾಶ್(32) ಕೊಲೆ ಆದ ವ್ಯಕ್ತಿ. ತಮಿಳುಗಿರಿ ಕೊಲೆ ಪ್ರಕರಣದ ಆರೋಪಿಯಾಗಿದ್ದ ಅವಿನಾಶ್, ಒಂದು ವರ್ಷದ ಹಿಂದೆ ಜಾಮೀನಿನ ಮೇಲೆ ಹೊರಗೆ ಬಂದಿದ್ದ. ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಖಾಸಗಿ ಶಿಕ್ಷಣ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ‌ತಾಲೂಕಿನ‌ ಅರ್ಚಕರಹಳ್ಳಿ‌ ಗ್ರಾಮದ ಬಳಿಯ ಹಳೇ ಬೆಂಗಳೂರು ಮೈಸೂರು ‌ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಡ್ರಂಕ್ ಆ್ಯಂಡ್ ಡ್ರೈವ್, ಅತಿವೇಗದ ಚಾಲನೆಯಿಂದ ಅಪಘಾತ: ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ಸಾವು

ರಾಮನಗರ ತಾಲೂಕಿನ ಮೂಡಲಹಳ್ಳಿ ಗ್ರಾಮದ ಅಮ್ರಿತ್ ಗೌಡ(20) ಮೃತ ಬೈಕ್ ಸವಾರ. ಈ ಸಂಬಂಧ ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:34 am, Sun, 22 June 25