ವೃದ್ಧ ದಂಪತಿಯ ಮೇಲೆ ಕುಡಗೋಲು, ಬಂದೂಕು ಹಿಡಿದು ಹಲ್ಲೆಗೆ ಯತ್ನಿಸಿದ ಸಾಕು ಮಗ

ಗೋಕಾಕ್ ತಾಲೂಕಿನ ಬಡಿಗವಾಡದಲ್ಲಿ ವೃದ್ಧ ದಂಪತಿಯ ಮೇಲೆ ಅವರ ದತ್ತು ಪುತ್ರ ಸಂಜು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಒಂದು ಎಕರೆ ಜಮೀನಿನ ವಿವಾದದಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ. ಕುಡಗೋಲು ಮತ್ತು ಬಂದೂಕನ್ನು ಬಳಸಿ ಹಲ್ಲೆಗೆ ಯತ್ನಿಸಿದ್ದಾನೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವೃದ್ಧ ದಂಪತಿಯ ಮೇಲೆ ಕುಡಗೋಲು, ಬಂದೂಕು ಹಿಡಿದು ಹಲ್ಲೆಗೆ ಯತ್ನಿಸಿದ ಸಾಕು ಮಗ
ವೃದ್ಧ ದಂಪತಿಯ ಮೇಲೆ ಕುಡಗೋಲು, ಬಂದೂಕು ಹಿಡಿದು ಹಲ್ಲೆಗೆ ಯತ್ನಿಸಿದ ಸಾಕು ಮಗ
Follow us
Sahadev Mane
| Updated By: ಗಂಗಾಧರ​ ಬ. ಸಾಬೋಜಿ

Updated on: Nov 21, 2024 | 4:42 PM

ಬೆಳಗಾವಿ, ನವೆಂಬರ್​ 21: ವೃದ್ಧ ದಂಪತಿಯ ಮೇಲೆ ಮಗನಿಂದಲೇ (Son) ಕುಡಗೋಲು, ಬಂದೂಕು ಹಿಡಿದು ಹಲ್ಲೆಗೆ ಯತ್ನಿಸಿರುವಂತಹ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನ ಬಡಿಗವಾಡ ಗ್ರಾಮದಲ್ಲಿ ನಡೆದಿದೆ. ತಂದೆ ಲಕ್ಕಪ್ಪ ಪಾವಡಿ ಮೇಲೆ ಸಾಕು ಮಗ ಸಂಜುವಿನಿಂದ ಹಲ್ಲೆಗೆ ಯತ್ನಿಸಲಾಗಿದೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ.

ಕಳೆದ ಒಂದು ತಿಂಗಳ ಹಿಂದೆ ನಡೆದ್ದ ಗಲಾಟೆ ವಿಡಿಯೋ ಈಗ ವೈರಲ್ ಆಗಿದೆ. ಮಕ್ಕಳಿಲ್ಲ ಎನ್ನುವ‌ ಕಾರಣಕ್ಕೆ ಸಂಬಂಧಿ ಮಗನನ್ನು ದಂಪತಿ ಸಾಕಿದ್ದರು. ಒಂದು ಎಕರೆ ಜಮೀನು ತನ್ನ ಹೆಸರಿಗೆ ಬರೆಸಿಕೊಳ್ಳಲು ಯತ್ನಿಸಿದ್ದಾನೆ. ಇದಕ್ಕೆ ತಂದೆ ಲಕ್ಕಪ್ಪ ಪಾವಡಿ ವಿರೋಧಿಸಿದ್ದಾರೆ. ಹೀಗಾಗಿ ಕೋಪಗೊಂಡು ಹಲ್ಲೆಗೆ ಯತ್ನಿಸಲಾಗಿದೆ.

ಗುಂಡಿಗೆ ಯುವಕ ಸಾವು

ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಹೊರ ವಲಯದಲ್ಲಿ ತಡರಾತ್ರಿ ಗುಂಡಿನ ದಾಳಿಗೆ ಯುವಕನೊಬ್ಬ ಸಾವನ್ನಪ್ಪಿರುವಂತಹ ಘಟನೆ ಇತ್ತಿಚೆಗೆ ನಡೆದಿತ್ತು. ಗ್ರಾಮದ ಅಲ್ತಾಫ್ ಮಕಾಂದರ್(30) ಮೃತ ಯುವಕ. ಘಟನೆಗೆ ಅಕ್ರಮ ಮರಳು ದಂಧೆ ಕಾರಣವಾಯಿತಾ ಅಥವಾ ರಾತ್ರಿ ಕಾಡು ಪ್ರಾಣಿಗಳ ಭೇಟೆ ಕಾರಣ ಎಂಬ ಬಗ್ಗೆ ಸಂಶಯ ವ್ಯಕ್ತವಾಗಿತ್ತು.

ಇದನ್ನೂ ಓದಿ: ಬಿಎಂಟಿಸಿ ಚಾಲಕನ ಮೇಲೆ ಹಲ್ಲೆ: ಮೂರು ತಿಂಗಳಲ್ಲಿ 9ನೇ ಪ್ರಕರಣ

ಗ್ರಾಮದ ಅಲ್ತಾಫ್ ಮಕಾಂದರ್ ಯುವಕನ ಎದೆಗೆ ಗುಂಡು ತಗುಲಿತ್ತು. ಹಲಸಿಯಿಂದ ಬೀಡಿ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಹಳ್ಳಕ್ಕೆ ಅಡ್ಡಲಾಗಿ ಬ್ರಿಡ್ಜ್ ಕಟ್ಟಲಾಗಿತ್ತು. ಈ ಬ್ರಿಡ್ಜ್ ಮೇಲೆಯೇ ತಡರಾತ್ರಿ ರಕ್ತದ ಕೋಡಿ ಹರಿದಿದೆ. ರಾತ್ರಿ 12 ರಿಂದ 2 ಗಂಟೆ ಮಧ್ಯದಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ.

ಜೀವನದಲ್ಲಿ ಜಿಗುಪ್ಸೆ ಖಾಸಗಿ ಶಿಕ್ಷಣ ಸಂಸ್ಥೆಯ ನೌಕರ ಆತ್ಮಹತ್ಯೆ

ಇನ್ನು ಗದಗ ನಗರದ ಒಕ್ಕಲಗೇರಿ ಪ್ರದೇಶದ ಮನೆಯಲ್ಲಿ ಡಿಜಿಎಂ ಆಯುರ್ವೇದ ಕಾಲೇಜಿನ ನೌಕರ ಮೊಹಮ್ಮದ್​ ಸೈಫ್ ಅಲಿ(30) ನೇಣಿಗೆ ಶರಣಾಗಿರುವಂತಹ ಘಟನೆ ನಡೆದಿದೆ. ಮೃತ ಮೊಹಮ್ಮದ್​ ಸೈಫ್ ಅಲಿ ಮೂಲತಃ‌ ಬೆಳಗಾವಿ ಜಿಲ್ಲೆಯ ಸಂಕೇಶ್ವರ ನಿವಾಸಿ.

ಇದನ್ನೂ ಓದಿ: ಬೆಂಗಳೂರು: ಕಳ್ಳತನ ಮಾಡಿ 15 ದಿನಗಳಲ್ಲಿ 12 ಸಾವಿರ ಕಿ.ಮೀ ಪ್ರಯಾಣ….!

ಅನಾರೋಗ್ಯದಿಂದ ಇತ್ತೀಚೆಗೆ ತಂಗಿಯ ಮಗಳು ಮೃತಪಟ್ಟಿದ್ದಳು. ಮಗುವಿನ ಸಾವಿನಿಂದ ತೀವ್ರವಾಗಿ ಮೊಹಮ್ಮದ್ ಸೈಫ್ ನೊಂದಿದ್ದರು. ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ